ಬೀದರ್ | ಆಕಸ್ಮಿಕ ಸ್ಫೋಟ ಪ್ರಕರಣ : ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಸಚಿವ ಖಂಡ್ರೆ

Date:

ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ನಿನ್ನೆ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೀದರ ನಗರದ ಗುರುನಾನಕ್ ಹಾಗೂ ಬ್ರಿಮ್ಸ್ ಆಸ್ಪತ್ರೆಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಭಾನುವಾರ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಅನುಮಾನಾಸ್ಪದ ವಸ್ತು ಸ್ಫೋಟದಿಂದ ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿದಂತೆ 6 ಜನರು ಗಂಭೀರವಾಗಿ ಗಾಯಗೊಂಡಿರುವುದು ಅತ್ಯಂತ ದುಃಖಕರ ಘಟನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಅತ್ಯುತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸಚಿವರು ಸೂಚನೆ ನೀಡಿದರು.

ಈ ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ತನಿಖಾ ವರದಿ ಬಂದ ತಕ್ಷಣ ಯಾರೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.ಗಾಯಾಳುಗಳು ಶೀಘ್ರ ಗುಣಮುಖ ಆಗಲೆಂದು ಸಚಿವರು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಇಂತಹ ದುರ್ಘಟನೆ ಮರುಕಳಿಸದಂತೆ ಸಂಬಂಧಿತ ಇಲಾಖೆಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

1004886497

ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...