ಬೀದರ್‌ | ಕೆಂಪು ಮಣ್ಣಿನಲ್ಲಿ ಗೋಡಂಬಿ ಬೆಳೆಯಿರಿ

Date:

ಬಂಗಾರದ ಬೆಳೆ ಎಂದೇ ಕರೆಯಲ್ಪಡುವ ಗೋಡಂಬಿ ಬೆಳೆಯನ್ನು ರೈತರು ಕಪ್ಪು ಮಣ್ಣಿನಲ್ಲಿ ಬೆಳೆಯದೆ, ಕೆಂಪು ಮಣ್ಣಿನಲ್ಲಿ ಮತ್ತು ಬಂಜರು ಭೂಮಿಯಲ್ಲಿ ಮಾತ್ರ ಬೆಳೆಯಬೇಕು. ಇದನ್ನು ಬೆಳೆಯಲು ತೋಟಗಾರಿಕೆ ಇಲಾಖೆಯ ಸಹಾಯ ಸಹಕಾರ ಮತ್ತು ತೋಟಗಾರಿಕೆ ವಿಜ್ಞಾನಿಗಳ ತಾಂತ್ರಿಕ ಸಲಹೆ ಪಡೆದು ಹೆಚ್ಚಿನ ಲಾಭ ಪಡೆಯಬೇಕೆಂದು ಬೀದರ ತೋಟಗಾರಿಕಾ ಕಾಲೇಜಿನ ಡೀನ್ ಡಾ.ಎಸ್.ವಿ.ಪಾಟೀಲ್ ಹೇಳಿದರು.

ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ತೋಟಗಾರಿಕೆ ಕಾಲೇಜು ಮತ್ತು ಕೊಚ್ಚಿಯ ಗೋಡಂಬಿ ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯದ ಸಹಯೋಗದಲ್ಲಿ ಬೀದರ ತಾಲೂಕಿನ ಕಮಠಾಣಾ ಗ್ರಾಮದ ನಾಗನಾಥರಾವ ನಿಡೋದೆ ಅವರ ಗೋಡಂಬಿ ಹೊಲದಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಅಡಿಯಲ್ಲಿ ಗೋಡಂಬಿ ಬೆಳೆಯ ಮೇಲೆ ರೈತರಿಗಾಗಿ ಆಯೋಜಿಸಿದ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಎಸ್.ವಿ.ಪಾಟೀಲ್‌ ಅವರು ಮಾತನಾಡಿ, ʼರೈತರು ಶ್ರಮ ಜೀವಿಗಳಾಗಿ ನೈಸರ್ಗಿಕ ಬದುಕನ್ನು ಕಟ್ಟಿಕೊಳ್ಳಬೇಕು. ಗಂಡು ಹೆಣ್ಣು ಎಂಬ ಭೇದ ಭಾವ ಮಾಡದೆ ಎಲ್ಲರೂ ಮೈಮುರಿದು ದುಡಿದು ಸ್ವಾವಲಂಬಿಗಳಾಗಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ನಾಗನಾಥರಾವ ನಿಡೋದೆ ಮಾತನಾಡಿ, ʼನಾಲ್ಕು 14 ವರ್ಷಗಳಿಂದ ಗೋಡಂಬಿ ಬೆಳೆಯುತ್ತೇನೆ. ಉತ್ತಮ ಆದಾಯ ಪಡೆಯುತ್ತಿದ್ದೇನೆ. ಮೂರ್ನಾಲ್ಕು ವರ್ಷ ರೈತರು ಗೋಡಂಬಿ ಬೆಳೆಯಲು ಶ್ರಮಿಸಿದರೆ ನಂತರ ಪ್ರತಿ ವರ್ಷ ನಿರಂತರ ಆದಾಯ ಪಡೆಯಬಹುದು. ಗೋಡಂಬಿ ಬೆಳೆಯನ್ನು ಬೆಳೆಯಲು ರೈತರಿಗೆ ಆರ್ಥಿಕ ಸಹಾಯಧನದ ಯೋಜನೆಯ ಅಗತ್ಯವಿದೆʼ ಎಂದು ಹೇಳಿದರು.

ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರುಗಳಾದ ಡಾ.ವಿ.ಪಿ.ಸಿಂಗ್ ಅವರು ʼಗೋಡಂಬಿ ಉತ್ಪಾದನೆಯಲ್ಲಿ ತಾಂತ್ರಿಕತೆʼ, ಡಾ.ಅಬ್ದುಲ್ ಕರೀಂ ಎಂ. ಅವರು ʼಗೋಡಂಬಿ ಬೆಳೆಯ ರೋಗ ನಿರ್ವಹಣೆʼ, ಡಾ. ರಾಜಕುಮಾರ ಎಂ. ʼಗೋಡಂಬಿ ಬೆಳೆಯ ಕೀಟ ನಿರ್ವಹಣೆʼ ಹಾಗೂ ಡಾ. ಹರೀಶ ಟಿ. ಅವರು ʼಗೋಡಂಬಿ ಸುಗ್ಗಿಯ ನಂತರದ ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳುʼ ವಿಷಯದ ಕುರಿತು ರೈತರಿಗೆ ತಾಂತ್ರಿಕ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

ಇದನ್ನೂ ಓದಿ : ರಾಜ್ಯದ 1 ಲಕ್ಷಕ್ಕೂ ಅಧಿಕ ಮೃತ ಫಲಾನುಭವಿಗಳ ಖಾತೆಗೆ ʼಗೃಹಲಕ್ಷ್ಮಿʼ ಹಣ ಜಮೆ

ಕಾರ್ಯಕ್ರಮದಲ್ಲಿ ತೋಟಗಾರಿಕೆ ಕಾಲೇಜಿನ ಡಾ.ಮಹ್ಮದ್ ಫಾರೂಕ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕುಶಾಲರಾವ, ತೋಟಗಾರಿಕೆ ಕಾಲೇಜಿನ ವಿಜಯ ಮಹಾಂತೇಶ ಹಾಗೂ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...