ಬೀದರ್‌ | ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

Date:

ಬೈಕ್‌ ಮೇಲೆ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ (48) ಮೃತರು. ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ ಎಂದು ತಿಳಿದು ಬಂದಿದೆ.

ಹುಮನಾಬಾದ್‌ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರೆಯಲು ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಬಳಿಕ ಬೈಕ್‌ ಮೇಲಿಂದ ಕೆಳಗೆ ಬಿದ್ದು ಕೆಲವೊತ್ತು ರಕ್ತದ ಮಡವಿನಲ್ಲಿ ಹೊರಳಾಡಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಕ್ರಾಂತಿ ಆಚರಣೆ ವೇಳೆ ಚಿಟಗುಪ್ಪ ತಾಲೂಕಿನಲ್ಲಿ ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯ ಇದೆ. ಈ ಸಂಬಂಧ ಎರಡು ದಿನಗಳ ಹಿಂದೆ ಓರ್ವ ಬಾಲಕನ ಕೈಗೆ ಗಾಳಿಪಟದ ಮಾಂಜಾ ಸಿಲುಕಿ ಗಂಭೀರ ಗಾಯಗೊಂಡಿದ್ದ ಘಟನೆ ನಡೆದಿತ್ತು. ಅದನ್ನು ಮನಗಂಡು ಚಿಟಗುಪ್ಪ ತಹಸೀಲ್ದಾರ್‌ ಮಂಜುನಾಥ ಪಾಂಚಾಳ ಅವರು ತಾಲೂಕಿನಾದ್ಯಂತ ಗಾಳಿಪಟ ಹಾರಿಸುವ ವೈರ್‌ ಮಾಂಜಾ (ದಾರ) ಮಾರಾಟ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರು.

ʼನಾವು ಸ್ಥಳಕ್ಕೆ ಹೋದ ವೇಳೆ ಗಾಳಿಪಟ ದಾರ ಇರಲಿಲ್ಲ. ಘಟನೆಯನ್ನು ಸೂಕ್ತ ತನಿಖೆ ನಡೆಸುತ್ತಿದ್ದೇವೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಮನ್ನಾಏಖೆಳ್ಳಿ ಠಾಣೆಯ ಪೊಲೀಸರು ʼಈದಿನʼಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮಕ್ಕಳ ಮೇಲೆ ಮೊಬೈಲ್ ಪರಿಣಾಮ : ಇಂದಿನಿಂದ ಶಾಹೀನ್ ಸಂಸ್ಥೆಯಿಂದ ಸಮೀಕ್ಷೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...