ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಪುತ್ರ, ಉಸ್ತುವಾರಿ ಸಚಿವರೂ ಆದ ಈಶ್ವರ ಖಂಡ್ರೆ ಅವರ ಸೋಮವಾರ ಸಂಜೆ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಯಾವುದೇ ರೀತಿಯ ಸುಳ್ಳು ಹಾಗೂ ಆಧಾರರಹಿತ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮನವಿ ಮಾಡಿದ್ದಾರೆ.
ʼವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಕಳೆದ ಒಂದು ವಾರದಿಂದ ಬೀದರ್ ನಗರದ ಗುದುಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಮತ್ತಷ್ಟು ಕ್ಷೀಣಿಸುತ್ತಿರುವ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಮನೆಗೆ ಕರೆತರಲಾಗಿದ್ದು, ವೈದ್ಯರ ತಜ್ಞರ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದು, ವೈದ್ಯಕೀಯ ನಿಗಾವಹಿಸಿ ಸೂಕ್ತ ಆರೈಕೆ ಮಾಡಲಾಗುತ್ತಿದೆʼ ಎಂದರು.
ಶತಾಯುಷಿ ಭೀಮಣ್ಣ ಖಂಡ್ರೆ ಅವರು ಇನ್ನೂ ನಮ್ಮೊಂದಿಗೆ ಬದುಕುಳಿಯಲಿ ಎಂದು ರಾಜ್ಯಾದ್ಯಂತ ಅವರ ಅಭಿಮಾನಿ ಬಳಗ ಪ್ರಾರ್ಥಿಸಿಬೇಕು. ಶೀಘ್ರ ಸಂಪೂರ್ಣ ಚೇತರಿಕೆಗಾಗಿ ಅಭಿಮಾನಿಗಳು, ಹಿತೈಷಿಗಳು ಹಾಗೂ ಸಾರ್ವಜನಿಕರೆಲ್ಲರೂ ಪ್ರಾರ್ಥನೆ ಮಾಡುವಂತೆ ಖಂಡ್ರೆ ಅವರು ಮನವಿ ಮಾಡಿದ್ದಾರೆ.





