ಬೀದರ್‌ | ದಲ್ಲಾಳಿಗಳ ಜತೆ ಕೈಜೋಡಿಸುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ದಲ್ಲಾಳಿಗಳ ಮುಖಾಂತರ ಅಕ್ರಮ ವ್ಯವಹಾರ ನಡೆಸಿ ಮೂಲ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆರೋಪಿಸಿದೆ.

ಈ ಸಂಬಂಧ ಕಾರ್ಮಿಕ ಸಚಿವ ಸಂತೋಷ ಲಾಡ್‌ ಅವರು ಬೀದರ್‌ ಭೇಟಿ ನೀಡಿದ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಬೀದರ ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯ ಕೂಲಿ ಕಾರ್ಮಿಕರಿದ್ದಾರೆ. ಅದರಲ್ಲಿ ಅನೇಕ ಜನರು ಅನಕ್ಷರಸ್ಥರಾಗಿದ್ದಾರೆ. ಹೀಗಾಗಿ ಯಾವುದೇ ಇಲಾಖೆಯ ವಿವಿಧ ಸೌಲಭ್ಯಗಳು ಪಡೆಯಬೇಕಾದರೆ ಇಲಾಖೆಗೆ ನೇರ ಅರ್ಜಿ ಸಲ್ಲಿಸಲು ಆಗುವುದಿಲ್ಲ. ಬಹುಶಃ ನೇರ ಅರ್ಜಿ ಸಲ್ಲಿಸಿದರೆ ಅವರ ಅರ್ಜಿಯನ್ನು ರದ್ದುಗೋಳಿಸಿ ಪ್ರೀಜ್ ಮಾಡುತ್ತಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನಕ್ಷರಸ್ಥರನ್ನೇ ಟಾರ್ಗೆಟ್‌ ಮಾಡಿ ದಲ್ಲಾಳಿಗಳ ಮೂಲಕ ಅರ್ಜಿ ಸ್ವೀಕರಿಸಿ ಕಾರ್ಮಿಕ ಇಲಾಖೆಯ ಯೋಜನೆಗೆ ಪರಿಗಣಿಸುತ್ತಾರೆ. ಯೋಜನೆಯ ಲಾಭ ಪಡೆಯಬೇಕಾದರೆ ದಲ್ಲಾಳಿಗಳಿಗೆ ಯೋಜನೆಯ 30% ಕಮೀಷನ್‌ ಹಣ ನೀಡಬೇಕಾಗುತ್ತದೆ. ಇಲ್ಲದಿದರೆ ಇವರ ಅರ್ಜಿ ಪರಿಗಣಿಸದೆ ತಿರಸ್ಕರಿಸಿ ಬಡ ಕಾರ್ಮಿಕರಿಗೆ ಕಛೇರಿಗೆ ದಿನನಿತ್ಯ ಅಲೆದಾಡುವಂತೆ ಮಾಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬೀದರ್ ಜಿಲ್ಲಾ ಕಾರ್ಮಿಕ ಕಚೇರಿಯಲ್ಲಿ ಕೆಲ ಅಧಿಕಾರಿಗಳು ಅನೇಕ ವರ್ಷಗಳಿದ ವರ್ಗಾವಣೆಯಾಗದೆ ಬೀಡು ಬಿಟ್ಟಿದ್ದಾರೆ. ಕೂಡಲೇ ಅವರನ್ನು ವರ್ಗಾವಣೆಗೊಳಿಸಿ ತಪ್ಪಿಸ್ಥ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರಿಗೆ ನೆರವಾಗದ ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ : ಬಿ.ವೈ.ವಿಜಯೇಂದ್ರ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಲ್ಸನ್ ದೊಡ್ಡಮನಿ , ಉಪಾಧ್ಯಕ್ಷ ಪ್ರಶಾಂತ ಹೀರೆಮನಿ, ಯುವ ಘಟಕದ ಜಿಲ್ಲಾಧ್ಯಕ್ಷ ಗುರುದಾಸ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಸಚಿನ್‌ ಕಲಾಲ್‌, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಶಿವಕುಮಾರ್‌ ಸೇರಿದಂತೆ ಹಲವಾರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...