ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ : ಲಾಂಛನ ಬಿಡುಗಡೆ

Date:

ಔರಾದ್ ಪಟ್ಟಣದಲ್ಲಿ ನಡೆಸಲು ಉದ್ದೇಶಿಸಿರುವ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಲೋಕಾರ್ಪಣೆ ಮಾಡಿದರು.

ಪಟ್ಟಣದ ಸರ್ಕಾರಿ ಆದರ್ಶ ಶಾಲೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ʼಫೆಬ್ರವರಿ 4ರಂದು ಗಡಿ ತಾಲೂಕಿನಲ್ಲಿ ನಡೆಯಲಿರುವ ಸಮ್ಮೇಳನವು ಮಾದರಿಯಾಗುವ ರೀತಿಯಲ್ಲಿ ರೂಪಿಸುವ ಸಂಕಲ್ಪವನ್ನು ಎಲ್ಲರೂ ಮಾಡಬೇಕು. ಸಮ್ಮೇಳನ ಯಶಸ್ವಿಯಾಗಲಿʼ ಎಂದು ಹಾರೈಸಿದರು.

WhatsApp Image 2026 01 20 at 4.37.50 PM

ಕನ್ನಡ ಸಂರಕ್ಷಣಾ ಸಮಿತಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ʼನಾಡಿನ ಭಾಷೆ, ಜನಪದ ಪರಂಪರೆ ಹಾಗೂ ಸಾಹಿತ್ಯದ ಬೆಳವಣಿಗೆಗೆ ಇಂತಹ ಸಮ್ಮೇಳನಗಳು ಜೀವಾಳವಾಗಿವೆ. ಔರಾದ್ ಸಾಹಿತ್ಯ ಸಮ್ಮೇಳನವು ಹೊಸ ಚಿಂತನೆ, ವಿನೂತನ ಕಾರ್ಯಕ್ರಮಗಳು ಮತ್ತು ಸಾಹಿತ್ಯಾಸಕ್ತರ ವಿಶಾಲ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ತಾಲೂಕಾಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿ, ʼಔರಾದ್ ತಾಲೂಕಿನ ಏಳನೇ ಸಾಹಿತ್ಯ ಸಮ್ಮೇಳನವನ್ನು ಮಾದರಿಯಾಗುವ ರೀತಿಯಲ್ಲಿ ಯಶಸ್ವಿಗೊಳಿಸೋಣ. ಈಗಾಗಲೇ ಶೇ.70ರಷ್ಟು ಸಮ್ಮೇಳನದ ಸಿದ್ಧತೆ ಮಾಡಲಾಗಿದೆ. ಆಹ್ವಾನ ಪತ್ರಿಕೆ ಸಿದ್ದಗೊಳ್ಳುತ್ತಿದೆ. ಸಮ್ಮೇಳನದ ವಿವಿಧ ಸಮಿತಿಗಳು ರಚನೆಯಾಗಿದ್ದು, ಆಯಾ ಸಮಿತಿಗಳನ್ನು ಹಂಚಿಕೆ ಮಾಡಲಾಗಿದೆ. ಸಮ್ಮೇಳನ ನಡೆಯುವ ಸ್ಥಳ ಗೊತ್ತು ಮಾಡಲಾಗಿದೆ. ಶಾಸಕ ಪ್ರಭು ಚವ್ಹಾಣ ಅವರನ್ನು ಸರ್ವಾನುಮತದಿಂದ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಗುತ್ತಿದೆʼ ಎಂದು ಮಾಹಿತಿ ನೀಡಿದರು.

ಈ ವೇಳೆ ಡಿಡಿಪಿಐ ಎಸ್.ಜಿ ಸುರೇಶ, ಬಿಇಒ ಬಿಜೆ ರಂಗೇಶ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಕಾಂತ ನಿರ್ಮಳೆ, ಎಸ್ಸಿ ಎಸ್ಟಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಡೋಂಗರೆ ಸೇರಿದಂತೆ ಪ್ರಮುಖರಾದ ಗುರುನಾಥ ದೇಶಮುಖ, ಸಂಜೀವಕುಮಾರ ಶೆಟಕಾರ, ಬಸವರಾಜ ಶೆಟಕಾರ, ಮಾದೇವ ಚಿಟಗೀರೆ, ಅಶೋಕ ಶೆಂಬೆಳ್ಳಿ, ಅಂಬಾದಾಸ ನಳನೆ, ಸಂಜುಕುಮಾರ ಬಿರಾದಾರ್, ಮಹಾದೇವ ಶಿಂಧೆ, ಫೈಯಾಜ್, ಲೋಕೇಶ, ರಾಜಕುಮಾರ ಹಲ್ಮಡಗೆ, ರವಿ ಡೋಳೆ ಸೇರಿದಂತೆ ಮತ್ತಿತರರಿದ್ದರು.

ಇದನ್ನೂ ಓದಿ : ಬೀದರ್‌ | ಸೂರಿಗಾಗಿ ಈ ಅಲೆಮಾರಿ ಜನಾಂಗ ಇನ್ನೆಷ್ಟು ವರ್ಷ ಹೋರಾಟ ನಡೆಸಬೇಕು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...