ಬೀದರ್‌ | ನಿವೃತ ಶಿಕ್ಷಕ ಪ್ರಕಾಶ ಗೋದಮಗಾವೆಗೆ ಅದ್ದೂರಿ ಬೀಳ್ಕೊಡುಗೆ

Date:

ವಿದ್ಯಾರ್ಥಿಗಳಿಗೆ ಬೋಧನೆಯೊಂದಿಗೆ ಕನ್ನಡ ಭಾಷೆ, ಸಾಹಿತ್ಯ, ಸಾಂಸ್ಕೃತಿಕ ಅರಿವು ಮೂಡಿಸಿ ಕನ್ನಡ ಭಾಷಾ ಬೆಳವಣಿಗೆಗೆ ಶ್ರಮಿಸಿರುವ ಶಿಕ್ಷಕ ಪ್ರಕಾಶ ಗೋದಮಗಾವೆ ಅವರ ಕಾರ್ಯ ಶ್ಲಾಘನೀಯ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು.

ಔರಾದ್ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಸವ ಕೇಂದ್ರ ಸಹಯೋಗದೊಂದಿಗೆ ಶಿಕ್ಷಕ ಪ್ರಕಾಶ ಗೋದಮಗಾವೆ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 

ʼಗಡಿ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಆದರ್ಶ ವ್ಯಕ್ತಿಗಳಾಗಿ ರೂಪಿಸಿರುವ ಪ್ರಕಾಶ ಅವರು, ಮೌಲ್ಯ ಶಿಕ್ಷಣ, ಮಾನವೀಯ ಮೌಲ್ಯಗಳನ್ನು ಬಿತ್ತುವ ಮೂಲಕ ಎಲ್ಲರ ಹೃದಯದಲ್ಲಿ ಸ್ಥಾನ ಗಳಿಸಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರೇಮಠ ಸಂಸ್ಥಾನ ಭಾಲ್ಕಿಯ ಮಹಾಲಿಂಗ ದೇವರು ಮಾತನಾಡಿ, ʼಮಕ್ಕಳಿಗೆ ಕಷ್ಟದ ಜೀವನ ಕುರಿತು ತಿಳಿ ಹೇಳಿದಾಗ ಭವಿಷ್ಯ ರೂಪಿಸಬಹುದು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರದ ಕೊರತೆ ಎದುರಾಗಿದ್ದು, ಅದನ್ನು ಸರಿಪಡಿಸುವುದು ಪೋಷಕರ ಜವಾಬ್ದಾರಿಯಾಗಿದೆʼ ಎಂದರು.

ನಿವೃತ್ತ ಶಿಕ್ಷಕ ಪ್ರಕಾಶ ಗೋದಮಗಾವೆ ಮಾತನಾಡಿ, ʼಅಂದಿನ ಪರಿಸ್ಥಿತಿಯಲ್ಲಿ ಶಿಕ್ಷಣ ನೀಡುವುದು ಸವಾಲಿನ ಕೆಲಸವಾಗಿತ್ತು. ಕನ್ನಡಕ್ಕೆ ಪೂರಕ ವಾತಾವರಣ ಇದ್ದಿರಲಿಲ್ಲ. ಮರಾಠಿ ಪ್ರಭಾವದ ನಡುವೆಯೂ ಛಲದಿಂದ ಸೇವೆ ಮಾಡಿರುವ ಹಿನ್ನೆಲೆ ಇಂದು ಅನೇಕ ವಿದ್ಯಾರ್ಥಿಗಳ ಬಾಳು ಬೆಳಗಿದ್ದು ನನಗೆ ಅತ್ಯಂತ ತೃಪ್ತಿ ತಂದಿದೆʼ ಎಂದರು.

ತಹಸೀಲ್ದಾರ್ ಮಹೇಶ ಪಾಟೀಲ್, 7ನೇ ಕನ್ನಡ ಸಮ್ಮೇಳನ ನಿಯೋಜಿತ ಸಮ್ಮೇಳನಾಧ್ಯಕ್ಷ ಡಾ.ಮನ್ಮತ ಡೋಳೆ, ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಸೇರಿದಂತೆ ಪ್ರಮುಖರಾದ ಶಿವರಾಜ ಬಿರಾದಾರ, ರಘುನಾಥ ರೊಟ್ಟೆ, ಉಮೇಶ ಸಲಗರ್ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು, ಬಸವ ಕೇಂದ್ರ ತಾಲೂಕು ಘಟಕ, ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ, ಸರ್ಕಾರಿ ನೌಕರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ಕುರುಬರವಾಡಿ ಗ್ರಾಮಸ್ಥರು, ಸಾರ್ವಜನಿಕರು ನಿವೃತ ಶಿಕ್ಷಕ ಪ್ರಕಾಶ ಗೋದಮಗಾವೆ ದಂಪತಿಗೆ ಸನ್ಮಾನಿಸಿದರು.

ಇದನ್ನೂ ಓದಿ : ಕಲಬುರಗಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಸಮಾರಂಭದಲ್ಲಿ ಸಿಪಿಐ ರಘುವೀರಸಿಂಗ್ ಠಾಕೂರ್, ಪಿಎಸ್ಐ ರೇಣುಕಾ ಭಾಲೇಕರ್, ಸರ್ಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಪಂಡರಿ ಆಡೆ, ಶಿಕ್ಷಕ ಜಗನ್ನಾಥ ಮೂಲಗೆ, ಪತ್ರಕರ್ತರಾದ ಅನೀಲ ಕುಮಾರ್ ದೇಶಮುಖ, ರವೀಂದ್ರ ಮುಕ್ತೆದಾರ, ಅಮರಸ್ವಾಮಿ ಹಾಗೂ ಸಂಜೀವ ಶಟಕಾರ್, ಸಂಜೀವ ಕಂಠಾಳೆ, ಜಗನ್ನಾಥ ದೇಶಮುಖ, ಮನ್ಮತಪ್ಪ ಹುಗ್ಗೆ, ಲಿಂಗೇಶ್ವರಿ ಗೋದಮಗಾವೆ, ಅವಿನಾಶ ಗೋದಮಗಾವೆ ಮತ್ತಿತರರಿದ್ದರು. ಸಾನ್ವಿ ಡಿಗ್ಗಿ ಅವರ ನೃತ್ಯ ರೂಪಕ ಎಲ್ಲರ ಗಮನ ಸೆಳೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...