ಸಾಮಾಜಿಕ ಜಾಲತಾಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶರಣೆ ಅಕ್ಕಮಹಾದೇವಿ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.
ಈ ಕುರಿತು ಸಮಿತಿಯ ಪದಾಧಿಕಾರಿಗಳು ಸೋಮವಾರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬೀದರ್ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.
ಸಾಮಾಜಿಕ ಜಾಲತಾಣದ ಕಾಮೆಂಟ್‌ನಲ್ಲಿ ರಮಾಕಾಂತ ಎಂಬ ವ್ಯಕ್ತಿ ಫೇಸ್‌ಬುಕ್ ಕಾಮೆಂಟ್‌ನಲ್ಲಿ ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿರುವುದು ಖಂಡನೀಯ. ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ತಕ್ಷಣವೇ ಸಂಬಂಧಪಟ್ಟ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬಸವಕಲ್ಯಾಣದಲ್ಲಿ ದಾದಾ ಸಾಹೇಬ್ ಕಾನ್ಶಿರಾಮ್ ಅವರ 92ನೇ ಜಯಂತಿ ಆಚರಣೆ
ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ಗಗನ ಫುಲೆ, ಕಲ್ಲಪ್ಪ ಮರೂರ್, ನಾಗಾರ್ಜುನ ಫುಲೆ ಇದ್ದರು.





