ಬೀದರ್‌ | ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಆಯ್ಕೆ

Date:

ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ ಔರಾದ ತಾಲೂಕು ಘಟಕ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಔರಾದ್‌ ಪಟ್ಟಣದ ಕನ್ನಡ ಭವನದಲ್ಲಿ ತಾಲೂಕಿನ ಸರ್ವ ಸರ್ಕಾರಿ ನೌಕರರು ಸಭೆ ನಡೆದಿದ್ದು, ಸಂಘಕ್ಕೆ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ, ಪ್ರಧಾನ ಕಾರ್ಯದರ್ಶಿ ಅವರನ್ನು ಲೋಕೇಶ ಕೋಟೆ ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಯಿತು.

ಗೋವಿಂದ ಪಾಟೀಲ (ಗೌರವ ಸಲಹೆಗಾರ), ಸಂಜೀವರಡ್ಡಿ ಖಂದಾಡೆ (ಉಪಾಧ್ಯಕ್ಷ), ಫಯಾಜ್ ಕೊಳ್ಳುರ‌ (ಉಪಾಧ್ಯಕ್ಷ), ಸಂಜುಕುಮಾರ ಮುಧಾಳೆ, ನಾಗೇಶ ಪಟ್ನೆ (ಸಂಘಟನಾ ಕಾರ್ಯದರ್ಶಿ), ಉಮಾಕಾಂತ ಮೂಗಟೆ, ಮಿಲಿಂದ ಸೋನಕಾಂಬಳೆ (ಸಹ ಕಾರ್ಯದರ್ಶಿ) ಹಾಗೂ ರಾಮ ಮೊರೆ (ನಿರ್ದೇಶಕರು) ಅವರನ್ನು ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಪಂಡರಿ ಆಡೆ ಮಾತನಾಡಿ, ʼಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘವು 371(ಜೆ) ವಿಶೇಷ ಸ್ಥಾನಮಾನದ ಸಮಸ್ಯೆಗಳು ಎದುರಾದಾಗ ಈ ಭಾಗದ ಎಲ್ಲಾ ಸರ್ಕಾರಿ ನೌಕರರ ಸಮಸ್ಯೆಗಳನ್ನು ಸಂಘಟನಾತ್ಮಕವಾಗಿ ಪರಿಹಾರ ಕಂಡುಕೊಳ್ಳುವ ಸಂಘವಾಗಿದೆ. ಈ ಭಾಗದ ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಸಂವಿಧಾನದ ವಿಶೇಷ ಸ್ಥಾನಮಾನದ ಆಶಯ ಈಡೇರಿಸಲು ದುಡಿಯುವ ಸಂಘವಾಗಿದೆʼ ಎಂದರು.

ʼಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರ ಬಡ್ತಿ, ವರ್ಗಾವಣೆ ಎಲ್ಲಾ ಆದೇಶಗಳು 371(ಜೆ) ವಿಶೇಷ ಸ್ಥಾನಮಾನ 2013 ರಿಂದಲೂ ಪ್ರತ್ಯೇಕ ಆದೇಶ ಹೊರಬೀಳುತ್ತಿದ್ದು, ಸಮಸ್ಯೆಗಳು ಎದುರಾದಾಗ ಅವುಗಳು ಪರಿಹಾರ ಕಂಡುಕೊಳ್ಳದೆ ಉಳಿಯುತ್ತಿವೆ. ಇಂತಹ ಸಂದರ್ಭದಲ್ಲಿ ಈ ಭಾಗದ ಸಂಘಟನೆಯ ಅವಶ್ಯಕತೆ ಇದೆʼ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಸಂಜುಕುಮಾರ ಮೇತ್ರೆ ನುಡಿದರು.

ಇದೇ ಸಂದರ್ಭದಲ್ಲಿ ನಡೆದಾಡುವ ದೇವರೆಂದೇ ಖ್ಯಾತಿ ಪಡೆದ ಲಿಂಗೈಕ್ಯ ಡಾ.ಚನ್ನಬಸವ ಪಟ್ಟದ್ದೇವರ 136ನೇ ಜಯಂತಿ ಆಚರಿಸಲಾಯಿತು.

ಇದನ್ನೂ ಓದಿ : ಬೀದರ್‌ | ಗಡಿ ತಾಲೂಕಿನಲ್ಲಿ ಸಂಭ್ರಮದ ʼನುಡಿ ಜಾತ್ರೆʼ ನಡೆಸಲು ತೀರ್ಮಾನ: ಹೇಗಿದೆ ತಯ್ಯಾರಿ?

ಸಭೆಯಲ್ಲಿ ಸಂಘದ ಪ್ರಧಾನ ಘಟಕ ನಿರ್ದೇಶಕ ಗೋಣಿಬಸಪ್ಪ ಜೋಗೆರ ಸೇರಿದಂತೆ ನೌಕರರಾದ ದಶರಥ ವಾಗ್ಮರೆ, ಭೂಷಣ ಪಾಟೀಲ, ಸುನಿಲ ಜಾಧವ, ಸಂತೋಷ ತಂಬಾಕೆ, ಪ್ರಕಾಶ್ ಬಿರಾದಾರ, ಶಿವಾಜಿ, ಅಮೋಲ ವಾಘಮಾರೆ, ನರಸಪ್ಪ ಕಾಂಬಳೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...