ಔರಾದ್‌ | ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ : ನಾಗೇಶ ಮುಕರಂಬೆ

Date:

ಭಾರತದ ಸಂವಿಧಾನ ಅತ್ಯಂತ ಪವಿತ್ರವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯದಂತೆ ಮುನ್ನಡೆಯಬೇಕು ಎಂದು ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹೇಳಿದರು.

ಶೆಂಬೆಳ್ಳಿ ಗ್ರಾಮ ಪಂಚಾಯತ್‌ ವತಿಯಿಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಗಣರಾಜೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼದೇಶ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ಸಂವಿಧಾನ ಅತ್ಯಂತ ಮಹತ್ವದಾಗಿದೆʼ ಎಂದರು.

ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿ, ʼಜಗತ್ತಿನಲ್ಲಿ ಭಾರತ ದೇಶ ಅತ್ಯಂತ ವೈವಿಧ್ಯಮಯ ಕಲೆ, ಸಂಸ್ಕೃತಿ, ಪರಂಪರೆ ಹೊಂದಿದೆ. ಭಾರತ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಭಾರತೀಯ ಸಂವಿಧಾನವು ಎಲ್ಲರಿಗೂ ಸಮಾನತೆ ಹಕ್ಕು ನೀಡಿದೆ. ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಪೂರೈಸೋಣʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಬಾಲಾಜಿ ಕುಂಬಾರ, ಘಾಳೆಪ್ಪಾ ಡೋಣೆ, ರಾಜಕುಮಾರ ಶಂಕರ, ಪ್ರಭು ವಾಸುದೇವ, ಗುಂಡಪ್ಪ ಮಡಕೆ, ರೇವಣಸಿದ್ದಪ್ಪಾ ಹಡಪದ, ವೈಜಿನಾಥ ಮಾದಪ್ಪಾ, ರವಿಕುಮಾರ ಗಣಪತಿ, ಅಮೂಲ್ಯ, ರಾಹುಲ್‌ ಉಪ್ಪಾರ, ಈರಮ್ಮ ವಾಸುದೇವ ಸೇರಿದಂತೆ ಇತರರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

ಇದನ್ನೂ ಓದಿ : ಬೀದರ್‌ | 77ನೇ ಗಣರಾಜ್ಯೋತ್ಸವ ದಿನ : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ

ಗ್ರಾಮ ಪಂಚಾಯತ್‌ ಅಧ್ಯಕ್ಷೆ ರೇಣುಕಾ ಅಂಬಾದಾಸ, ಉಪಾಧ್ಯಕ್ಷೆ ಸುಜಾತಾ ಮಚೇಂದ್ರ, ಗ್ರಾಮದ ಮುಖಂಡ ನಾಗಶೆಟ್ಟಿ ಗಾದಗೆ, ಶಾಲಾ ಮುಖ್ಯಶಿಕ್ಷಕಿ ಜ್ಯೋತಿ ಪಾಟೀಲ್‌,‌ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಶರಣಪ್ಪಾ ಮಿಠಾರೆ, ಕರವಸೂಲಿಗಾರ ಸುನೀಲ್ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...