ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ಬೀದರ ಜಿಲ್ಲೆಯಾದ್ಯಂತ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 ಅನ್ನು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ 577 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಔರಾದ (13), ಬಸವಕಲ್ಯಾಣ (17), ಭಾಲ್ಕಿ (16), ಬೀದರ (28) ಹಾಗೂ ಹುಮನಾಬಾದ (20) ಕೇಂದ್ರಗಳಲ್ಲಿ ಒಟ್ಟು 28,439 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಇದರಲ್ಲಿ 23,529 ರೆಗ್ಯುಲರ್, 1,439 ಪ್ರೈವೇಟ್ ಫ್ರೆಶರ್ಸ್ ಮತ್ತು 3,471 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಪ್ರಶ್ನೆ ಪತ್ರಿಕೆ ವಿತರಣೆಗಾಗಿ 41 ಮಾರ್ಗಗಳನ್ನು ರಚಿಸಲಾಗಿದ್ದು, 1,364 ಪರೀಕ್ಷಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳು ಅಳವಡಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತದಲ್ಲಿ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯೂ ಕಲ್ಪಿಸಲಾಗಿದೆʼ ಎಂದು ಹೇಳಿದರು.

ʼಮುಖ್ಯ ಅಧೀಕ್ಷಕರು ಕೊಠಡಿ ಮೇಲ್ವಿಚಾರಕರೊಂದಿಗೆ ಮುಂಚಿತವಾಗಿ ಸಭೆ ನಡೆಸಿ ನಿಯಮಾನುಸಾರ ಪರೀಕ್ಷೆ ನಡೆಸಲು ಸೂಚಿಸಬೇಕು. ಪರೀಕ್ಷಾ ಕೇಂದ್ರಗಳ ಹೊರಗೆ ಜನಸಂದಣಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಯಾವುದೇ ದೂರುಗಳಿದ್ದರೆ ಪೊಲೀಸ್ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆʼ ಎಂದು ತಿಳಿಸಿದರು.

ಮಾರ್ಚ್ 22ರಂದು 13 ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಒಟ್ಟು 3,348 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ಬೀದರ್‌ನಲ್ಲಿ ಮಾ.16ರಂದು ಉದ್ಯೋಗ ಮೇಳ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ, ಜಿಲ್ಲಾ ಖಜಾನಾಧಿಕಾರಿ ರವಿ ಹಕಾರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಎಚ್.ಜಿ., ಡಯಟ್ ಪ್ರಾಂಶುಪಾಲ ಮಹಮ್ಮದ್ ಗುಲಶನ್ ಹಾಗೂ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಹಾಗೂ ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...