ಬೀದರ್‌ | ಗಾಂಜಾ ಸಾಗಾಟ : ₹19.77 ಲಕ್ಷ ಮೌಲ್ಯದ ಸ್ವತ್ತು ಜಪ್ತಿ; ಹೊರ ರಾಜ್ಯದ 2 ಬಂಧನ

Date:

ತೆಲಂಗಾಣದಿಂದ ಮಹಾರಾಷ್ಟ್ರದ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹19.77 ಲಕ್ಷ ಮೌಲ್ಯದ ಗಾಂಜಾವನ್ನು ಔರಾದ್‌ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಔರಾದ್‌ ತಾಲೂಕಿನ ಗಡಿ ಗ್ರಾಮ ಜಂಬಗಿಯಿಂದ ಸೋರಳ್ಳಿ ಮಾರ್ಗವಾಗಿ ಮಹಾರಾಷ್ಟ್ರ ಮುಂಬೈ ಕಡೆಗೆ ಮಾರಾಟ ಮಾಡುವ ಉದ್ದೇಶದಿಂದ ಬೈಕ್‌ ಮೇಲೆ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸಂತಪೂರ ಠಾಣೆಯ ಪೊಲೀಸರು ಮಾ.9ರಂದು ದಾಳಿ ನಡೆಸಿದ್ದಾರೆ. ಬಂಧಿತರಿಂದ ₹19.47 ಲಕ್ಷ ಮೌಲ್ಯದ 30.950 ಕೆ.ಜಿ. ಗಾಂಜಾ ಹಾಗೂ ₹30 ಸಾವಿರ ಮೌಲ್ಯದ ಒಂದು‌ ಬೈಕ್ ಜಪ್ತಿ ಮಾಡಿದ್ದಾರೆ.

ತೆಲಂಗಾಣದ ನಾರಾಯಣಖೇಡ್‌ ತಾಲೂಕು ಮೂಲದವಾರದ ಪವನ ನಾರಾಯಣ ಚವ್ಹಾಣ ಹಾಗೂ ಕಿಶನ್‌ ಲಕ್ಷ್ಮಣ ರಾಠೋಡ್‌ ಬಂಧಿತರು. ಇವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ʼನಾವಿಬ್ಬರು ಓಡಿಶಾ ರಾಜ್ಯದ ಮಲಕನಗಿರಿ ನಗರದಿಂದ ₹4 ಲಕ್ಷ ಹಣದಿಂದ 40 ಕೆ.ಜಿ ಗಾಂಜಾ ಖರೀದಿಸಿದ್ದೇವೆ. ಅಲ್ಲಿಂದ ರೈಲ್ವೆ ಮೂಲಕ ಹೈದರಾಬಾದ್‌ ಮಾರ್ಗವಾಗಿ ತಾಂಡಾಕ್ಕೆ ತೆರಳಿದೆವು. ಅಲ್ಲಿಂದ ಈಗ ಬೈಕ್‌ ಮೇಲೆ ಬೀದರ್‌ ಮಾರ್ಗವಾಗಿ ರೈಲ್ವೆ ಮೂಲಕ ಮಹಾರಾಷ್ಟ್ರ ಕಡೆಗೆ ಕೊಂಡೊಯ್ಯುತ್ತಿದ್ದೇವೆʼ ಎಂದು ಬಾಯ್ಬಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಮಗೆ ಶ್ರಮದಾಯಕ ಕೆಲಸ ಮಾಡಲು ಅಸಾಧ್ಯವಾದ ಹಿನ್ನೆಲೆ ದಿಢೀರ ಶ್ರೀಮಂತ ಆಗಬೇಕೆಂಬ ಉದ್ದೇಶದಿಂದ ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಗಾಂಜಾ ಮಾರಾಟ ಮಾಡುತ್ತಿದ್ದೇವೆʼ ಎಂದು ಪೊಲೀಸರಿಗೆ ಉತ್ತರಿಸಿದರು.

ಸಂತಪೂರ ಠಾಣೆಯ ಪಿಎಸ್‌ಐ ದಿನೇಶ ಎಂ.ಟಿ. ನೇತ್ರತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್‌ಐ ಶೇಷರಾವ್ ಹಾಗೂ ಸಿಬ್ಬಂದಿಗಳಾದ ದತ್ತಾತ್ರಿ, ರಾಮರೆಡ್ಡಿ, ಅರುಣಸಿಂಗ್‌, ಕೋಟ್ರೆಶ್‌, ಪ್ರಕಾಶ, ರಾಜಶೇಖರ, ಗೌತಮ, ಸುಭಾಷ ಸೇರಿದಂತೆ ಮತ್ತಿತರರಿದ್ದರು. ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ತಂಡವನ್ನು ಎಸ್ಪಿ ಪ್ರದೀಪ ಗುಂಟಿ ಅವರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ಪರೀಕ್ಷೆ ಭಯ ಬೇಡ, ಹಬ್ಬದಂತೆ ಸಂಭ್ರಮಿಸಿ : ಬಿಇಒ ಸಿ.ಜಿ.ಹಳ್ಳದ

ಈ ಸಂಬಂಧ ಸಂತಪೂರ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ಬಂಧಿಸಿ ನ್ಕಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...