ಬೀದರ್‌ | ಚನ್ನಬಸವೇಶ್ವರ ಗುರುಕುಲದಲ್ಲಿ 100 ಮಕ್ಕಳಿಗೆ ಎರಡು ವರ್ಷ ಉಚಿತ ಶಿಕ್ಷಣ

Date:

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೊಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಯೋಜನೆ ಮುಂದುವರಿಸಿದ್ದು, ಜನವರಿ ತಿಂಗಳಲ್ಲಿ ಐದು ದಿವಸ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ʼಶಿಕ್ಷಣ ಸಂಸ್ಥೆಯ 25ನೆಯ ವರ್ಷ ಆಚರಣೆ ಹಿನ್ನಲೆಯಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಗುರುಕುಲ ಗೊಲ್ಡನ್ ಸ್ಕಾಲರ್‌ಶಿಪ್ ಯೋಜನೆ ಪರಿಚಯಿಸಲಾಗಿತ್ತು. ಮಕ್ಕಳು, ಪಾಲಕರು ಹೆಚ್ಚಿನ ಆಸಕ್ತಿ ತೋರುತ್ತಿರುವುದರಿಂದ ಗೊಲ್ಡನ್ ಸ್ಕಾಲರ್‌ಶಿಪ್ ಯೋಜನೆ ಹಾಗೇ ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಈ ಯೋಜನೆ ಬಡವರು, ರೈತರು, ಕೂಲಿ ಕಾರ್ಮಿಕರ ಮಕ್ಕಳಿಗೆ ವರದಾನವಾಗಿದೆ. ಪ್ರತಿ ವರ್ಷ ನೂರು ಮಕ್ಕಳು ಉಚಿತ ಶಿಕ್ಷಣದ ಸೌಲಭ್ಯ ಪಡೆದು ನೀಟ್-ಐಐಟಿಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆʼ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ʼಗುರುಕುಲ ಗೊಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದ 25 ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತ ಪಿಯುಸಿ ಶಿಕ್ಷಣ, ವಸತಿ, ಕೋಚಿಂಗ್ ನೀಡಲಾಗುವುದು. ನಂತರದ 75 ವಿದ್ಯಾರ್ಥಿಗಳಿಗೆ ಫೀ ನಲ್ಲಿ ಶೇ.50ರಷ್ಟು ರಿಯಾಯಿತಿ ಸಿಗಲಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿಯಲ್ಲಿ 5 ದಿನ ಪ್ರವೇಶ ಪರೀಕ್ಷೆ :

ʼಗಡಿಭಾಗದ ಬಡ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಬಸವಲಿಂಗ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಗುರುಕುಲ ಸ್ಕಾಲರ್‌ ಶಿಪ್ ಯೋಜನೆ ಜಾರಿಗೆ ತಂದಿದ್ದೇವೆ. ಈ ಬಾರಿಯು ಚನ್ನಬಸವೇಶ್ವರ ಗುರುಕುಲದಲ್ಲಿ 2026-27ನೇ ಸಾಲಿನ ಪ್ರವೇಶಕ್ಕಾಗಿ ಜ.4, 10, 11, 18 ಮತ್ತು 25 ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದ್ದೇವೆ. ಪ್ರಸ್ತುತ ಎಸ್ಸೆಸ್ಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆʼ ಎಂದು ಭಾಲ್ಕಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದರು.

ʼಚನ್ನಬಸವೇಶ್ವರ ಗುರುಕುಲ ಪ್ರಕೃತಿ ಮಡಿಲಿನಲ್ಲಿ ಈ ಭಾಗದ ಮಕ್ಕಳ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಾಗಾಗಿ ಕಳೆದ ಸಾಲಿನಲ್ಲಿ ನೀಟ್-ಐಐಟಿಯಲ್ಲಿ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್ ಪಡೆದು ಸಿಎಂ ಸಿದ್ದರಾಮಯ್ಯ ಅವರಿಂದ ಗೌರವಕ್ಕೆ ಪಾತ್ರರಾಗಿದ್ದರುʼ ಎಂದು ಸ್ಮರಿಸಿದರು.

8 ಸಾವಿರ ಮಕ್ಕಳು ನೋಂದಣಿ

2026-27ನೇ ಸಾಲಿನ ಪಿಯುಸಿ ವಿಜ್ಞಾನ ಪ್ರವೇಶ ಪಡೆಯಲು ಸ್ಕಾಲರ್‌ಶಿಪ್‌ಗಾಗಿ ಈಗಾಗಲೇ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಎಂಟು ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. 2004ರಲ್ಲಿ ಪಿಯುಸಿ ವಿಭಾಗ ಆರಂಭಗೊಂಡಿದ್ದು, ಕಳೆದ 10 ವರ್ಷಗಳಿಂದ ಸ್ಕಾಲರ್‌ಶಿಪ್ ಯೋಜನೆ ನಡೆಸಿಕೊಂಡು ಬರಲಾಗುತ್ತಿದ್ದು, ಇದುವರೆಗೂ 1 ಸಾವಿರ ಮಕ್ಕಳು ಉಚಿತ ಶಿಕ್ಷಣ, ವಸತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಸೌಲಭ್ಯ ಪಡೆದು ಕೊಂಡಿದ್ದಾರೆʼ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾಹಿತಿ ನೀಡಿದರು.

ಇದನ್ನೂ ಓದಿ : ಬೀದರ್‌ | ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀಜಿ, ಸಂಸ್ಥೆಯ ಆಡಳಿತಾಧಿಕಾರಿ ಮೋಹನ ರೆಡ್ಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...