ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ನಡೆದಿದೆ.
ಬಾಜೋಳಗಾ ಗ್ರಾಮದ ನಿವಾಸಿ ಶೋಹಮ್ (13) ಮೃತ ಬಾಲಕನಾಗಿದ್ದಾನೆ. ಬಾಜೋಳಗಾ ಕ್ರಾಸ್‌ನಿಂದ ಟ್ರ್ಯಾಕ್ಟರ್‌ನಲ್ಲಿ ಡಿಸೇಲ್ ತುಂಬಿಸಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತ ಬಾಲಕ ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ. ಮದಕಟ್ಟಿ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಬಾಲಕ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಖಟಕ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಮಹಿಳೆಯರ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲ : ಸಚಿವ ಈಶ್ವರ ಖಂಡ್ರೆ





