ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಪ್ರಖ್ಯಾತ ಲೇಖಕಿ, ಸಮಾಜ ಸೇವಕಿ ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ, ಶ್ರೀಮಾನ್ ಸಾರ್ವಜನಿಕ ಎಂದೇ ಪ್ರಖ್ಯಾತರಾದ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸಲು ನಿರ್ಧರಿಸಲಾಗಿದ್ದು ಈ ಸಂಬಂಧ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ʼಹೈದರಾಬಾದ್ ಕರ್ನಾಟಕದ ಜನತೆಯ ಬಹುದಿನದ ಅಪೇಕ್ಷೆಯಂತೆ ಈ ಎರಡು ಟ್ರಸ್ಟ್ ಗಳನ್ನು ರಚಿಸುವ ಸಂಬಂಧ ಬಂದಿದ್ದ ಪ್ರಸ್ತಾವನೆಗೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಕೂಡಲೇ ಆದೇಶ ಹೊರಡಿಸುವಂತೆ ಇಲಾಖಾ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆʼ ಎಂದು ಅವರು ಹೇಳಿದ್ದಾರೆ.
ಈ ಇಬ್ಬರು ಮಹನೀಯರು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಜಗತ್ತಿಗೆ ನೀಡಿದ ಕೊಡುಗೆ ಅನನ್ಯವಾದದ್ದು, ಹಾಗಾಗಿ ಈ ಟ್ರಸ್ಟ್‌ಗಳನ್ನು ಅವರ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ರಚಿಸಲಾಗುತ್ತಿದೆ. ಈ ಎರಡು ಟ್ರಸ್ಟ್‌ಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ನೇಮಕ ಮಾಡಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಪ್ರಭುರಾವ ಕಂಬಳಿವಾಲೆ, ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನ ರಚನೆ ನನೆಗುದಿಗೆ : ಬೇಕಿದೆ ಇಚ್ಚಾಶಕ್ತಿ!





