ಬೀದರ್‌ | ಯುಜಿಸಿ ನಿಯಮಾವಳಿ ಶೀಘ್ರ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

Date:

ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬೀದರ್‌ ನಗರದ ಶಾಹಗಂಜ ಬುದ್ಧ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಮುಖಂಡರು ಮಾತನಾಡಿ, ʼವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಕಿರುಕುಳ, ದೌರ್ಜನ್ಯ ಮತ್ತು ದಲಿತ ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡದಿಂದ ಉಂಟಾಗುತ್ತಿರುವ ಆತ್ಮಹತ್ಯೆಗಳ ಸರಣಿಯನ್ನು ತಡೆಗಟ್ಟಬೇಕು. ಯುಜಿಸಿ ತಂದಿರುವ 2026ರ ಕರಡು ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆ ಆದೇಶವನ್ನು ತೆರವುಗೊಳಿಸಿ, ಎಸ್.ಸಿ, ಎಸ್.ಟಿ. ವಿದ್ಯಾರ್ಥಿಗಳಿಗೆ ಪ್ರತ್ಯೇಕ ರಕ್ಷಣಾತ್ಮಕ ನಿಯಮಗಳನ್ನು ಜಾರಿಗೊಳಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಯುಜಿಸಿ 2026 ನಿಯಮಾವಳಿಗಳಿಗೆ ನೀಡಿರುವ ತಡೆ ತೆರವುಗೊಳಿಸಬೇಕು. ಎಸ್.ಸಿ., ಎಸ್.ಟಿ., ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಿಯಮಾವಳಿ ಜಾರಿ ವಿಶ್ವವಿದ್ಯಾಲಯಗಳಲ್ಲಿ ಜಾತಿ ದೌರ್ಜನ್ಯ ತಡೆಯಲು ಕಟ್ಟುನಿಟ್ಟಿನ ಕ್ರಮ ರೋಹಿತ್ ವೇಮುಲ ಕಾಯ್ದೆಯನ್ನು ರಾಜ್ಯದಲ್ಲಿ ಕಡ್ಡಾಯ ಜಾರಿಗೊಳಿಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಆಕಸ್ಮಿಕ ಬೆಂಕಿ : ಧಗಧಗನೆ ಹೊತ್ತಿ ಉರಿದ ಎರಡು ಕಾರು!

ಪ್ರತಿಭಟನೆಯಲ್ಲಿ ದಸಂಸ ರಾಜ್ಯ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಚಾಲಕ ರಾಜಕುಮಾರ ವಾಘಮಾರೆ, ಅರುಣ ಪಟೇಲ್ ಸೇರಿದಂತೆ ಪ್ರಮುಖರಾದ ಬಾಬುರಾವ ಹೊನ್ನಾ, ಅಶೋಕ ಗಾಯಕವಾಡ, ರಮೇಶ ಉಮಾಪುರೆ, ಶಿವರಾಜ ತಡಪಳ್ಳಿ, ರಮೇಶ  ಬೆಲ್ದಾರ್, ಸತೀಶ ರತ್ನಾಕರ್, ವಾಮನ ಮೈಸಲಗೆ, ಶಿರೋಮಣಿ ಹಲಗೆ, ನರಸಿಂಗ ಮೇಟಿ, ಝರೆಪ್ಪಾ ವರ್ಮಾ, ಗೌತಮ ಮುತ್ತಂಗಿಕರ್, ವಿಜಯಕುಮಾರ ಭಾವಿಕಟ್ಟಿ, ರಾಹುಲ ಹಾಲಹಿಪ್ಪರ್ಗಾ, ಬಸವರಾಜ ಭಾವಿದೊಡ್ಡಿ, ಸಂತೋಷ ಪಡಸಾಲೆ, ವಿನೋದ ಬಂದಗೆ, ಸಾಯಿ ಸಿಂಧೆ, ಗಾಲೇಬ್ ಹಾಶ್ಮಿ, ಜೈಭೀಮ ಚಿಮನಾಯಕ, ಅಜಯ ದಿನೆ, ಶಿವಕುಮಾರ ಗುನಳ್ಳಿ, ಸಂತೋಷ ಜೊಳದಾಬಕಾ, ಓಂಪ್ರಕಾಶ ರೊಟ್ಟೆ, ಜಗದೀಶ ಬಿರಾದಾರ, ಶಿವಕುಮಾರ ತುಂಗಾ, ಅಭಿ ಕಾಳೆ, ನಜೀರ್ ಅಹ್ಮದ, ಸೈಫ್ ಅಲಿ‌ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...