ಬೀದರ್‌ | ಬಾರದ ಬೆಳೆ ಹಾನಿ ಪರಿಹಾರ : ರೈತರಿಂದ ಜಿಲ್ಲಾಧಿಕಾರಿಗೆ ಮನವಿ

Date:

ಔರಾದ ತಾಲೂಕಿನ ಚಟ್ನಾಳ ಗ್ರಾಮದ ಸುಮಾರು 70 ರೈತರಿಗೆ ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಜಮೆಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ʼಜಿಲ್ಲೆಯ ಎಲ್ಲಾ ಕಬ್ಬಿನ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 2,950 ದರ ನಿಗದಿಪಡಿಸಿ, ಪ್ರತಿ 15 ದಿನಕ್ಕೊಮ್ಮೆ ರೈತರ ಖಾತೆಗಳಿಗೆ ಹಣ ಪಾವತಿಸುವುದಾಗಿ ನೀಡಿದ ಆಶ್ವಾಸನೆಯನ್ನು ಪಾಲಿಸುತ್ತಿಲ್ಲ. ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ ಹಲವು ರೈತರಿಗೆ ಪರಿಹಾರ ಇನ್ನೂ ಜಮೆಯಾಗಿಲ್ಲ. ಈ ಬಗ್ಗೆ ಮರುಪರಿಶೀಲಿಸಿ ರೈತರಿಗೆ ಪರಿಹಾರ ವಿತರಿಸಬೇಕುʼ ಎಂದರು.

ಜಿಲ್ಯಾದ್ಯಂತ ಕಬ್ಬು ಕಟಾವು ಮಾಡುವ ಕೂಲಿ ಆಳುಗಳ ಕೊರತೆ, ಬೆಳೆ ವಿಮೆ ಪರಿಹಾರದ ವಿಳಂಬ, ತೊಗರಿ ಖರೀದಿ ಕೇಂದ್ರಗಳ ಆರಂಭದ ಅಗತ್ಯ, ಹೊರ ರಾಜ್ಯಗಳಿಂದ ಕಬ್ಬು ತರದಂತೆ ನಿರ್ಬಂಧ ವಿಧಿಸಬೇಕು. ಎಪಿಎಂಸಿಗಳಲ್ಲಿ ಅಕ್ರಮ ಕಡತ ಮತ್ತು ಕಮಿಷನ್ ವಸೂಲಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ರಾಜ್ಯಪಾಲರ ನಡೆ ಸಂವಿಧಾನದ ಆತ್ಮಕ್ಕೆ ಹೊಂದಿಕೆಯಾಗಿಲ್ಲ : ಈಶ್ವರ ಖಂಡ್ರೆ ವಿಷಾದ

ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಸೇರಿದಂತೆ ಪ್ರಮುಖರಾದ ಬಾಬು ಮಾದಪ್ಪಾ, ರಾಜಕುಮಾರ ಪಾಟೀಲ, ಪ್ರಕಾಶ ಬಾವಗೆ, ಗಣಪತಿ ಕಾಶೆಪ್ಪಾ, ಶ್ರೀನಿವಾಸ ಶಾಮರಾವ, ಗುರುನಾಥ ಮಾಣಿಕರಾಯ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...