ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಮಾಂಜಾ ದಾರ ಕುತ್ತಿಗೆ ಸೀಳಿದ ಪರಿಣಾಮ ಸಾವನ್ನಪ್ಪಿರುವ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ದಾರುಣ ಸಾವು ಅತ್ಯಂತ ನೋವುಂಟುಮಾಡಿದೆ ಎಂದು ಸಂಜಕುಮಾರ ಹೊಸಮನಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವರು ವೈಯಕ್ತಿಕವಾಗಿ ಧನ ಸಹಾಯ ನೀಡಿದರು. ಜೊತೆಗೆ ಸರ್ಕಾರದ ಕಡೆಯಿಂದಲೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವೆ ಎಂದು ಭರವಸೆ ನೀಡಿದರು.
ನಿಷೇಧಿತ ಚೀನಾ ಮಾಂಜಾ ದಾರ ಮಾನವ ಜೀವಕ್ಕೆ ಅತ್ಯಂತ ಅಪಾಯಕಾರಿ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಜನಜಾಗೃತಿ ಹಾಗೂ ಕಟ್ಟುನಿಟ್ಟಿನ ಕ್ರಮ ಅಗತ್ಯ. ಸಾರ್ವಜನಿಕರು ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕೆಂದು ಸಚಿವರು ಮನವಿ ಮಾಡಿದರು.
ಇದನ್ನೂ ಓದಿ : ಬೀದರ್ | ಪುರಾತನ ʼಕರೇಜ್ʼಗೆ ಹಾನಿ : ಡಿಸಿ ಶಿಲ್ಪಾ ಶರ್ಮಾ ಭೇಟಿ, ಪರಿಶೀಲನೆ





