ಬೀದರ್‌ | ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ : ಗಂಜಿ, ಸೇಬು ಹಣ್ಣಿನ ಜ್ಯೂಸ್ ಸೇವನೆ

Date:

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಯಥಾಸ್ಥಿತಿ ಕಂಡು ಬಂದಿದೆ.

ಕಳೆದ 18-20 ದಿನಗಳಿಂದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಂಗಳವಾರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡಿದ್ದು, ಅದೇ ಸ್ಥಿತಿ ಬುಧವಾರ ಮುಂದುವರೆದಿದೆ. ವ್ಯತ್ಯಾಸ ಕಂಡು ಬಂದಿದ್ದು, ರಕ್ತದೊತ್ತಡ (ಬಿಪಿ) ಸಧ್ಯ ನಿಯಂತ್ರಣದಲ್ಲಿದೆ. ಉಸಿರಾಟದ ತೊಂದರೆ ಇರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಮುಂದುವರೆಸಲಾಗುತ್ತಿದೆ.
ಮನೆಯಲ್ಲಿಯೇ ಚಿಕಿತ್ಸೆ ಮುಂದುವರೆಸಿದ್ದು, ವೈದ್ಯರು ದಿನದ 24 ಗಂಟೆ ನಿಗಾವಹಿಸಿದ್ದಾರೆ.

ಭೀಮಣ್ಣ ಖಂಡ್ರೆ ಅವರು ಬುಧವಾರ ಬಿಳಿ ಜೋಳದ ಗಂಜಿ ಮತ್ತು ಸೇಬು ಹಣ್ಣಿನ ಜ್ಯೂಸ್ ಸೇವಿಸಿದ್ದಾರೆ. ಅವರ ಆರೋಗ್ಯ ಯಥಾಸ್ಥಿತಿ ಮುಂದುವರೆದಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಳಕಲ್‌ನ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಬಸವಕಲ್ಯಾಣ ಮಹಾಮನೆಯ ಬೆಲ್ದಾಳ ಸಿದ್ದರಾಮ ಶರಣರು ಸೇರಿದಂತೆ ವಿವಿಧ ಗಣ್ಯರು, ಹಿತೈಷಿಗಳು ಖಂಡ್ರೆ ನಿವಾಸಕ್ಕೆ ಭೇಟಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ ಖಂಡ್ರೆ, ಡಾ.ಗೀತಾ ಖಂಡ್ರೆ ಸೇರಿದ ಕುಟುಂಬದ ಎಲ್ಲ ಸದಸ್ಯರನ್ನು ಇಳಕಲ್‌ ಶ್ರೀಗಳು ಮಾತನಾಡಿಸಿ ಎಲ್ಲರಲ್ಲಿ ಧೈರ್ಯ ತುಂಬಿದರು. ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಮತ್ತಿತರರಿದ್ದರು.

ʼಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರು ಲಿಂಗಾಯತ ಸಮಾಜದ ದೊಡ್ಡ ಆಸ್ತಿ. ಡಾ.ಚನ್ನಬಸವ ಪಟ್ಟದ್ದೇವರು, ಡಾ.ಭೀಮಣ್ಣ ಖಂಡ್ರೆ ಅವರ ಗುರುಶಿಷ್ಯರ ಸಂಬಂಧ ಎಲ್ಲರಿಗೂ ಮಾದರಿಯಾಗಿದೆ. ಖಂಡ್ರೆ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಬಸವಣ್ಣನವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಇಳಕಲ್‌ ಶ್ರೀ ಹೇಳಿದರು.

ಇದನ್ನೂ ಓದಿ : ಬೀದರ್‌ | ಸಮಾನತೆಯ ಸಂದೇಶ ಸಾರಿದ ಸಿದ್ದರಾಮೇಶ್ವರರು : ಗುರುಮಹಾಂತ ಸ್ವಾಮೀಜಿ

ʼತಮ್ಮ ತಂದೆ ಡಾ.ಭೀಮಣ್ಣ ಖಂಡ್ರೆ ಅವರ ಮೇಲಿನ ಪ್ರೀತಿ, ಕಾಳಜಿಯಿಂದ ಆರೋಗ್ಯ ವಿಚಾರಿಸಲು ರಾಜ್ಯದ ಮೂಲೆ ಮೂಲೆಯಿಂದ ಮಠಾಧೀಶರು, ಗಣ್ಯರು ಭೇಟಿ ನೀಡುತ್ತಿದ್ದಾರೆ. ತಂದೆಯವರ ಆರೋಗ್ಯ ಸುಧಾರಿಸುತ್ತಿದೆ. ಯಾರೂ ಆತಂಕ ಪಡಬೇಕಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...