ಭಾಲ್ಕಿ | ಗುಣಮಟ್ಟ ಶಿಕ್ಷಣದಿಂದ ದೇಶದ ಅಭಿವೃದ್ಧಿ : ಸಂಸದ ಸಾಗರ ಖಂಡ್ರೆ

Date:

ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದಲ್ಲಿ ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ವಾರ್ಷಿಕೋತ್ಸವ ಹಾಗೂ ಗೌತಮ ಬುದ್ಧ ಪ್ರತಿಮೆ ಅನಾವರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣದಿಂದ ದೇಶದ ಭವಿಷ್ಯ ರೂಪುಗೊಳ್ಳಲು ಸಾಧ್ಯ. ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸಿನಂತೆ ದೇಶ ಸಾಮಾಜಿಕ, ರಾಜಕೀಯ, ಆರ್ಥಿಕ ಬೆಳವಣಿಗೆಗೆ ಶಿಕ್ಷಣ ಪೂರಕವಾಗಿದೆ. ಶಿಕ್ಷಣ, ಶಾಂತಿ ಮತ್ತು ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ’ ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಗ್ರಾಮೀಣ ಭಾಗದ ಕಾರ್ಮಿಕರಿಗೆ ಆರ್ಥಿಕ ಸಬಲೀಕರಣಕ್ಕೆ ಪೂರಕವಾದ ಮನರೇಗಾ ಹೆಸರು ಬದಲಾವಣೆಯ ಕೇಂದ್ರ ಸರ್ಕಾರದ ಹೊಸ ಮಸೂದೆ ಕಾರ್ಮಿಕರಿಗೆ ಮಾಡುವ ಮೋಸವಾಗಿದೆ. ದೇಶದ ಸಂವಿಧಾನ ಹಕ್ಕಿನಿಂದ ಆಯ್ಕೆಯಾದ ನಾನು ಸಂವಿಧಾನ ಉಳಿವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದರು.

1004777903

ಬೀದರ್ ವಿವಿ ಸಿಂಡಿಕೇಟ್ ಸದಸ್ಯ ವಿಠಲದಾಸ ಪ್ಯಾಗೆ ಮಾತನಾಡಿ, ‘ಶಿಕ್ಷಣ ಎಂಬುದು ದೊಡ್ಡ ಅಸ್ತ್ರ. ಮೌಲ್ಯ ಶಿಕ್ಷಣದಿಂದ ಸಮಾಜದಲ್ಲಿ ಧನಾತ್ಮಕ ಚಿಂತನೆ ಬಿತ್ತಲು ಸಾಧ್ಯ. ಗ್ರಾಮೀಣ ಭಾಗದಲ್ಲಿ ಶಾಲೆ ತೆರೆದು ಶಿಕ್ಷಣ ನೀಡುವ ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಸಾಮಾಜಿಕ ಕಾರ್ಯ ನಿರಂತರವಾಗಿ ಸಾಗಲಿ’ ಎಂದು ಹಾರೈಸಿದರು.

ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅನೀಲಕುಮಾರ್ ಬೆಲ್ದಾರ್ ಮಾತನಾಡಿ, ‘ಶಿಕ್ಷಣದಿಂದಲೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಸ್ಥಾಪಿತವಾದ ಗೌತಮ ಬುದ್ಧ ಶಿಕ್ಷಣ ಸಂಸ್ಥೆ ಈ ಭಾಗದ ಅನೇಕ ವಿದ್ಯಾರ್ಥಿಗಳು, ಶಿಕ್ಷಕರ ಬದುಕಿಗೆ ಬೆಳಕು ನೀಡಿದೆ ‘ ಎಂದು ತಿಳಿಸಿದರು.

ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಕಾಶಿನಾಥ ಚೆಲ್ವಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ‘ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ದೊರೆಯಬೇಕೆಂಬ ಮಹತ್ವದ ಉದ್ದೇಶದಿಂದ 1984ರ ಅವಧಿಯಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದೇನೆ. ಈ ಸಂಸ್ಥೆ ಪ್ರಾಥಮಿಕ ಹಂತದಿಂದ ಪದವಿವರೆಗೆ ನೂರಾರು ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ ಸೇವೆಗೈದಿದೆ. ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಆಶಯಗಳೊಂದಿಗೆ ಮಕ್ಕಳನ್ನು ವೈಚಾರಿಕ, ವೈಜ್ಞಾನಿಕ ಮನೋಭಾವ ಬಿತ್ತುವುದು ನಮ್ಮ ಉದ್ದೇಶವಾಗಿದೆ’ ಎಂದು ಹೇಳಿದರು.

ಸಾನಿಧ್ಯ ವಹಿಸಿದ ಭಂತೆ ಧಮ್ಮದೀಪ ಹಾಲಹಳ್ಳಿ, ಭಂತೆ ನೌಪಾಲ ಭಾಲ್ಕಿ ಹಾಗೂ ಭಿಕ್ಕು ಸಂಘ ಅವರು ಶಾಲಾ ಆವರಣದಲ್ಲಿ ಪ್ರತಿಷ್ಠಾಪಿಸಿದ ಗೌತಮ ಬುದ್ಧ ಪ್ರತಿಮೆಯನ್ನು ಅನಾವರಣಗೊಳಿಸಿದರು.

1004777158

ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಗೌತಮ ಬುದ್ಧರ ಭಾವಚಿತ್ರ ಮೆರವಣಿಗೆ ಭವ್ಯವಾಗಿ ನಡೆಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ : ಬೀದರ್‌ | VB-G‌ RAM G ಮಸೂದೆ: ಡಿ.22ರಂದು ಸಂಸದರ ಕಚೇರಿ ಎದುರು ಪ್ರತಿಭಟನೆ

ಸಮಾರಂಭದಲ್ಲಿ ಪ್ರಮುಖರಾದ ಶಿವರಾಜ್ ಹಾಸನಕರ್, ಎಲ್.ಜಿ ಗುಪ್ತಾ, ಲಕ್ಷ್ಮಿಬಾಯಿ ನಾರಾಯಣರಾವ್ ಚೆಲ್ವಾ, ಬಾಪುರಾವ್ ದೇಶಮುಖ, ಪ್ರೇಮಸಾಗರ ದಾಂಡೇಕರ್, ಈಶ್ವರಪ್ಪಾ ಗಾಯಕವಾಡ, ಸಿದ್ರಾಮ ದೇಶಮುಖ, ದಶರಥ ಗುರು, ತಿಪ್ಪಣ್ಣಾ ಶಿವಪೂರೆ, ಮಹೇಶ್ ಗೊರನಾಳಕರ್, ಪ್ರಶಾಂತ್ ದೊಡ್ಡಿ, ವಿನಯಕುಮಾರ್ ಮಾಳಗೆ, ಬಾಲಾಜಿ ಕುಂಬಾರ, ಮನೋಹರ ಮೈಸೆ, ಸೂರ್ಯಕಾಂತ ಸಾದುರೆ, ರಾಜಪ್ಪಾ ಗೂನಳ್ಳಿಕರ್, ದೀಲಿಪ್ ಭೋಸ್ಲೆ, ವಿನೋದ ಅಪ್ಪೆ, ಮನೋಹರ ಮೈಸೆ, ವಿನೋದಕುಮಾರ್ ಬಂದಗೆ, ಸೂರ್ಯಕಾಂತ ಸಿಂಗೆ, ಶ್ಯಾಮಸುಂದರ್ ಖಾನಾಪುರ, ಮುಕೇಶ್ ಚೆಲ್ವಾ, ನಾಗೇಶ್ ಚೆಲ್ವಾ ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ಪಾಲಕರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...