ಬೀದರ್ | ಅಷ್ಟೂರ್ ಜಾತ್ರೆ : ಗ್ರಾ.ಪಂ. ವತಿಯಿಂದ ಐತಿಹಾಸಿಕ ಪುಷ್ಕರಣಿ ಸ್ವಚ್ಛತೆ

Date:

ಜಿಲ್ಲೆಯ ಭಾವೈಕ್ಯತೆಯ ಮಹಾ ಸಂಗಮ ಎಂದೇ ಹೆಸರಾದ ಅಷ್ಟೂರ್ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ (ಮಾ.10) ಮುಂದಿನ ಐದು ದಿನಗಳವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನಾನಾ ಭಾಗಗಳಿಂದ ಸಾವಿರಾರು ಜನರು ಸಾಕ್ಷಿಯಾಗಲಿದ್ದಾರೆ.

ಜಾತ್ರೆ ಹಜರತ್ ಸುಲ್ತಾನ್ ಅಹ್ಮದ್ ಶಾ ವಲಿ ಬಹಮನಿ ದರ್ಗಾ ಪರಿಸರದಲ್ಲಿ ಅಷ್ಟೂರ್ ಗ್ರಾಮ ಪಂಚಾಯತ್ ವತಿಯಿಂದ ಸಿದ್ಧತೆ ನಡೆಯಿತು. ದರ್ಗಾ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಭಕ್ತರ ಆಗಮನಕ್ಕೆ ಸಜ್ಜುಗೊಳಿಸಲಾಗಿದೆ.
​ಜಾತ್ರೆಗೆ ಬರುವ ಸಾವಿರಾರು ಭಕ್ತರ ದಾಹ ತಣಿಸಲು ವಿಶೇಷ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.​

ಗುಂಬಜ್‌ ಎದುರುಗಡೆ ಇರುವ ಐತಿಹಾಸಿಕ ಪುಷ್ಕರಣಿಯನ್ನು ಗ್ರಾಮ ಪಂಚಾಯತ್‌ ವತಿಯಿಂದ ಸ್ವಚ್ಛಗೊಳಿಸಿ, ಅದಕ್ಕೆ ಶುದ್ಧ ನೀರನ್ನು ತುಂಬಿಸುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಅಷ್ಟೂರ್ ಗ್ರಾಮ ಪಂಚಾಯತ್ ಅಧ್ಯಕ್ಷ ಸಂಗಶೆಟ್ಟಿ ಬಸವರಾಜ್, ಉಪಾಧ್ಯಕ್ಷ ರೇಣುಕಾ ರಾಹುಲ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿದೇವಿ ಅವರು ಸ್ಥಳಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲನೆ ನಡೆಸಿದರು.​

ಪಿಡಿಒ ಗಾಯತ್ರಿದೇವಿ ಅವರು ಮಾತನಾಡಿ, ʼಬೀದರ್ ಜಿಲ್ಲೆಯ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಅಷ್ಟೂರ್ ಜಾತ್ರೆ ಸಾಕ್ಷಿಯಾಗಿದೆ. ರಾಜ್ಯ, ದೇಶದ ನಾನಾ ಭಾಗಗಳಿಂದ ಬರುವ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಕಲ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಸ್ವಚ್ಛತೆ ಮತ್ತು ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಿದ್ದೇವೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್ | ವಿದ್ಯಾರ್ಥಿಗಳಿಗೆ ಪುಸ್ತಕ ಓದುವ ಹವ್ಯಾಸ ಬೆಳೆಸುವುದು ಅಗತ್ಯ: ಬಿ.ಎಚ್.ನಿರಗುಡಿ

ಪಂಚಾಯತ ಸಿಬ್ಬಂದಿಗಳಾದ ಗೀತಾ ದೇವೇಂದ್ರ, ನೈನಿತಾಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...