ಬೀದರ್‌ | ಮಿಷನ್ ಮಹಾಬೋಧಿ ಆಂದೋಲನಕ್ಕಾಗಿ ʼದೆಹಲಿ ಚಲೋʼ : ಭಿತ್ತಿಪತ್ರ ಬಿಡುಗಡೆ

Date:

ಮಿಷನ್ ಮಹಾಬೋಧಿ ಮಹಾವಿಹಾರದ ವಿಮೋಚನೆಗಾಗಿ ಭಿಕ್ಕು ಸಂಘದಿಂದ ಫೆ.12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಅತಿದೊಡ್ಡ ರಾಷ್ಟ್ರೀಯ ಚಳುವಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ, ಭಿಕ್ಕು ಸಂಘದದಿಂದ ಔರಾದನಲ್ಲಿ ಜಾಗೃತಿ ಸಭೆ ಹಾಗೂ ಆಂದೋಲನ ಆಯೋಜಿಸಲಾಯಿತು

ಈ ಚಳುವಳಿ ದೇಶದ ಪ್ರತಿಯೊಬ್ಬ ನಾಗರಿಕನ ಹೋರಾಟವಾಗಿದ್ದು, ನ್ಯಾಯ, ಸಮಾನತೆ ಹಾಗೂ ಧರ್ಮಸ್ವಾತಂತ್ರ‍್ಯದ ಪರವಾದ ಮಹತ್ವದ ಚಳುವಳಿಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕನಸಿನ ಭಾರತದ ಸಮಾನತೆ, ಸಂವಿಧಾನ ಮೌಲ್ಯಗಳು ಮತ್ತು ಬೌದ್ಧ ಧರ್ಮದ ಆದರ್ಶಗಳನ್ನು ಆಧಾರವಾಗಿಟ್ಟುಕೊಂಡ ಶಕ್ತಿಶಾಲಿ ರಾಷ್ಟ್ರ ನಿರ್ಮಾಣ ಈ ಚಳುವಳಿಯ ಪ್ರಮುಖ ಗುರಿಯಾಗಿದೆ ಸಂಘಟಕರು ತಿಳಿಸಿದರು.

ʼಫೆ.12ರಂದು ʼದೆಹಲಿ ಚಲೋ’ ಎಂಬ ಘೋಷಣೆಯೊಂದಿಗೆ ಮಿಷನ್ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ ನಡೆಯುವ ಚಳುವಳಿಗೆ ಎಲ್ಲ ವರ್ಗದ ಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಲಾಯಿತು. ಈ ಆಂದೋಲನವು ಭಾರತವನ್ನು ವಿಶ್ವದ ಅತ್ಯಂತ ಶಕ್ತಿಶಾಲಿ, ನ್ಯಾಯಸಮ್ಮತ ಹಾಗೂ ಸಮಾನತೆಯ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವದ ಹೆಜ್ಜೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಪ್ರಮುಖರಾದ ರಾಹುಲ್ ಖಂದಾರೆ, ಕಪಿಲ್ ಗೊಡಬೋಲೆ, ಸುರೇಶ ಜೋಜನಾ, ಪ್ರವೀಣ್ ಕಾರಂಜಿ, ಸಂತೋಷ್ ಶಿಂಧೆ, ಸಂತೋಷ್ ಸೂರ್ಯವಂಶಿ, ಉತ್ತಮ ಗಾಯಕವಾಡ, ಅನಿಲ್ ಭುಜಂಗೆ, ದಿನೇಶ್ ಶಿಂಧೆ, ಬಸವರಾಜ್ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬಸವಕಲ್ಯಾಣ : ಫೆ.12ರಂದು ನವದೆಹಲಿಯಲ್ಲಿ ನಡೆಯಲಿರುವ ಮಿಷನ್ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದ ಭಿತ್ತಿಪತ್ರಗಳನ್ನು ಬಸವಕಲ್ಯಾಣ ನಗರ ಅಂಬೇಡ್ಕರ್‌ ವೃತ್ತದಲ್ಲಿ ಬಿಡುಗಡೆ ಮಾಡಲಾಯಿತು.

ಮುಖಂಡ ಶಂಕರ ಫುಲೆ ಮಾತನಾಡಿ, ʼಈ ಆಂದೋಲನವು ದೇಶದ ಪ್ರತಿಯೊಬ್ಬ ನಾಗರಿಕನ ಚಳುವಳಿಯಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಂವಿಧಾನದ ಮೂಲಕ ಸಮಾನತೆ, ಮತ್ತು ಬೌದ್ಧ ಧರ್ಮದ ಭಾರತವನ್ನು ಬಯಸಿದ್ದರು. ಅವರ ಕನಸಿನ ಭಾರತವನ್ನು ಅಂದರೆ ವಿಶ್ವದ ಅತ್ಯಂತ ಶಕ್ತಿಶಾಲಿ ಭಾರತವನ್ನಾಗಿ ಮಿಷನ್ ಮಹಾಬೋಧಿ ಮಹಾವಿಹಾರ್ ಮುಕ್ತಿ ಪಡೆದುಕೊಳ್ಳುವ ಈ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣʼ ಎಂದರು.

ಇದನ್ನೂ ಓದಿ : ಬೀದರ್‌ | ಗಂಡನ ಮನೆಯವರ ಕಿರುಕುಳ : 11 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ

ಈ ಸಂದರ್ಭದಲ್ಲಿ ಕಪಿಲ್ ಗೊಡಬೋಲೆ, ಸುರೇಶ ಮೂರೆ. ಮಹೇಶ ರಾಗಿ, ಗೌತಮ್ ಜಾಂತೆ, ಕವಿರಾಜ ದೇವಕರ, ಮನೋಜ ಖೆಲೆ, ದೇವಾನಂದ ಟೊಳ್ಳೆ, ಮಹಾದೇವ ಚಂಡಕಾಪುರ, ದತ್ತು ಸುಂಠಾಣೆ, ಸಂದಿಪ ಮುಕಿಂದೆ, ಅಶೋಕ ಸಿಂಧೆ, ದಶರಥ ಕೊಟಮಾಳೆ, ಜೈಭೀಮ ಕೊಳೆ, ಸಾಗರ ರಾಯಗೊಳ, ಆದಿತ್ಯ ಗಾಜರೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...