ಜಗತ್ತಿನ ಅತಿ ದೊಡ್ಡ ಸಂವಿಧಾನ ಭಾರತದಲ್ಲಿದ್ದು, ನಮ್ಮ ದೇಶದ ಮೌಲ್ಯ ತತ್ವಗಳನ್ನು ಹಾಗೂ ಆಡಳಿತಾತ್ಮಕ ಚೌಕಟ್ಟನ್ನು ನಿರ್ಧಾರಿಸುವ ಪವಿತ್ರ ಗ್ರಂಥವಾಗಿದೆ ಎಂದು ಸ್ಪರ್ಧಾ ಜೀನಿಯಸ್ ಅಕಾಡೆಮಿ ಮುಖ್ಯಸ್ಥ ಮನೋಜಕುಮಾರ್ ಬುಕ್ಕಾ ಅಭಿಪ್ರಾಯಪಟ್ಟರು.
ಬೀದರ್ ನಗರದ ಸ್ಪಸ್ಪರ್ಧಾ ಜೀನಿಯಸ್ ಅಕಾಡೆಮಿಯಲ್ಲಿ ಸೋಮವಾರ ಆಯೋಜಿಸಿದ 77ನೇ ಗಣರಾಜೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ʼಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ದೇಶ ಸ್ವಾತಂತ್ರ್ಯ ಪಡೆದಿದೆ. ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಮೌಲ್ಯಯುತವಾದ ಸಂವಿಧಾನ ದೇಶದ ಸಮಗ್ರ ಬೆಳವಣಿಗೆಗೆ ಕಾರಣವಾಗಿದೆʼ ಎಂದರು.ಪ
ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿ, ʼದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಾಂಧೀಜಿ, ಭಗತ್ ಸಿಂಗ್, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಲಕ್ಷ್ಮಿಬಾಯಿ ಸೇರಿದಂತೆ ಅನೇಕ ಮಹಾತ್ಮರು ನಮಗೆ ಆದರ್ಶವಾಗಿದ್ದಾರೆ. ಅವರ ಕೆಚ್ಚೆದೆಯ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ. ದೇಶದ ಸಂವಿಧಾನವನ್ನು ಗೌರವಿಸುವ ಜೊತೆಗೆ ಅದರ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆʼ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಕಾಡೆಮಿಯ ಶಿಕ್ಷಕರಾದ ಮಹಾದೇವಿ ಬುಕ್ಕಾ, ಮೀರಾ ಸ್ವಾಮಿ, ಕೀರ್ತನ, ಸಾರಿಕಾ ಹಾಗೂ ವಿದ್ಯಾರ್ಥಿಗಳು ಇದ್ದರು.
ಇದನ್ನೂ ಓದಿ : ಬೀದರ್ | 77ನೇ ಗಣರಾಜ್ಯೋತ್ಸವ ದಿನ : ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ





