10ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮಂಠಾಳ್ ಗ್ರಾಮದ ನಿವಾಸಿ ಶರತ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?
ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಶರತ್ ವ್ಯಾಸಂಗ ಮಾಡುತ್ತಿದ್ದನು. ಅವನ ಹತ್ತಿರ SORRY ಮಮ್ಮಿ, ಪಪ್ಪಾ I LOVE YOU.. keep smile forever ಎಂದು ಬರೆದಿರುವ ಚೀಟಿ ಸಿಕ್ಕಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.





