ಬೀದರ್‌ | ಶಿವನಗರ ವಾಕಿಂಗ್ ಪಾತ್‌ ಅಭಿವೃದ್ಧಿಗೆ ಆಗ್ರಹ

Date:

ಬೀದರ್ ನಗರದ ಶಿವನಗರ ಪ್ರದೇಶದಲ್ಲಿರುವ ಸಾರ್ವಜನಿಕ ವಾಕಿಂಗ್ ಪಾತ್‌ನಲ್ಲಿ ಕೈಗೊಂಡಿರುವ ಕಾಮಗಾರಿ ಪೂರ್ಣಗೊಳ್ಳದೆ ಮಧ್ಯದಲ್ಲೇ ನಿಂತಿರುವುದರಿಂದ ಸ್ಥಳೀಯ ನಿವಾಸಿಗಳು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮಹಾನಗರ ಪಾಲಿಕೆ ಚರಂಡಿ ದುರಸ್ತಿ ಕಾಮಗಾರಿಯನ್ನು ಆರಂಭಿಸಿದ್ದರೂ ಅದನ್ನು ಸಂಪೂರ್ಣವಾಗಿ ಪೂರ್ಣಗೊಳಿಸದೆ ಬಿಟ್ಟುಹೋಗಿರುವುದರಿಂದ ಸಾರ್ವಜನಿಕರಿಗೆ ಸಂಚರಿಸಲು ಹಾಗೂ ಜನರಿಗೆ ವಾಕಿಂಗ್ ಮಾಡಲು ಅನಾನುಕೂಲ ಉಂಟಾಗಿದೆ ಎಂದು ನಿವಾಸಿಗಳು ದೂರಿದರು.

ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಶಿವನಗರ ಬಡಾವಣೆಯ ಹಿರಿಯರು, ವೃದ್ಧರು ಹಾಗೂ ಮಕ್ಕಳು ಆರೋಗ್ಯದ ದೃಷ್ಟಿಯಿಂದ ಈ ಸ್ಥಳಕ್ಕೆ ವಾಕಿಂಗ್‌ಗೆ ಬರುತ್ತಾರೆ. ಆದರೆ ಕಾಮಗಾರಿ ಅರ್ಧದಲ್ಲೇ ನಿಂತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಕಿಂಗ್ ಪ್ರದೇಶದ ಸುತ್ತಮುತ್ತ ಅಲ್ಪ ಉಪಹಾರ ಅಂಗಡಿಗಳು ನಿಯಂತ್ರಣವಿಲ್ಲದೆ ಹೆಚ್ಚಾಗಿದ್ದು, ಅಂಗಡಿಗಳಿಂದ ಉಂಟಾಗುವ ಕಸವನ್ನು ಅಲ್ಲಿಯೇ ಬಿಸಾಡುವುದರಿಂದ ಪರಿಸರ ಅಸ್ವಚ್ಛವಾಗಿದ್ದು ದುರ್ವಾಸನೆ ಬೀರುತ್ತಿದೆ. ಇದರಿಂದ ವಾಕಿಂಗ್ ಮಾಡಲು ಬರುವ ಜನರಿಗೆ ಮತ್ತಷ್ಟು ಸಮಸ್ಯೆಗಳು ಎದುರಾಗುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಶಿವನಗರ ವಾಕಿಂಗ್ ಸ್ಥಳವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಆಧುನಿಕ ವಾಕಿಂಗ್ ಟ್ರ್ಯಾಕ್ ನಿರ್ಮಿಸಬೇಕು. ಜೊತೆಗೆ ಸಾರ್ವಜನಿಕರು ವಿಶ್ರಾಂತಿ ಪಡೆಯಲು ಆಸನ ವ್ಯವಸ್ಥೆಗಳನ್ನು ಆಧುನಿಕ ಹೈಟೆಕ್ ಮಾದರಿಯಲ್ಲಿ ನಿರ್ಮಿಸಬೇಕು. ಶಿವನಗರ ಫುಟ್‌ಪಾತ್ ಬಳಿ ನಿರ್ಮಿಸಲು ಉದ್ದೇಶಿಸಿರುವ ಫುಡ್ ಕೋರ್ಟ್ ಯೋಜನೆಯನ್ನು ಕೈಬಿಡಬೇಕು ಹಾಗೂ ನಡೆಯುತ್ತಿರುವ ಫುಟ್‌ಪಾತ್ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಸ್ಥಳೀಯರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ : ಬೀದರ್ | ಅಷ್ಟೂರ್ ಜಾತ್ರೆ : ಗ್ರಾ.ಪಂ. ವತಿಯಿಂದ ಐತಿಹಾಸಿಕ ಪುಷ್ಕರಣಿ ಸ್ವಚ್ಛತೆ

ನಗರ ಪಾಲಿಕೆಯ ಸದಸ್ಯರಾದ ರಾಜು ಚಿಂತಾಮಣಿ, ಶಶಿ ಹೊಸಳ್ಳಿ, ಅಶೋಕಕುಮಾರ್ ಕಾರಂಜಿ, ಗುರುನಾಥ್ ಜಾಂತಿಕರ್, ಶಿವರಾಜ್ ಮಾಡ್ಗಿ, ಆನಂದ್ ಕುಮಾರ್ ಪಬ್ಭಾ, ಸಿ.ಎಸ್. ಪಾಟೀಲ್, ಮಲ್ಲಿಕಾರ್ಜುನ್ ಔರಾದೆ, ಬಂಡೆಪ್ಪ ಕೋಟೆ, ಪಂಡಿತ್ ಶಂಭು, ರಾಜೇಂದ್ರ ಚಿಂತಲ್ ಘಾಟ್, ಶ್ರೀಕಾಂತ್ ಮೋದಿ, ಸಂಗ್ ಶೆಟ್ಟಿ ಮಾನಕರೆ, ಡಾ. ಯು.ಎಸ್. ಪಾಟೀಲ್, ನೀಲಕಂಠ ಉಳ್ಳಾಗಡ್ಡಿ, ಬಿ.ಕಾಶಪ್ಪ, ಧನರಾಜ್ ಲಾಚೋರಿಯ, ರೋಷನ್ ವರ್ಮ, ಮಹಾಲಿಂಗಪ್ಪ ಬೆಲ್ದಾಳೆ ಹಾಗೂ ಗಣೇಶ್ ಭೋಸ್ಲೆ ಸೇರಿದಂತೆ ಬಡಾವಣೆಯ ಅನೇಕ ಹಿರಿಯ ನಾಗರಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...