ಬೀದರ್‌ | ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನ : ಮಹೇಶ ಗೊರನಾಳಕರ್

Date:

‌ಮಹಾರಾಷ್ಟ್ರದಲ್ಲಿ ಸ್ವಾಭಿಮಾನಕ್ಕಾಗಿ ನಡೆದಿರುವ ಭೀಮಾ ಕೋರೆಗಾಂವ್ ಕದನದ 208ನೆಯ ವಿಜಯೋತ್ಸವ ಪ್ರಯುಕ್ತ ಬೀದರ್‌ ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಗುರುವಾರ ಆಚರಿಸಲಾಯಿತು.

ಮನೆ-ಮನೆಗೆ ಅಂಬೇಡ್ಕರ್ ಅನುಷ್ಠಾನ ಸಮಿತಿ, ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ ವಿಜಯೋತ್ಸವ ಸಮಾರಂಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಉಷಾಬಾಯಿ ಬನಸೂಡೆ ಹಾಗೂ ಜ್ಞಾನೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದಶರಥ ಗುರು ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದರು.

ಮನೆ-ಮನೆಗೆ ಅಂಬೇಡ್ಕರ್ ಅಭಿಯಾನದ ಸಂಚಾಲಕ ಮಹೇಶ್ ಗೋರನಾಳಕರ್ ಮಾತನಾಡಿ, ʼ1818ರ ಜನವರಿ 1ರಂದು ಮಹಾರಾಷ್ಟ್ರದಲ್ಲಿ ನಡೆದ ಭೀಮಾ ಕೋರೆಗಾಂವ್ ಯುದ್ಧವು ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ನಡೆದ ಸ್ವಾಭಿಮಾನದ ಹೋರಾಟವಾಗಿದೆ. ಕೇವಲ 500 ದಲಿತ ಯೋಧರು 28 ಸಾವಿರ ಮೆಲ್ಜಾತಿ ಪೇಶ್ವೆ ಪಡೆಗಳನ್ನು ಸೋಲಿಸಿದ್ದು ಐತಿಹಾಸಿಕ ಘಟನೆ. ಈ ಮಹತ್ವದ ಇತಿಹಾಸವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶ, ಜಗತ್ತಿಗೆ ಪರಿಚಯಿಸಿದ್ದಾರೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ಈ ಸಂದರ್ಭದಲ್ಲಿ ನಂದಮ್ಮ ಕುಂದೆ, ಸೊನ್ಮಮ್ಮ ಕಸ್ತೂರೆ, ಶಶಿಕಲಾ ಕಾಂಬಳೆ, ಇಂದುಮತಿ ಸಾಗರ, ನಿವೃತ್ತ ಪೊಲೀಸ್ ಅಧಿಕಾರಿ ಬಸವರಾಜ ಮೆತ್ರೆ, ಸಿದ್ರಾಮಪ್ಪ, ಗಣರಾಜ್ಯೋತ್ಸವ ದಿನಾಚರಣೆ ಸಮಿತಿಯ ಗೌರವಾಧ್ಯಕ್ಷ ಅಂಬಾದಾಸ್ ಗಾಯಕವಾಡ, ಅಧ್ಯಕ್ಷ ಮುಖೇಶ್ ರಾಯ್ ಸೇರಿದಂತೆ ಚಂದ್ರಕಾಂತ ನಿರಾಟೆ, ಅರುಣ ಪಟೇಲ್, ಜಗನ್ನಾಥ ಗಾಯಕವಾಡ, ಗೋಪಾಲ ದೊಡ್ಡಿ, ಋಷಿತ್ ದಾಂಡೆಕರ್, ಜೈಭೀಮ್ ಮಿಠಾರೆ, ಸುಬ್ಬಣ್ಣ ಕರಕ್ಕನಳ್ಳಿ, ಶರಣು ಫುಲೆ, ನವನಾಥ ವಂಟೆ, ಪ್ರಶಾಂತ ಭಾವಿಕಟ್ಟಿ, ರಾಜಶೇಖರ ಹಲಮಡಗೆ, ಶಿವರಾಜ ಅಮಲಾಪೂರ, ನಾಗೇಶ ಸಾಗಾರ, ಧನರಾಜ ಕೊಳಾರ್, ಸತೀಶ್ ದೀನೆ, ಎಂ.ಡಿ.ಅನ್ವರ್ ಶಾ, ಮೊಹಮ್ಮದ್ ಖಾಲಿದ್ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...