ಬೀದರ್‌ | 77ನೇ ಗಣರಾಜ್ಯೋತ್ಸವ ದಿನ : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ

Date:

ಬೀದರ್‌ ನಗರದ ನೆಹರೂ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.

ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸೇರಿ ವಿವಿಧ ಶಾಲಾ ಹಾಗೂ ಕಾಲೇಜಿನ ತುಕಡಿಗಳು ಅಕರ್ಷಕ ಪಥಸಂಚಲನ ನಡೆಸಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ʼಸಮಾನತೆ, ನ್ಯಾಯ ಮತ್ತು ಬಾಂಧವ್ಯದ ಮೌಲ್ಯಗಳ ಮೇಲೆ ನಿಂತಿರುವ ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದ ಸೌಂದರ್ಯ ನಮ್ಮ ಒಗ್ಗಟ್ಟಿನಲ್ಲಿ ಅಡಗಿದೆ. ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸೋಣʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಹಾಗೂ ಯುವನಿಧಿ ಜನರ ಬದುಕಿನಲ್ಲಿ ಸ್ಪಷ್ಟವಾದ ಬದಲಾವಣೆ ತಂದಿವೆ. ಈ ಯೋಜನೆಗಳು ಜನಸಾಮಾನ್ಯರಿಗೆ ನೆಮ್ಮದಿ, ಭದ್ರತೆ ಮತ್ತು ಆತ್ಮವಿಶ್ವಾಸವನ್ನು ನೀಡಿವೆ. ಕಳೆದ 30 ತಿಂಗಳಲ್ಲಿ ಬೀದರ್ ಜಿಲ್ಲೆಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಜನಜೀವನವನ್ನು ಸುಧಾರಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿವೆ. ರಸ್ತೆ ಸುಧಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ವೃದ್ಧಿ, ಮೂಲಭೂತ ಸೌಕರ್ಯಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಹಸಿರುಕರಣ ಕಾರ್ಯಕ್ರಮಗಳು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣವಾಗಿವೆʼ ಎಂದರು.

ʼನೂತನ ಜಿಲ್ಲಾ ಸಂಕೀರ್ಣ ನಿರ್ಮಾಣ, ಐತಿಹಾಸಿಕ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ, ಭಾಲ್ಕಿಯಲ್ಲಿ ಕ್ರೀಡಾಂಗಣ, ಆಸ್ಪತ್ರೆ ನಿರ್ಮಾಣ, ಬಸವಕಲ್ಯಾಣ ಮತ್ತು ಔರಾದ್ ತಾಲೂಕುಗಳಲ್ಲಿ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಸೇರಿದಂತೆ ಹಲವು ಮಹತ್ವದ ಕಾಮಗಾರಿಗಳು ಪ್ರಗತಿಯಲ್ಲಿವೆ. ಅತಿವೃಷ್ಟಿಯಿಂದ ಸಂಕಷ್ಟಕ್ಕೊಳಗಾದ ಜಿಲ್ಲೆಯ ರೈತರ ನೆರವಿಗಾಗಿ ಹೆಚ್ಚುವರಿಯಾಗಿ ಸುಮಾರು ₹261.43 ಕೋಟಿ ಪರಿಹಾರ ಜಮಾ ಮಾಡಿಸಿದ್ದೇವೆ. ಈಗಾಗಲೇ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಕಂಪನಿಗಳಿಂದ ‘ಮಿಡ್ ಸೀಸನ್ ಅಡ್ವರ್ಸಿಟಿ’ ಅಡಿಯಲ್ಲಿ ಸುಮಾರು ₹90 ಕೋಟಿ ಬೆಳೆ ವಿಮೆ ಪರಿಹಾರವೂ ಜಮಾ ಆಗಿದೆ. ರೈತರ ಸಂಕಷ್ಟದ ಸಮಯದಲ್ಲಿ ಸರ್ಕಾರ ಸದಾ ಬೆಂಬಲವಾಗಿ ನಿಂತಿದೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಕನ್ನಡ ಸಾಹಿತ್ಯ ಪ್ರತಿಪಾದಿಸುವುದು ಸಮಾನತೆ, ಸೌಹಾರ್ದತೆ : ಬರಗೂರು ರಾಮಚಂದ್ರಪ್ಪ

ಬೀದರ್‌ ಸಂಸದ ಸಾಗರ್‌ ಖಂಡ್ರೆ, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಎಂ.ಜಿ.ಮೂಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿಸಿಎಫ್‌ ಆಶಿಷ್‌ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್‌ ಜೈನ್‌, ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್‌ ಗೌಸ್‌ ಸೇರಿದಂತೆ ಇದ್ದರು.

ಗಣರಾಜೋತ್ಸವ ದಿನಾಚರಣೆ ಚಿತ್ರಾವಳಿ :

WhatsApp Image 2026 01 26 at 3.10.26 PM
WhatsApp Image 2026 01 26 at 3.10.26 PM 4
WhatsApp Image 2026 01 26 at 3.10.26 PM 1
WhatsApp Image 2026 01 26 at 3.10.26 PM 2
WhatsApp Image 2026 01 26 at 1.19.03 PM
WhatsApp Image 2026 01 26 at 1.17.45 PM
WhatsApp Image 2026 01 26 at 1.17.32 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...