ಬೀದರ್ | ಪಾಪನಾಶ ದೇವಸ್ಥಾನ ಪೂಜೆಗೆ ತೆರಳಿದ ಬಿಜೆಪಿ ಮುಖಂಡರು; ಅವಕಾಶ ನೀಡದ ಪೊಲೀಸರು

Date:

ಬೀದರ್ ನಗರದ ಐತಿಹಾಸಿಕ ಪಾಪನಾಶ ಶಿವಲಿಂಗ ದೇವಸ್ಥಾನದಲ್ಲಿ ಪೂಜೆ, ಅಭಿಷೇಕ ಮಾಡಲು ಅವಕಾಶ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಶನಿವಾರ ದೇಗುಲದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಸಂಸದ ಸಾಗರ ಖಂಡ್ರೆ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪೂಜೆ ಮಾಡುವವರಿಗೆ ಸ್ಥಳದಿಂದ ತೊಲಗುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಇಂದು ಬೆಳಿಗ್ಗೆ ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ನಿಗದಿಯಾಗಿದೆ. ಕಾಮಗಾರಿ ಮುಂಚೆ ಪಾಪನಾಶ ದೇವಸ್ಥಾನದಲ್ಲಿ ಪೂಜೆ ನಡೆಸುವುದಾಗಿ ಬಿಜೆಪಿ ಮುಖಂಡರು ಮೊದಲೇ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಬೆಳಿಗ್ಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳುವ ವೇಳೆ ಕಾರ್ಯಕರ್ತರನ್ನು ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಪೊಲೀಸರು ತಡೆದಿದ್ದಕ್ಕೆ ಕಾರ್ಯಕರ್ತರು ರಸ್ತೆ ತಡೆದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕೆಲ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ‘ಪಾಪನಾಶ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಬಿಡುತ್ತಿಲ್ಲ. ಜಿಲ್ಲೆಯಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಜಿಲ್ಲಾಡಳಿತ ಸಹ ಸಂಪೂರ್ಣ ಕಾಂಗ್ರೆಸ್ ಸರ್ಕಾರದೊಂದಿಗೆ ಕೈಜೋಡಿಸಿದೆ. ನಮಗೆ ಪೂಜೆ ಮಾಡಲು ಬಿಡದಿದ್ದರೆ ನಾವೂ ಅವರಿಗೆ ಕಾಮಗಾರಿ ಚಾಲನೆ ಮಾಡಲು ಬಿಡುವುದಿಲ್ಲ’ ಎಂದು ಹೇಳಿದರು.

1004899558
ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಶಾಸಕರಾದ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ್, ಎಂ.ಜಿ. ಮುಳೆ ಮುಖಂಡರಾದ ಪ್ರಕಾಶ್ ಖಂಡ್ರೆ, ಶಶಿಧರ ಹೊಸಳ್ಳಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

ಕೇಂದ್ರದ ‘ಪ್ರಸಾದ’ ಯೋಜನೆಯಡಿ ₹22.41 ಕೋಟಿ ಮೊತ್ತದ‌ ಯೋಜನೆಗೆ 2024ರ ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ದೇವಸ್ಥಾನದ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಪುನಃ ಶಂಕುಸ್ಥಾಪನೆ ಮಾಡಬಾರದು ಎನ್ನುವುದು‌ ಬಿಜೆಪಿ ವಿರೋಧಿಸುತ್ತಿದೆ.

1004899620

ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಬೆಂಬಲಿಗರು ಈಶ್ವರ ಖಂಡ್ರೆ, ಸಾಗರ ಖಂಡ್ರೆ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಪಾಪನಾಶ ದೇವಸ್ಥಾನ ಕಾಲ್ನಡಿಗೆ ಮೂಲಕ ಕಡೆಗೆ ಹೊರಟಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...