ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಹಾಗೂ ದ್ವಿತೀಯ ದರ್ಜೆ ಸಹಾಯಕ ಗುರುಲಿಂಗಯ್ಯ ಸ್ವಾಮಿ ಅವರ ಸೇವಾ ನಿವೃತ್ತಿ ಸಮಾರಂಭ ನಡೆಯಲಿದೆ.
ಶಾಲೆಯ ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಹೈತೈಷಿಗಳ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದ್ದು, ಇದೇ ಸಂದರ್ಭದಲ್ಲಿ ಶಾಲೆಯ 10ನೇ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸುವರು, ಹೆಡಗಾಪುರ ಸಂಸ್ಥಾನ ಮಠದ ದ್ವಾರಕಲಿಂಗ ಶಿವಚಾರ್ಯ ನೇತ್ರತ್ವ ವಹಿಸುವರು.
ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾಜಿರಾವ್ ಬೊರಾಳೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಲೆಯ ನಿವೃತ್ತ ಮುಖ್ಯಗುರು ಮಲ್ಲಿಕಾರ್ಜುನ ಹಿಪ್ಪಳಗಾಂವೆ, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ,ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಉಪಸ್ಥಿತರಿರುವರು. ಶಾಲೆಯ ಮುಖ್ಯ ಮನೋಹರ ಬಿರಾದರ್ ಪ್ರಾಸ್ತಾವಿಕ ನುಡಿ ನುಡಿಯಲಿದ್ದಾರೆ.
ಇದನ್ನೂ ಓದಿ : ಬೀದರ್ | ಪಶು ವಿವಿ 15ನೇ ಘಟಿಕೋತ್ಸವ : 16 ಚಿನ್ನದ ಪದಕ ಮುಡಿಗೇರಿಸಿಕೊಂಡ ʼಖುಷಿʼ
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಅನುಭವ ಮಂಟಪದಿಂದ ಗ್ರಾಮದಲ್ಲಿ ಸೇವಾ ನಿವೃತ್ತರಿಗೆ ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಮಾಜಿಕ ಹೋರಾಟಗಾರರು, ಸಾರ್ವಜನಿಕರು ಭಾಗವಹಿಸಲಿದ್ದಾರೆ.





