ಬೀದರ್ | ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಭಷ್ಟಾಚಾರ ಆರೋಪ; ಸಿಒಡಿ ತನಿಖೆಗೆ ಆಗ್ರಹ

Date:

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 2010ರಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಅವ್ಯವಹಾರ, ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರದ ಕುರಿತು ಸಿಒಡಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಒತ್ತಾಯಿಸಿದೆ.

ಈ ಕುರಿತು ಬೀದರ್‌ನಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಸಂಘಟನೆಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ಕಟ್ಟಡ ಮತ್ತು ಇತರೆ ನಿರ್ಮಾಣಗಳಲ್ಲಿ ಕಟ್ಟಡ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಹೋರಾಟದ ಫಲವಾಗಿ 2007ರಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲಾಗಿದೆ. ಆದರೆ, ಮಂಡಳಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ” ಎಂದು ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡಳಿಗೆ ಕಾಮಗಾರಿ ಮುಗಿದ ನಂತರ ಸೆಸ್ಸ್ ಬರುತ್ತದೆ. ಇದಲ್ಲದೇ, ಮಂಡಳಿಯಲ್ಲಿ ಕಾರ್ಮಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮತ್ತು ನವೀಕರಣಗೊಳಿಸಲು ವಂತಿಗೆ ತುಂಬುತ್ತಾರೆ. 2007ರಿಂದ ಇಲ್ಲಿಯವರೆಗೆ 13,000 ಕೋಟಿ ರೂ. ಹಣ ಮಂಡಳಿಗೆ ಸಂಗ್ರಹವಾಗಿದೆ. ಆದರೆ, 2010ರ ಅವಧಿಯಲ್ಲಿದ್ದ ಬಿಜೆಪಿ ಸರ್ಕಾರ ಮಂಡಳಿಯ ಹಣವನ್ನು ಲೂಟಿ ಮಾಡಿದೆ. ಅದೇ ರೀತಿ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರವೂ ಕೂಡ ಲ್ಯಾಪ್‌ಟಾಪ್ ಖರೀದಿ ಮತ್ತು ಆರೋಗ್ಯ ತಪಾಸಣೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದೆ” ಎಂದು ದೂರಿದ್ದಾರೆ.

“ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಒಬ್ಬ ಕಾರ್ಮಿಕನಿಗೆ 2,850 ರೂ. ನಿಗದಿ ಮಾಡಿ ಹಣ ಲೂಟಿ ಮಾಡಲಾಗಿದೆ. ಪ್ರತಿ ಜಿಲ್ಲೆಗೆ 33,000 ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನೆಪದಲ್ಲಿ ಪ್ರತಿ ಜಿಲ್ಲೆಯಲ್ಲಿ ರೂ. 9.45 ಕೋಟಿ 00 ಕೋಟಿ ಹಣ ದುಂದು ವೆಚ್ಚ ಮತ್ತು ಲೂಟಿಯಾಗಿದೆ. ಆದರೆ, ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ ದೊರೆತಿಲ್ಲ” ಎಂದು ಕಿಡಿಕಾರಿದ್ದಾರೆ.

“ಪ್ರಸ್ತುತ ಸರ್ಕಾರದಲ್ಲಿ ಸಂತೋಷ ಲಾಡ್ ಅವರು ಕಾರ್ಮಿಕ ಮಂತ್ರಿಯಾಗಿದ್ದಾರೆ. ಅವರ ನೇತೃತ್ವದಲ್ಲಿ ಲ್ಯಾಪ್‌ಟಾಪ್ ಖರೀದಿ ಮತ್ತು ವೈದ್ಯಕೀಯ ತಪಾಸಣೆ ನಡೆಸಲು ಕಾರ್ಮಿಕ ಇಲಾಖೆ ಮುಂದಾಗಿದೆ. ಈಗಿನ ಸರ್ಕಾರ ಲ್ಯಾಪ್‌ಟಾಪ್ ಖರೀದಿ ಮಾಡಿರುವ ಪ್ರಕ್ರಿಯೆ ಕೂಡ ಸಿಒಡಿ ತನಿಖೆಗೆ ಒಳಪಡಿಸಬೇಕು. ಈಗಿನ ಸರ್ಕಾರ ಪುನಃ ವೈದ್ಯಕೀಯ ತಪಾಸಣೆ ಮಾಡುವುದನ್ನು ನಿಲ್ಲಿಸಬೇಕು. ವೈದ್ಯಕೀಯ ತಪಾಸಣೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಬೇಕು” ಎಂದು ಸಂಘಟನೆ ಒತ್ತಾಯಿಸಿದೆ.

ಈ ವೇಳೆ, ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಡಿ. ಶಫಾಯತ್‌ಅಲಿ, ಬಾಬುರಾವ ಹೊನ್ನಾ, ಅಲಿ ಅಹಮದಖಾನ್, ನಜೀರ ಅಹ್ಮದ್, ಸುನೀಲ ವರ್ಮಾ, ಪ್ರಭು ಹೊಚಕನಳ್ಳಿ, ಪ್ರಭು ತಗಣಿಕರ್, ನನ್ನೆಸಾಬ್, ಪಪ್ಪುರಾಜ ಮೇತ್ರೆ, ಇಮಾನವೇಲ್ ಗಾದಗಿ, ಚಾಂದೋಬಾ ಭೋಸ್ಲೆ, ಭೀಮಣ್ಣಾ ಭಂಡೆ, ಗೋವಿಂದ ಅರ್ಜುನ ಭೋಸ್ಲೆ, ಚಾಂದೂಬಾ ಭೋಸ್ಲೆ, ರಾಮಣ್ಣಾ ಅಲ್ಮಾಸಪೂರ, ಮೋಹಿದ್‌ಮಿಯ್ಯಾ, ತುಕಾರಾಮ ಉಪಾರ, ಶಿವರಾಜ ಕಮಠಾಣಾ, ಭದ್ರೇಶ ಉಪಾರ, ರಮೇಶ ಮನ್ನಾಏಖೇಳ್ಳಿ, ವಿಜಯಕುಮಾರ ಉಪಾರ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...