ಭಾಲ್ಕಿ | ಪುಸ್ತಕ ಓದುವ ಸಂಸ್ಕೃತಿ ಹೆಚ್ಚಾಗಲಿ : ಗಣಪತಿ ಬೋಚರೆ

Date:

ಪುಸ್ತಕ ಸಂಸ್ಕೃತಿ ಹಾಗೂ ಓದುವಿಕೆ ನಮ್ಮ ಬದುಕಿನ ಭಾಗಗಳು. ಪುಸ್ತಕಗಳು ನಮ್ಮ ಪರಂಪರೆ, ಭಾರತೀಯ ಸಂಸ್ಕೃತಿ, ಇತಿಹಾಸ, ಬದುಕಿನ ಕಲೆ ಮತ್ತು ಮೌಲ್ಯಗಳನ್ನು ಪುಸ್ತಕ ತಿಳಿಸುತ್ತದೆ ಎಂದು ಹಿರಿಯ ಪತ್ರಕರ್ತ ಗಣಪತಿ ಬೋಚರೆ ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತ ಸಮಿತಿ ಸಹಯೋಗದಲ್ಲಿ ಭಾಲ್ಕಿ ಪಟ್ಟಣದ ಸಾಹಿತಿ ಡಾ.ಮಕ್ತುಂಬಿ ಎಂ.ಅವರ ಮನೆಯಲ್ಲಿ ಆಯೋಜಿಸಿದ ʼಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭʼ ಉದ್ಘಾಟಿಸಿ ಅವರು ಮಾತನಾಡಿದರು.

ʼಎರಡು ದಶಕಗಳ ಹಿಂದೆ ಗ್ರಂಥಾಲಯಗಳು ಓದುಗರಿಂದ ತುಂಬಿ ತುಳುಕುತ್ತಿದ್ದವು. ಇತ್ತೀಚೆಗೆ ಅತಿಯಾದ ಮೊಬೈಲ್‌ ಬಳಕೆಯ ಗೀಳಿನಿಂದಾಗಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗಿದೆ. ಜ್ಞಾನದ ನಿರಂತರ ಧಾರೆ ಪುಸ್ತಕ ರೂಪದಲ್ಲಿ ಸಂಗ್ರಹವಾಗಿರುತ್ತದೆ. ಪುಸ್ತಕ ಓದುವ ಸಂಸ್ಕೃತಿ ಹೆಚ್ಚಾಗಬೇಕಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತ ಸಮಿತಿ ಸಂಚಾಲಕ ಬಾಲಾಜಿ ಕುಂಬಾರ ಮಾತನಾಡಿ, ʼಓದುಗರನ್ನು ಮತ್ತೆ ಪುಸ್ತಕಗಳತ್ತ ಕರೆತರಲು, ಓದುವ ಅಭ್ಯಾಸ ಉತ್ತೇಜಿಸಬೇಕೆಂಬ ಮಹತ್ವಕಾಂಕ್ಷಿ ಉದ್ದೇಶದಿಂದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಕಾಲದ ಸಂಸ್ಕತಿ, ಜನಜೀವನ ಅರ್ಥಮಾಡಿಕೊಳ್ಳಲು ನಮಗೆ ಅಧಿಕೃತವಾಗಿ ಸಿಗುವ ಆಕರಗಳೆಂದರೆ ಪುಸ್ತಕಗಳು. ಪುಸ್ತಕಗಳು ಆಯಾ ಕಾಲದ ಸಂಸ್ಕೃತಿಯ ಜೀವಂತ ಪ್ರತೀಕ. ಪುಸ್ತಕ ನಾಗರಿಕತೆಯ ತಳಹದಿ, ಜ್ಞಾನಾರ್ಜನೆಯ ಮಾಧ್ಯಮದ ಒಂದು ಪ್ರಮುಖ ಸಾಧನ. ಅನುಭವ, ಜ್ಞಾನದ ಅಭಿವ್ಯಕ್ತಿ ರೂಪವಾದ ಪುಸ್ತಕ ಸಂಸ್ಕತಿಯ ನಿರಂತರ ಪ್ರವಾಹಕ್ಕೆ ಸೇತುವೆಯಾಗಿವೆʼ ಎಂದು ಹೇಳಿದರು.

WhatsApp Image 2026 01 31 at 5.29.11 PM
ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಅನುಷ್ಠಾನದಲ್ಲಿ ಡಾ.ಮುಕ್ತುಂಬಿ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅಭಿನಂದನಾ ಪತ್ರ ನೀಡಲಾಯಿತು.

ಶಿಕ್ಷಣ ಇಲಾಖೆಯ ಬಿಆರ್‌ಪಿ ಚೇತನಾ ಚನ್ನಶೆಟ್ಟಿ ಅವರು ಮಾತನಾಡಿ, ʼಪುಸ್ತಕ ಓದುವುದೆಂದರೆ ಅರಿವನ್ನು ವಿಸ್ತರಿಸಿಕೊಳ್ಳುವುದು ಎಂದರ್ಥ. ಯುವ ಜನಾಂಗ ಸೇರಿ ಎಲ್ಲ ವಯೋಮಾನದವರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿದ್ದು , ಪುಸ್ತಕ ಓದುವ ಸಂಸ್ಕೃತಿಯನ್ನು ಮರೆತು ಸಮಾಜಮುಖಿ ಸಂವೇದನೆ ಕಳೆದುಕೊಳ್ಳುವಂತಾಗಿದೆ. ನಾವೆಲ್ಲರೂ ಮೊಬೈಲ್‌ ಬಿಟ್ಟು ಮತ್ತೆ ಕೈಯಲ್ಲಿ ಪುಸ್ತಕ ಹಿಡಿಯುವುದು ಅಗತ್ಯವಾಗಿದೆʼ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಡಾ.ಮಕ್ತುಂಬಿ ಎಂ ಅವರು ಮಾತನಾಡಿ, ʼಪುಸ್ತಕ ಓದುವ ಹವ್ಯಾಸ ಎಲ್ಲರೂ ಬೆಳಿಸಿಕೊಳ್ಳಬೇಕಾಗಿದೆ. ಓದು-ಬರಹದಿಂದ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಮನೆಗೊಂದು ಗ್ರಂಥಾಲಯ ಮೂಲಕ ಮನೆ-ಮನೆಗೆ ಪುಸ್ತಕ ಸಂಸ್ಕೃತಿ ಜಾಗೃತಿ ಮೂಡಿಸುವ ಪ್ರಾಧಿಕಾರದ ಕಾರ್ಯ ನಿಜಕ್ಕೂ ಶ್ಲಾಘನೀಯʼ ಎಂದರು.

ಭಾಲ್ಕಿ ಗ್ರಂಥಾಲಕ ಸಹಾಯಕ ನಿಂಗಪ್ಪ ಗಚ್ಚಿನಮನಿ, ಶರಣ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಗುಂಡಪ್ಪ ಸಂಗಮಕರ್‌, ವಕೀಲರಾದ ಅಮೂಲ ತಳವಾಡಕರ್‌ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ ಆರೋಪ : ಅಂಗನವಾಡಿ ಕಾರ್ಯಕರ್ತೆ ಅಮಾನತು

ಕಾರ್ಯಕ್ರಮದಲ್ಲಿ ಪಿಡಿಒ ಯೋಗೇಶ ಹಿರೇಮಠ, ಯುವ ಚಿಂತಕರಾದ ಉಮಾಕಾಂತ ವಿಳಾಸಪುರೆ, ಸೋಹೇಲ್‌, ಪೃಥ್ವಿ ಮತ್ತಿತರರಿದ್ದರು.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...