ಬೀದರ್ | ಮೂಲಸೌಕರ್ಯಕ್ಕೆ ಬ್ಯಾಂಕ್ ಕಾಲೋನಿ ನಿವಾಸಿಗಳ ಆಗ್ರಹ

Date:

ಬೀದರ್ ನಗರದ ಕುಂಬಾರವಾಡ ಸಮೀಪದ ಬ್ಯಾಂಕ್ ಕಾಲೋನಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಕಾಲೊನಿ ನಿವಾಸಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಮಂಗಳವಾರ ನಿಯೋಗದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ.

ಕಾಲೊನಿ ವಾರ್ಡ್ ಸಂಖ್ಯೆ 29-30 ರ ವ್ಯಾಪ್ತಿಯಲ್ಲಿದೆ. ನಗರಸಭೆಗೆ ಸೇರಿ 40 ವರ್ಷಗಳಾದರೂ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳು ಇಲ್ಲ. ಹೀಗಾಗಿ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಂಬಾರವಾಡದಿಂದ ಬೌದ್ಧ ಮಂದಿರ ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದೆ. ದೂಳು ಮನೆಗಳಿಗೆ ಸೇರುತ್ತಿದೆ. ಇದರಿಂದ ಹಿರಿಯರು, ಮಕ್ಕಳ ಆರೋಗ್ಯದ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

ಕಾಲೊನಿ ಸಮಸ್ಯೆಯನ್ನು ಹಿಂದೆ ಸಚಿವರು, ಪೌರಾಯುಕ್ತರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಕೂಡಲೇ ಕುಂಬಾರವಾಡ ಮುಖ್ಯರಸ್ತೆಯಿಂದ ಬೌದ್ಧ ಮಂದಿರದ ವರೆಗಿನ ರಸ್ತೆ ನಿರ್ಮಿಸಬೇಕು ಹಾಗೂ ಕಾಲೊನಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ಪ್ರಮುಖರಾದ ನಾಗಸೇನ್ ಗಾಯಕವಾಡ್, ಸಂಗಮೇಶ ಮೂಲಗೆ, ದತ್ತಾತ್ರೇಯ ಕುಲಕರ್ಣಿ, ಸಿದ್ಧಾರ್ಥ ಕಾಂಬಳೆ, ನರೇಶ್ ಧನ್ನೂರ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...