ಈ ಬೇಸಿಗೆಯಲ್ಲಿ ಬೀದರ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದ್ದು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದಲ್ಲಿ ಸಾರ್ವಜನಿಕರು ನೇರವಾಗಿ ಸಂಬಂಧಪಟ್ಟ ತಾಲ್ಲೂಕಿನ ತಹಸೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಗಮನಕ್ಕೆ ದೂರವಾಣಿ ಅಥವಾ ನೇರವಾಗಿ ಲಿಖಿತ ರೂಪದಲ್ಲಿ ಗಮನಕ್ಕೆ ತಂದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮವನ್ನು ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕಿಸಬೇಕಾದ ಅಧಿಕಾರಿಗಳ ವಿವರ
ಔರಾದ ತಾಲ್ಲೂಕು : ತಹಸೀಲ್ದಾರ – 7795516277, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 9480856100, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 8618546863
ಕಮಲನಗರ ತಾಲ್ಲೂಕು : ತಹಸೀಲ್ದಾರ – 9916729555, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 9886938068, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 8618546863
ಬೀದರ ತಾಲ್ಲೂಕು : ತಹಸೀಲ್ದಾರ – 9972743266, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 9448654111, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 9448890795
ಭಾಲ್ಕಿ ತಾಲ್ಲೂಕು : ತಹಸೀಲ್ದಾರ – 9880211640, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 9739085273, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 9594165900
ಬಸವಕಲ್ಯಾಣ ತಾಲ್ಲೂಕು : ತಹಸೀಲ್ದಾರ – 9739463725, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 9740692836, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 9686157144
ಹುಲಸೂರು ತಾಲ್ಲೂಕು : ತಹಸೀಲ್ದಾರ – 9108181411, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 9902167846, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 9686157144
ಹುಮನಾಬಾದ್ ತಾಲ್ಲೂಕು : ತಹಸೀಲ್ದಾರ – 8884122484, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 9611040407, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 8073994986
ಚಿಟ್ಟಗುಪ್ಪಾ ತಾಲ್ಲೂಕು : ತಹಸೀಲ್ದಾರ – 9972787919, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ – 8050018901, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 8073994986
ಇದನ್ನೂ ಓದಿ : ಬೀದರ್ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್ ಲ್ಯಾಬ್ ಟೆಕ್ನಿಷಿಯನ್ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ





