ಭಾಲ್ಕಿ | ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ʼಕಲಿಕಾ ಹಬ್ಬʼ ಸಹಕಾರಿ

Date:

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್ ಹೇಳಿದರು.

ಭಾಲ್ಕಿ ತಾಲೂಕಿನ ಗಡಿಭಾಗದ ಭಾಟಸಾಂಗವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕಲಿಕಾ ಹಬ್ಬ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಯುವ ಆಸಕ್ತಿ ಹೆಚ್ಚಿಸಲು ಮತ್ತು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಹಾಕಲು ಪೂರಕವಾಗಿದೆ. ಕಲಿಕಾ ಹಬ್ಬದಲ್ಲಿನ ಚಟುವಟಿಕೆಗಳು ಸರಕಾರಿ ಶಾಲಾ ಮಕ್ಕಳಿಗೆ ಮಾತ್ರ ನಡೆಯುತ್ತವೆ. ಮಕ್ಕಳ ಕಲಿಕೆಯ ಬಗ್ಗೆ ಸಮುದಾಯದ ಗಮನ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಆರ್‌ಪಿ ಪೂರ್ಣಿಮಾ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು, ಸಂತಸದಾಯಕ ಕಲಿಕೆ ಪ್ರಕ್ರಿಯೆ, ಆತ್ಮವಿಶ್ವಾಸ ಹೆಚ್ಚಿಸುವುದೇ ಕಲಿಕಾ ಹಬ್ಬದ ಉದ್ದೇಶ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಆರ್‌ಪಿ ಸಂಜುಕುಮಾರ, ಸಂತೋಷ, ರಂಜೀತ್, ಮುಖ್ಯಗುರು ಚನ್ನಪ್ಪ, ಅರ್ಜುನ ರಾಜಕುಮಾರ ಸೇರಿದಂತೆ ಹಲವರು ಇದ್ದರು. ಮಧುಕರ್ ಸ್ವಾಗತಿಸಿ, ನಿರೂಪಿಸಿದರು.

ಡೋಣಗಾಪುರ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ :

ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಕಲಿಕೆಯ ಮೇಲಿನ ಆಸಕ್ತಿ ಹೆಚ್ಚಿಸಲು ಎಫ್‌ಎಲ್‌ಎನ್ ಕಲಿಕಾ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಾತ್ರಿ ಕಾಟಕರ ಹೇಳಿದರು.

ಭಾಲ್ಕಿ ತಾಲೂಕಿನ ಕೋಟಗ್ಯಾಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಡೋಣಗಾಪುರ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ʼಕಲಿಕಾ ಹಬ್ಬಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಸಹಕಾರಿಯಾಗಿವೆ. 1 ರಿಂದ 5ನೇ ತರಗತಿಯ ಮಕ್ಕಳಿಗೆ ಆಯೋಜಿಸುವ ಈ ಚಟುವಟಿಕೆಗಳು ಸಮುದಾಯದಲ್ಲಿ ಶಾಲೆಗಳ ಮೇಲಿನ ನಂಬಿಕೆಯನ್ನು ಹೆಚ್ಚಿಸುತ್ತವೆʼ ಎಂದರು.

WhatsApp Image 2026 01 09 at 9.31.02 PM
ಡೋಣಗಾಪುರ ವಲಯ ಮಟ್ಟದ ಕಲಿಕಾ ಹಬ್ಬ-2026

ಬಿಆರ್‌ಪಿಗಳಾದ ಸಂಜುಕುಮಾರ ಸಾವರೇ, ಸಂತೋಷ ಮುಧೋಳೆ, ಚೇತನಾ, ಸಿಆರ್‌ಪಿ ಅಶೋಕ ಕಲ್ಯಾಣೆ, ಮಹೇಶ ಕೊರಾಳೆ, ಸತ್ಯವಾನ ಕಾಂಬಳೆ, ಸಂದೀಪ ವಾಡೇಕರ, ಸಂತೋಷ ಧಬಾಲೆ, ಮುಖ್ಯ ಗುರುಗಳಾದ ಶ್ರೀದೇವಿ ಬಿರಾದರ, ಪ್ರಭಾಕರ ಪಾಟೀಲ,ಸೇರಿದಂತೆ ವಲಯದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಸಿಆರ್‌ಪಿ ಚಂದ್ರಕಾಂತ ತಳವಾಡೆ ನಿರೂಪಿಸಿದರು. ಸಂದೀಪ ವಾಡೇಕರ ಸ್ವಾಗತಿಸಿದರು, ಗಂಗಾಧರ ವಂದಿಸಿದರು.

ಮೋರಂಬಿ ಕ್ಲಸ್ಟರ್‌ ಕಲಿಕಾ ಹಬ್ಬ :

ಭಾಲ್ಕಿ ತಾಲೂಕಿನ ಮೋರಂಬಿ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬವನ್ನು ಉಚ್ಚಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

ವಲಯ ಸಂಪನ್ಮೂಲ ವ್ಯಕ್ತಿ ಅಶೋಕಕುಮಾರ್ ಎನ್ ಕಲ್ಯಾಣಿ ಪ್ರಾಸ್ತಾವಿಕವಾಗಿ ಮಾತನಾಡಿ, ʼಕಲಿಕಾ ಹಬ್ಬ ಮಕ್ಕಳಿಗೆ ಭಾಷಾ ಮತ್ತು ಸಂಖ್ಯಾ ಜ್ಞಾನವನ್ನು ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲು ತುಂಬಾ ಉಪಯುಕ್ತ, ಪ್ರಯೋಜನಕಾರಿ. ಮಕ್ಕಳ ಪ್ರತಿಭೆ ಗುರುತಿಸಲು ಇದು ಒಂದು ಸೂಕ್ತ ವೇದಿಕೆʼ ಎಂದು ತಿಳಿಸಿದರು.

WhatsApp Image 2026 01 09 at 9.29.52 PM
ಮೋರಂಬಿ ವಲಯ ಮಟ್ಟದ ಕಲಿಕಾ ಹಬ್ಬ-2026

ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕ ಅಧ್ಯಕ್ಷರಾದ ಚಂದ್ರಕಾಂತ್ ಬನ್ನಾಳೆ ಕಾರ್ಯಕ್ರಮ ಉದ್ಘಾಟಿಸಿಸಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೂರ್ಯಕಾಂತ್ ಸುಂಟೆ, ಪತ್ರಕರ್ತ ಮಹೇಶ ಸಜ್ಜನ್, ಲೋಕೇಶ್ ಕಾಂಬಳೆ, ಎಸ್‌ಡಿಎಂಸಿ ಅಧ್ಯಕ್ಷ ಬಿಜಿ ಪಾಟೀಲ್, ಸದಸ್ಯರಾದ ಪಾಂಡ್ರೆ, ಮುಖ್ಯಗುರು ಉಮಕಾಂತ್ ಉಡಬಾಳೆ, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಬಸವರಾಜ ದಾನ, ಕಲ್ವಾಡಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಂತೋಷ್ ದಬಾಲೆ, ಲಖನ್ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಹೇಶ, ಸಂತೋಷ್ ವಾಡೆ ಸೇರಿದಂತೆ ವಲಯದ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ : ಮೂರು ಕೇಂದ್ರ‌ ಸೀಜ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...