ಬೀದರ್‌ | ಅಸ್ಪೃಶ್ಯತೆ ಆಚರಣೆ ತಡೆಗೆ ಆಗ್ರಹ

Date:

ಬೀದರ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ದೇವರ ಹೆಸರಿನಲ್ಲಿ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದ್ದು, ಕೂಡಲೇ ಅದನ್ನು ತಡೆಯಬೇಕೆಂದು ದಲಿತ ಯೂನಿಟ್ ಮೂವ್ಮೆಂಟ್ ಸಂಘಟನೆ ಆಗ್ರಹಿಸಿದೆ.

ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರ ಹೆಸರಿಗೆ ಬರೆದ ಮನವಿಯನ್ನು ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ʼಜಿಲ್ಲೆಯ ಅನೇಕ ಗ್ರಾಮಗಳಲ್ಲಿ ದ್ಯಾವಮ್ಮ, ದುರ್ಗಮ್ಮ, ಲಕ್ಷ್ಮಿ ಹಾಗೂ ಮರಿಗಮ್ಮ ದೇವರ ಜಾತ್ರೆಯ ಹೆಸರಿನಲ್ಲಿ ದಲಿತ ಸಮುದಾಯದ ವ್ಯಕ್ತಿಗಳ ಮೇಲೆ ಅಮಾನವೀಯವಾಗಿ ವರ್ತಿಸಲಾಗುತ್ತಿದೆ. ದಲಿತ ಸಮುದಾಯದ ವ್ಯಕ್ತಿಗಳನ್ನು ಪೋತರಾಜ ಚಾಣಿಯನನ್ನಾಗಿಸಿ, ವಿಚಿತ್ರ ವೇಷಧಾರಣೆ ಮಾಡಿಸಿ, ಮದ್ಯಪಾನಕ್ಕೆ ಒತ್ತಾಯಿಸಿ ಸಾರ್ವಜನಿಕರ ಮಧ್ಯೆ ಕುಣಿಸುವುದು ಅನಿಷ್ಟ ಪದ್ಧತಿಯಾಗಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಭಾರತೀಯ ಸಂವಿಧಾನದ 17ನೇ ವಿಧಿಯಂತೆ ಅಸ್ಪೃಶ್ಯತೆ ಸಂಪೂರ್ಣವಾಗಿ ನಿಷೇಧಿಸಲ್ಪಟ್ಟಿದ್ದು, ಆದರೆ ಜಾತಿವಾದಿಗಳು ಅದನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿದ್ದಾರೆ. ಇಂತಹ ಅನಿಷ್ಟ ಆಚರಣೆ ಮಾಡಿದರೆ ಎಸ್.ಸಿ. ಹಾಗೂ ಎಸ್.ಟಿ. ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಆದರೆ ಸ್ಥಳೀಯ ಪೊಲೀಸರು ಅಸ್ಪ್ರಶ್ಯತೆ ಆಚರಣೆ ತಡೆಯುತ್ತಿಲ್ಲʼ ಎಂದು ಆರೋಪಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ಅಸ್ಪೃಶ್ಯತೆ ಆಚರಣೆಗಳನ್ನು ಸಂಪೂರ್ಣವಾಗಿ ತಡೆದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಯೂನಿಟ್ ಮೂವ್ಮೆಂಟ್ ರಾಜ್ಯ ಸಂಘಟನಾ ಸಂಚಾಲಕ ಗೌತಮ ಡಾಕುಳಗಿ ಹಾಗೂ ಸಂಘಟನೆಯ ಪ್ರಮುಖರಾದ ಗೌತಮ್ ದೊಡ್ಡಿ, ಉತ್ತಮ ಕೆಂಪೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...