ಬೀದರ್ | ಅಂಗನವಾಡಿ, ಆಶಾ ಕಾರ್ಯಕರ್ತೆಯರ ಬಿಎಲ್‌ಓ ನೇಮಕ ಹಿಂಪಡೆಯಲು ಆಗ್ರಹ

Date:

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಮತಗಟ್ಟೆ ಅಧಿಕಾರಿಗಳಾಗಿ (ಬಿಎಲ್‌ಓ) ನೇಮಿಸಿರುವ ಕ್ರಮವನ್ನು ತಕ್ಷಣ ಹಿಂಪಡೆಯಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯು ಸಹಾಯಕ ಆಯುಕ್ತ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

ʼಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಕೇಂದ್ರ ಚುನಾವಣಾ ಆಯೋಗವು ಪಾರ್ಲಿಮೆಂಟ್ ಅನುಮೋದನೆ ಪಡೆಯದೇ ನಡೆಸುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಬಿಹಾರ ರಾಜ್ಯದಿಂದ ಆರಂಭಗೊಂಡ ಈ ಪ್ರಕ್ರಿಯೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆʼ ಎಂದು ಸಿಪಿಐ ದೂರಿದೆ.

ʼ2002ರಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಆಧಾರ್, ಮತದಾರ ಚೀಟಿ ಹಾಗೂ ಇತರ ದಾಖಲೆಗಳ ಆಧಾರದ ಮೇಲೆ ಹೆಸರುಗಳನ್ನು ಸೇರಿಸಲಾಗಿದ್ದು, ಮೃತರ ಹೆಸರುಗಳನ್ನು ತೆಗೆದುಹಾಕಲಾಗಿತ್ತು. ಆದರೆ 2025–26ನೇ ಸಾಲಿನ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಚ್ಚು ಕಠಿಣ ಷರತ್ತುಗಳೊಂದಿಗೆ ನಡೆಯುತ್ತಿದೆʼ ಎಂದು ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪ್ರಸ್ತುತ ಕರ್ನಾಟಕದಲ್ಲಿಯೂ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದ್ದು, ಜಿಲ್ಲೆಯಲ್ಲಿಯೂ ಜಿಲ್ಲಾಡಳಿತ ಈ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಕಾರ್ಯಕ್ಕೆ ಕನಿಷ್ಠ ಪದವಿ ಹೊಂದಿರುವ ಸರ್ಕಾರಿ ಖಾಯಂ ನೌಕರರನ್ನು ನೇಮಕ ಮಾಡಬೇಕಾಗಿದ್ದರೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಫಾರಸ್ಸಿನಂತೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಿ.ಎಲ್.ಓ.ಗಳಾಗಿ ನೇಮಕ ಮಾಡಲಾಗಿದೆʼ ಎಂದು ದೂರಿದರು.

ಅಂಗನವಾಡಿ ಕಾರ್ಯಕರ್ತೆಯರು ಗೌರವಧನ ಆಧಾರಿತ ಸಿಬ್ಬಂದಿಯಾಗಿದ್ದು, ಅವರು ಸರ್ಕಾರಿ ಖಾಯಂ ನೌಕರರಲ್ಲ. ಮತದಾರರ ಪರಿಶೀಲನೆಗೆ ಅಗತ್ಯವಿರುವ ನಮೂನೆಗಳು ಇನ್ನೂ ಅವರಿಗೆ ಲಭ್ಯವಾಗಿಲ್ಲದಿರುವುದು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ತಪ್ಪು ಮಾರ್ಗದರ್ಶನ ನೀಡಲಾಗುತ್ತಿರುವುದು ಗಂಭೀರ ಸಮಸ್ಯೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಬಿ.ಎಲ್.ಓ.ಗಳಾಗಿ ನೇಮಕ ಮಾಡಿರುವ ಕ್ರಮವನ್ನು ಹಿಂಪಡೆಯಬೇಕು. ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿನ ತಾರ್ಕಿಕ ವ್ಯತ್ಯಾಸದ ಷರತ್ತುಗಳನ್ನು ತೆಗೆದುಹಾಕಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್ | ವಸತಿ ಗೃಹದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ

ಈ ಸಂದರ್ಭದಲ್ಲಿ ಮುಖಂಡರಾದ ಬಾಬುರಾವ ಹೊನ್ನಾ, ಪಕ್ಷದ ಸಹ ಕಾರ್ಯದರ್ಶಿ ಎಂ.ಡಿ. ಶಫಾಯತ್ ಅಲಿ, ಜಿಲ್ಲಾ ಕಾರ್ಯದರ್ಶಿ ನಜೀರ ಅಹ್ಮದ್ ಮತ್ತಿತರರಿದ್ದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...