ಬೀದರ್‌ | ಸೃಜನಾತ್ಮಕ ಕಲಿಕೆಗೆ ಕಲಿಕಾ ಹಬ್ಬ ಸಹಕಾರಿ : ಸುನೀಲ ಕಸ್ತೂರೆ

Date:

ಮಕ್ಕಳಲ್ಲಿ ಭಾಷೆಯ ಬೆಳವಣಿಗೆ, ಗಣಿತದ ಕೌಶಲ್ಯಗಳು ಸರಿಯಾಗಿ‌ ಕರಗತ ಮಾಡಿಕೊಳ್ಳಲು ಸೃಜನಾತ್ಮಕ ಕಲಿಕೆಗೆ ಕಲಿಕಾ ಹಬ್ಬ ಉತ್ತಮ ವೇದಿಕೆಯಾಗಿದೆ ಎಂದು ಸರಕಾರಿ ನೌಕರರ ಸಂಘದ ಕಮಲನಗರ ತಾಲ್ಲೂಕಾಧ್ಯಕ್ಷ ಸುನೀಲ ಕಸ್ತೂರೆ ಹೇಳಿದರು.

ಕಮಲನಗರ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿ ಅವರು ಮಾತಾನಾಡಿದರು.

ʼಶಿಕ್ಷಕ ವೃತ್ತಿಯು ಬ‌ಹಳ‌ ಪವಿತ್ರವಾದದ್ದು, ಮಕ್ಕಳ ಕಲಿಕೆಗೆ ಇಂತಹ ಚಟುವಟಿಕೆಗಳು ಜ್ಞಾನ ವೃದ್ಧಿಗೆ ತುಂಬಾ ಉಪಯುಕ್ತವಾಗಿವೆ. ಸರ್ಕಾರಿ ನೌಕರರ ಸಂಘದಿಂದ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ‌ ಮುಂದಿನ ದಿನಗಳಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಿಸಲಾಗುವುದುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ಸಂಯೋಜಕ ಸಂಜೀವಕುಮಾರ ಮೇತ್ರೆ ಮಾತನಾಡಿ, ʼಸರಕಾರಿ ಶಾಲೆಗಳಲ್ಲಿ 1 ರಿಂದ 5ನೇ ತರಗತಿವರೆಗೆ ಓದುವ ಮಕ್ಕಳಿಗಾಗಿ ಶಿಕ್ಷಣ ಇಲಾಖೆಯ ಆದೇಶದಂತೆ ಕಲಿಕಾ ಹಬ್ಬವನ್ನು ಆಯೋಜಿಸಲಾಗಿದೆ. ಮಕ್ಕಳು ಉತ್ಸಾಹದಿಂದ ಕಲಿಯಲು ಕಲಿಕಾ ಹಬ್ಬ ತುಂಬಾ ಸಹಕಾರಿಯಾಗಿದೆʼ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಬಸವರಾಜ ಪಾಟೀಲ್, ʼಕ್ಲಸ್ಟರ್ ವಲಯದ ಎಲ್ಲಾ ಶಾಲೆಗಳ ಮಕ್ಕಳು‌ ಕಲಿಕಾ ಹಬ್ಬದಲ್ಲಿ ಉಲ್ಲಾಸದಿಂದ ವಿವಿಧ ಚಟುವಟಿಕೆಗಲ್ಲಿ ಭಾಗವಹಿಸಿದರು. ಶಿಕ್ಷಕರು, ಮಕ್ಕಳು ಸೇರಿ ರಚಿಸಿರುವ ವಿವಿಧ ಪ್ರಕಾರದ ಪಾಠೋಪಕರಣಗಳ ಪ್ರದರ್ಶನ ಗಮನಸೆಳೆಯಿತುʼ ಎಂದರು.

WhatsApp Image 2025 03 08 at 1.38.34 PM
ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಪತ್ರಕರ್ತ ಎಸ್.ಎಸ್.ಮೈನಾಳೆ ಮಾತನಾಡಿ, ʼಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಹೊಸ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಶಿಕ್ಷಕರು ಪ್ರಾಮಾಣಿಕ ಪ್ರಯತ್ನಿಸಿ ಮಕ್ಕಳಿಗೆ ಪ್ರೋತ್ಸಾಹಿಬೇಕುʼ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ 7 ಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ನಲ್ಲಿ ಬೀದರ್ ಜಿಲ್ಲೆಗೆ ಸಿಕ್ಕಿದ್ದೇನು, ಯಾರು ಏನಂದ್ರು?

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಬಿರಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪ್ರಮುಖರಾದ ಸಚಿನ ಸಿಂಧೆ, ಬಸವರಾಜ ಜಾಗಾವೆ, ರಾಜಕುಮಾರ ವಡಗಾವೆ, ಸಚಿನ್ ಸಿಂಧೆ, ಸಂಜುಕುಮಾರ ಮೇತ್ರೆ, ಬಸವರಾಜ ಮಹಾಜನ, ಬಸವರಾಜ ಜಾಗಾವೆ, ಸಿಆರ್‌ಪಿಗಳಾದ ರೋಹಿದಾಸ ಮೇತ್ರೆ, ನವನಾಥ ಬೊರೋಳೆ ಸೇರಿದಂತೆ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಪಾಲಕರು, ಮಕ್ಕಳು ಪಾಲ್ಗೊಂಡಿದ್ದರು. ವಲಯ ಸಂಪನ್ಮೂಲ ವ್ಯಕ್ತಿ ಮಾದಪ್ಪಾ ಮಡಿವಾಳ ಸ್ವಾಗತಿಸಿದರು. ವಿಜಯಕುಮಾರ ನೂದನೂರೆ ವಂದಿಸಿದರು. ಗೋಪಾಳ ತೆಲಂಗೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...