ಬೀದರ್‌ | ಆಸ್ಪತ್ರೆಗಳಲ್ಲಿ ಔಷಧ ಕೊರತೆ ಸರಿಪಡಿಸಿ: ವಿಧಾನಸಭೆಯಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

Date:

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ  ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು.

ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದಲ್ಲಿರುವ ಗಡಿ ಕ್ಷೇತ್ರವಾಗಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆ ಹೆಚ್ಚಾಗಿದೆ. ಬೇರೆ ಭಾಗಗಳಿಗೆ ಹೋಲಿಸಿದರೆ ನಮ್ಮಲ್ಲಿ ಸಮಸ್ಯೆ ಬಹಳಷ್ಟಿದ್ದು, ಇದರಿಂದ ಬಡ ರೋಗಿಗಳು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಸ್ಯೆಯ ಗಂಭೀರತೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. 

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೂಚಿಸುವ ಔಷಧ ಹೊರಗಿನಿಂದ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಬಡ ರೋಗಿಗಳ ಮೇಲೆ ಆರ್ಥಿಕ ಭಾರ ಬೀಳುತ್ತಿದೆ. ಆದ್ದರಿಂದ ತಕ್ಷಣವೇ ಅಗತ್ಯ ಔಷಧಿಗಳ ಸಮರ್ಪಕ ಪೂರೈಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ ಅವರು, ಕೆಎಸ್ಎಂಎಸ್ಸಿಎಲ್ ಮೂಲಕ ಔಷಧ ಪೂರೈಕೆ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸುವ ಕಾರ್ಯ ನಡೆಯುತ್ತಿದ್ದು, ಟೆಂಡರ್ ಆಗಿದೆ. ಖರೀದಿ ಆದೇಶಗಳಾಗಿವೆ. ಮುಂದಿನ ದಿನಗಳಲ್ಲಿ ಔಷಧ ಕೊರತೆ ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ : ಬೀದರ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸಾಕಷ್ಟು ಲಭ್ಯ; ಗಾಬರಿಗೊಳ್ಳಬೇಡಿ : ಡಿಸಿ ಶಿಲ್ಪಾ ಶರ್ಮಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...