ಬೀದರ | ಜ.26 ರಂದು ಪ್ರಜಾಪ್ರಭುತ್ವ ಉಳುವಿಗಾಗಿ ಜಾಗೃತಿ ಸಮಾವೇಶ ; ಕರಪತ್ರ ಬಿಡುಗಡೆ

Date:

75ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಬೃಹತ್ ಬಹಿರಂಗ ಸಮಾವೇಶವನ್ನು ‌ಜನವರಿ 26ರಂದು ಬೀದರ್ ನಗರದ ಡಾ.ಬಾಬಾ ಅಂಬೇಡ್ಕರ್ ವೃತ್ತದ ಎದುರುಗಡೆ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಕರಪತ್ರವನ್ನು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಎದುರುಗಡೆ ಬಿಡುಗಡೆ ಮಾಡಲಾಯಿತು.

“ಸಂವಿಧಾನ ಸಂರಕ್ಷಣಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿವರ್ಷದಂತೆ ಈ ವರ್ಷವೂ ಆಯೋಜಿಸಿದ ಪ್ರಜಾಪ್ರಭುತ್ವದ ಉಳಿವಿಗಾಗಿ ಬೃಹತ್ ಬಹಿರಂಗ ಸಮಾವೇಶಕ್ಕೆ ವಿಚಾರವಾದಿಗಳಾದ ಕನ್ಹಯ್ಯಾಕುಮಾರ, ಅಮೂಲ ಮಿಠಕರಿ ಮತ್ತು ರಾಜ್ಯದ ಸಚಿವರಾದ ಡಾ.ಜಿ.ಪರಮೇಶ್ವರ, ಡಾ.ಹೆಚ್.ಸಿ. ಮಹದೇವಪ್ಪ, ಸತೀಶ ಜಾರಕಿಹೊಳಿ, ಸಂತೋಷ ಲಾಡ್, ಪ್ರಿಯಾಂಕ್‌ ಖರ್ಗೆ, ಈಶ್ವರ್ ಖಂಡ್ರೆ, ರಹೀಂ ಖಾನ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ” ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮವು ಜನವರಿ 26 ರಂದು ಸಂಜೆ 5 ಗಂಟೆಗೆ ಡಾ.ಬಾಬಾ ಅಂಬೇಡ್ಕರ್ ವೃತ್ತದ ಎದುರುಗಡೆ ನಡೆಯಲಿದೆ. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ಪದಾಧಿಕಾರಿಗಳು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ನಟ ಯಶ್ ಜನ್ಮದಿನದ ಬ್ಯಾನರ್​ ಹಾಕುವಾಗ ವಿದ್ಯುತ್​ ಸ್ಪರ್ಶ ; ಮೂವರು ಸಾವು

ಈ ಸಂದರ್ಭದಲ್ಲಿ ಸಲಹೆಗಾರರಾದ ಅಮೃತರಾವ ಚಿಮಕೋಡೆ, ಬಸವರಾಜ ಮಾಳಗೆ, ಅಬ್ದುಲ್ ಮನ್ನಾನ್ ಸೇಠ್, ಸುಮಂತ ಕಟ್ಟಿಮನಿ, ಶಿವಾಜಿರಾವ ಪಾಟೀಲ ಮುಂಗನಾಳ, ವಿಠಲರಾವ ಪ್ಯಾಗೆ ಹಾಗೂ ಕಾರ್ಯಕ್ರಮದ ಅಧ್ಯಕ್ಷ ನ್ಯಾಯವಾದಿ ನಾರಾಯಣ ಗಣೇಶ್, ಗೌರವ ಅಧ್ಯಕ್ಷ ಗೋರ‍್ಧನ್ ರಾಥೋಡ್, ಕಾರ್ಯಾಧ್ಯಕ್ಷ ಬಾಬು ಪಾಸ್ವಾನ್, ಪ್ರಧಾನ ಕಾರ್ಯದರ್ಶಿ ಜಾನ ವೆಸ್ಲಿ, ಸಂಚಾಲಕ ಅನಿಲಕುಮಾರ ಬೆಲ್ದಾರ್, ಖಜಾಂಚಿ ಶ್ರೀಪತರಾವ ದೀನೆ, ಉಪಾಧ್ಯಕ್ಷ ಶಿವಕುಮಾರ ನೀಲಿಕಟ್ಟಿ ಸೇರಿದಂತೆ ಪ್ರಮುಖರಾದ ಅಶೋಕಕುಮಾರ ಮಾಳಗೆ ಅವಿನಾಶ ದೀನೆ, ಮಾರುತಿ ಕಂಠಿ, ಸಂದೀಪ ಕಾಂಟೆ, ಶಾಲಿವಾನ ಬಡಿಗೇರ, ಬಾಬುರಾವ ಮಿಠಾರೆ, ವೈಜಿನಾಥ ನಿಡೋದಾ, ರಾಜಕುಮಾರ ಶೇರಿಕಾರ, ಮಲ್ಲಿಕಾರ್ಜುನ ಮೊಳಕೆರೆ, ವಿನೋದ ಬಂದಗೆ, ಗುಣವಂತ ಶಿಂಧೆ, ಮೋಹನ ಡಾಂಗೆ, ಮುಕೇಶ ರಾಯ, ಮೌಲಪ್ಪ ಮಾಳಗೆ, ವಿನೋದ ಸಿಂದೆ, ಸುನೀಲ ಕಡ್ಡೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...