ಬೆಂಗಳೂರಿನಲ್ಲಿ ಬಸವ ಉದ್ಯಾನ : ಭಾಲ್ಕಿ ಶ್ರೀ ಹರ್ಷ

Date:

ಬೆಂಗಳೂರಿನಲ್ಲಿ ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ ಜನೋಪಯೋಗಿಯಾದ ‘ಜೀವವೈವಿಧ್ಯ ಉದ್ಯಾನ’ ನಿರ್ಮಾಣ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿ, ಅಗತ್ಯ ಹಣಕಾಸು ಮಂಜೂರು ಮಾಡಿರುವುದು ಅತ್ಯಂತ ಹರ್ಷ ತಂದಿದೆ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ʼ12ನೆಯ ಶತಮಾನದಲ್ಲಿ ಮಹಾ ದಾರ್ಶನಿಕ, ಜಗತ್ತು ಕಂಡ ಮೇರು ಚಿಂತಕ ಅಪ್ಪ ಬಸವಣ್ಣನವರು ‘ಮನುಷ್ಯನಿಂದ ಮನುಷ್ಯನ ಶೋಷಣೆ ಇಲ್ಲದ ಸಮಾನತೆ ಮತ್ತು ಸ್ವಾಭಿಮಾನಿ ಸಮಾಜ ಕಟ್ಟಲು’ ಶ್ರಮಿಸಿದರು. ಅವರ ಹೋರಾಟ, ಆಶಯ, ಚಿಂತನೆಗಳು ಸಾರ್ವಕಾಲಿಕವಾಗಿವೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಬಸವಣ್ಣನವರ ಮೇರು ವ್ಯಕ್ತಿತ್ವ ಹಾಗೂ ಚಿಂತನೆಯನ್ನು ಚಿರಸ್ಥಾಯಿಯಾಗಿಸಲು ಸಮಾಜವಾದಿ ಸಿದ್ಧರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಅನೇಕಾನೇಕ ಕಾರ್ಯಗಳು ಮಾಡಿದೆ, ಮಾಡುತ್ತಲೇ ಇದೆ. ಈಗ ಜನಪರ-ಜನಪ್ರಿಯ ಸಚಿವ ಈಶ್ವರ ಖಂಡ್ರೆಯವರ ಕಾಳಜಿ, ಒತ್ತಾಸೆಯ ಫಲದಿಂದಾಗಿ ಬಸವಣ್ಣನವರ ಹೆಸರಿನಲ್ಲಿ ‘ಜೀವವೈವಿಧ್ಯ ಉದ್ಯಾನ’ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ ಕಾರ್ಯಕ್ಕೆ ಇಡೀ ನಾಡೇ ಖುಷಿ ಪಟ್ಟಿದೆʼ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಉದ್ಯಾನವನ ಅಭಿವೃದ್ಧಿಪಡಿಸಲು ₹50 ಕೋಟಿ ಅನುದಾನ ಮಂಜೂರಾಗಿದೆ. ಐತಿಹಾಸಿಕವಾದ ಈ ಯೋಜನೆ ರೂಪಿಸಲು ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಮತ್ತು ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಅಭಿನಂದನೆಗಳು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಗೋಲ್ಡನ್ ಸ್ಕಾಲರಶಿಪ್ ಪ್ರವೇಶ ಪರೀಕ್ಷೆ : 1,207 ಮಕ್ಕಳು ಪರೀಕ್ಷೆಗೆ ಹಾಜರು

ಬೆಂಗಳೂರಿನಲ್ಲಿ 1760ರಲ್ಲಿ ನಿರ್ಮಾಣವಾದ ಲಾಲ್‌ಬಾಗ್ ಮತ್ತು 1870ರ ಕಬ್ಬನ್ ಪಾರ್ಕ್ ನಂತರ, ಬಹುತೇಕ ಒಂದೂವರೆ ಶತಮಾನಗಳ ಬಳಿಕ ಬೆಂಗಳೂರಿನಲ್ಲಿಇದೀಗ 153 ಎಕರೆ ಪ್ರದೇಶದಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...