ಭಾಲ್ಕಿ | ಹಿರೇಮಠ ಸಂಸ್ಥಾನ ಸಹಯೋಗದಲ್ಲಿ ನಾಳೆ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

Date:

ಭಾಲ್ಕಿ ಪಟ್ಟಣದಲ್ಲಿ ನಾಳೆ (ಫೆ.16) ಸೋಮವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಈಶ್ವರ ಖಂಡ್ರೆ ಅವರ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ʼನಾಳೆ ಸಾಯಂಕಾಲ 5 ಗಂಟೆಗೆ ಚನ್ನಬಸವಾಶ್ರಮ ಪರಿಸರದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಅಭಿನಂದನಾ ಸಮಾರಂಭ
ಜರುಗಲಿದೆʼ ಎಂದರು.

ʼಹಿರೇಮಠ ಸಂಸ್ಥಾನ ಸಮಾಜದಲ್ಲಿ ಜನಪರ ಜೀವಪರ ಕಾರ್ಯಗಳನ್ನು ಕೈಗೊಳ್ಳವರನ್ನು ಸದಾ ಗುರುತಿಸುವುದರ ಜತೆಗೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತಿಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದವರನ್ನು ಅಭಿನಂದಿಸಿ, ಪ್ರೋತ್ಸಾಹಿಸುವ ಕಾರ್ಯ ಮಾಡುತ್ತ ಬರುತ್ತಿದೆ. ಅದರಂತೆ ನಮ್ಮ ಭಾಲ್ಕಿ ಮಠದ ಪರಮ ಶಿಷ್ಯರು ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ನಮ್ಮೆಲ್ಲರಿಗೂ ಅತೀವ ಸಂತಸವನ್ನುವುಂಟು ಮಾಡಿದೆ.ಈ ಭಾಗದ ಅಭಿವೃದ್ಧಿ ಮತ್ತು ಸಮುದಾಯದ ಪ್ರಗತಿಯಲ್ಲಿ ಖಂಡ್ರೆ ಪರಿವಾರದ ಕೊಡುಗೆ ದೊಡ್ಡದಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಕಟ್ಟಿ ಬೆಳೆಸಿದ ನೂತನ ಅನುಭವ ಮಂಟಪದ ಪುನರ್‌ ನಿರ್ಮಾಣದ ನೀಲನಕಾಶೆಯನ್ನು ಸಚಿವರಿದ್ದ ಸಂದರ್ಭದಲ್ಲಿ ಈಶ್ವರ ಖಂಡ್ರೆ ಅವರು ಸಿದ್ಧಪಡಿಸಿ ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅನುಭವ ಮಂಟಪದ ಕಾಮಗಾರಿಗೆ ಅನುದಾನದ ಕೊರತೆ ಆಗದಂತೆ ನೋಡಿಕೊಂಡಿದ್ದಾರೆ. ಇಂತಹ ಅನೇಕ ವಿಧಾಯಕ ಕಾರ್ಯಗಳು ಮಾಡುತ್ತಿದ್ದಾರೆ. ಅವರು ಅಭಿವೃದ್ಧಿ ಕೆಲಸದ ಜತೆಗೆ ಧಾರ್ಮಿಕ, ಸಮುದಾಯದ ಬೆಳವಣಿಗೆಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆʼ ಎಂದು ತಿಳಿಸಿದರು.

ʼವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರ ಅಭಿನಂದನಾ ಸಮಾರಂಭ ಹಿರೇಮಠ ಸಂಸ್ಥಾನದ ಸಹಯೋಗದಲ್ಲಿ ನಡೆಯಲಿದ್ದು ವಿವಿಧ ಸಂಘ-ಸಂಸ್ಥೆಗಳು ಕೂಡ ಕೈಜೋಡಿಸಿವೆ. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಹಿತೈಷಿಗಳು ಖಂಡ್ರೆ ಅವರ ಅಭಿಮಾನಿಗಳು ಪಾಲ್ಗೊಂಡು ಯಶಸ್ಸುಗೊಳಿಸಬೇಕು. ಭಾಗವಹಿಸುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ವೇಶ್ಯಾವಾಟಿಕೆ ದಂಧೆ : ಹೊರ ರಾಜ್ಯದ 5 ಮಹಿಳೆಯರ ರಕ್ಷಣೆ; ಇಬ್ಬರ ಆರೋಪಿಗಳ ಬಂಧನ

ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿ ಅಧ್ಯಕ್ಷ ರಾಜಶೇಖರ ಅಷ್ಟೂರೆ, ಪುರಸಭೆ ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಮಾಜಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್, ಹಿರಿಯ ಮುಖಂಡ ಸುಭಾಷ ಕಾರಾಮುಂಗೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲೂಕು ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸವರಾಜ ಮರೆ, ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...