ಬೀದರ್‌ ಎಟಿಎಂ ದರೋಡೆ | ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ: ಈಶ್ವರ್‌ ಖಂಡ್ರೆ

Date:

ಬೀದರ್‌ನ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ಗುರುವಾರ ಹಾಡುಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಇಬ್ಬರು ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ವಿಧಾನಸೌಧದ‌ಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಮೃತರ ಕುಟುಂಬದವರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ. ಈ ನೋವಿನ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜೊತೆ ನಿಲ್ಲುತ್ತದೆ” ಎಂದು ತಿಳಿಸಿದರು.

“ವಿಷಯ ತಿಳಿದ ಕೂಡಲೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಮತ್ತು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕ್ರಮ ವಹಿಸಲು ಸೂಚಿಸಿದ್ದಾಗಿ” ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

17ರಂದು ಮೃತರ ಮನೆಗೆ ಭೇಟಿ

“ಎ.ಟಿ.ಎಂ.ಗೆ ಹಣ ಸಾಗಿಸುವಾಗ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಏನು ಲೋಪ ಆಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು, ನಾಳೆ ತಾವು ಬೀದರ್ ಗೆ ತೆರಳುತ್ತಿದ್ದು, ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...