ಭಾರತದ ಸಂವಿಧಾನವು ಯಾವುದೇ ಜಾತಿ, ಧರ್ಮ, ಭಾಷೆಯ ತಾರತಮ್ಮವಿಲ್ಲದೆ ಸಮ ಸಮಾಜದ ನಿರ್ಮಾಣದ ಆಶಯ ಹೊಂದಿದೆ ಎಂದು ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಹೇಳಿದರು.
ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ ವಿದ್ಯಾರ್ಥಿ ಭಾರತಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ 77ನೇ ಗಣರಾಜೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ʼಸಂವಿಧಾನದ ಮೂಲ ಆಶಯ ಸಾಮಾಜಿಕ ನ್ಯಾಯವಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತೀಯ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ದೂರದೃಷ್ಟಿಯಿಂದ ಸಂವಿಧಾನ ರಚನೆಯಾಗಿದೆ. ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳೋಣʼ ಎಂದು ಹೇಳಿದರು.
ಇದನ್ನೂ ಓದಿ : ಬೀದರ್ | 77ನೇ ಗಣರಾಜ್ಯೋತ್ಸವ ದಿನ : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ನಾಗೇಶ ಚೆಲ್ವಾ, ಸದಸ್ಯರಾದ ಅಶೋಕಕುಮಾರ ಚೆಲ್ವಾ, ಮುಖ್ಯಗುರು ಪ್ರಭು ಪಟ್ನೆ ಸೇರಿದಂತೆ ಶಿಕ್ಷಕರಾದ ನೇಹಾ ಚೆಲ್ವಾ, ಮಮತಾ, ರಾಣಿ, ಯಲ್ಲಮ್ಮಾ, ಸಾತ್ವಿಕಾ, ಮಹಾನಂದಾ, ಬಾಲಿಕಾ, ಸನಾ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.





