ಬೀದರ್‌ | ಮೆಣಸಿನಕಾಯಿ ಬೆಳೆಯಿಂದ ಅಧಿಕ ಆದಾಯ : ಡಾ.ಎಸ್.ವಿ.ಪಾಟೀಲ್

Date:

ಮೆಣಸಿನಕಾಯಿ ಬೆಳೆಯ ಹೊಸ ತಳಿಗಳನ್ನು ಕ್ಷೇತ್ರಕ್ಕೆ ಪರಿಚಯಿಸುವ ಮೂಲಕ ರೈತರು ಹೆಚ್ಚಿನ ಲಾಭ ಪಡೆಯಬಹುದೆಂದು ತೋಟಗಾರಿಕೆ ಮಹಾವಿದ್ಯಾಲಯ ಬೀದರ ಡೀನ್ ಡಾ.ಎಸ್.ವಿ.ಪಾಟೀಲ್ ಸಲಹೆ ನೀಡಿದರು.

ಸೋಮವಾರ ಬಸಂತಪೂರ ಗ್ರಾಮದ ರೈತ ಈರಪ್ಪ ಕಾಳೆ ಅವರ ಜಮೀನಿನಲ್ಲಿ ನಡೆದ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ʼಮೆಣಸಿನಕಾಯಿ ಒಂದು ಪ್ರಮುಖ ತೋಟಗಾರಿಕಾ ಹಾಗೂ ವಾಣಿಜ್ಯ ಬೆಳೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಹಸಿ ಮತ್ತು ಒಣ ಮೆಣಸಿನಕಾಯಿಗೆ ಹೆಚ್ಚಿನ ಬೇಡಿಕೆ ಇದೆ. ರೈತರು ಹವಾಮಾನಕ್ಕೆ ತಕ್ಕ ಶಿಫಾರಿತ ತಳಿಗಳನ್ನು ಬೆಳೆಸಿ ವಿದೇಶಗಳಿಗೆ ರಫ್ತು ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದುʼ ಎಂದು ಹೇಳಿದರು.

ಭಾಲ್ಕಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, ʼಕೃಷಿ ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ರೈತರು ಮಣ್ಣು ಪರೀಕ್ಷೆ ಮಾಡಿಸಿ ಅದರ ಆಧಾರದಲ್ಲಿ ಸೂಕ್ತ ತಳಿಗಳನ್ನು ಆಯ್ಕೆ ಮಾಡಿಕೊಂಡರೆ ಹೆಚ್ಚಿನ ಇಳುವರಿ ಪಡೆಯಬಹುದುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಅರವಿಂದಕುಮಾರ ರಾಠೋಡ ಅವರು ಮೆಣಸಿನಕಾಯಿ ಬೀಜೋತ್ಪಾದನೆ ಕುರಿತು ವಿವರಿಸಿದರು.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಅಭಿವೃದ್ಧಿಪಡಿಸಿದ ‘ಕೃಷ್ಣ ಪ್ರಭಾ ರುದ್ರ’ ತಳಿಯ ಪ್ರಾತ್ಯಕ್ಷಿಕೆ ನಡೆಸಿ, ಆಸಕ್ತ ರೈತರಿಗೆ ಬೀಜ ಹಾಗೂ ಸಸಿಗಳನ್ನು ವಿತರಿಸಲಾಯಿತು.

WhatsApp Image 2026 02 17 at 9.03.41 PM

ಬಸಂತಪೂರ ಗ್ರಾಮದ ಪ್ರಗತಿಪರ ರೈತರಾದ ಬಸವರಾಜ ಕಾಳೆ, ಗುರುಲಿಗಪ್ಪ ಪಾಟೀಲ್, ವೆಂಕಟರಾವ ಬಿರಾದಾರ, ನರಸಾ ರೆಡ್ಡಿ, ಸುಭಾಸ್ ಪಾಟೀಲ್ ಅವರು ಮಾತನಾಡಿ, ʼತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರದಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ತೋಟಗಾರಿಕೆ ಬೆಳೆಗಳ ಕ್ಷೇತ್ರೋತ್ಸವಗಳನ್ನು ಆಯೋಜಿಸಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಈಶ್ವರ ಖಂಡ್ರೆ ರಾಜ್ಯದ ಮುಖ್ಯಮಂತ್ರಿಯಾಗಲಿ : ಬಸವಲಿಂಗ ಪಟ್ಟದ್ದೇವರು

ತೋಟಗಾರಿಕೆ ಅಧಿಕಾರಿ ಮಹೆಬೂಬ, ಡಾ. ರಾಜಕುಮಾರ ಎಂ., ಬಸಂತಪೂರ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಉಪಸ್ಥಿತರಿದ್ದರು. ಬೀದರ ವಿಸ್ತರಣಾ ಘಟಕದ ಅಧಿಕಾರಿ ಜಾನವಿ ಡಿ.ಆರ್. ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...