ಬೀದರ್‌ | ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಬಲಗೈ ಸಮುದಾಯಗಳ ಬೃಹತ್‌ ಪ್ರತಿಭಟನೆ

Date:

ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಬೀದರ್‌ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಸಮುದಾಯದವರು ಬಾಬಾ ಸಾಹೇಬ್‌ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದರು. ಅಲ್ಲಿಂದ ಭಗತ್‌ ಸಿಂಗ್‌ ವೃತ್ತ ಮಾರ್ಗವಾಗಿ ಮಹಾತ್ಮ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿದರು. ಬಸವೇಶ್ವರ ವೃತ್ತದಿಂದ ಪುನಃ ಭಗತ್‌ ಸಿಂಗ್‌ ವೃತ್ತ, ತಹಸೀಲ್‌ ಕಚೇರಿ, ಜಿಲ್ಲಾ ಕೋರ್ಟ್‌, ಛತ್ರಪತಿ ಶಿವಾಜಿ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಸಮಾವೇಶಗೊಂಡಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದವರು ಕೈಯಲ್ಲಿ‌ ನೀಲಿಧ್ವಜ ಹಿಡಿದು, ಕೊರಳಲ್ಲಿ ನೀಲಿ ಬಣ್ಣದ ಶಾಲು ಧರಿಸಿದರು. ಮೆರವಣಿಗೆಯುದ್ದಕ್ಕೂ ನ್ಯಾ.ನಾಗಮೋಹನದಾದ್‌ ವರದಿಯಲ್ಲಿ ಬಲಗೈ ಸಮುದಾಯಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂಬ ಘೋಷಣೆಗಳು ಮೊಳಗಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಡರ್‌ ವೃತ್ತದಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಸಮುದಾಯ ಪ್ರಮುಖರು ಮಾತನಾಡಿ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

WhatsApp Image 2026 03 17 at 5.19.48 PM 1

ಬಲಗೈ ಸಮುದಾಯದ ಮುಖಂಡರು ಮಾತನಾಡಿ, ʼ2025ರ ಆ.4ರಂದು ನ್ಯಾ.ನಾಗಮೋಹನ ದಾಸ್ ಅವರು ಸರ್ಕಾರಕ್ಕೆ ಸಲ್ಲಿಸಿರುವ ಒಳ ಮೀಸಲಾತಿ ವರದಿ ಅವೈಜ್ಞಾನಿಕ ಹಾಗೂ ದೋಷಪೂರಿತವಾಗಿದ್ದು, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸಲ್ಲಿಸಲಾಗಿದೆ. ಈ ವರದಿಯ ಆಧಾರದ ಮೇಲೆ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ಬಲಗೈ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆʼ ಎಂದು ಆರೋಪಿಸಿದರು.

ಜೇಷ್ಠತಾ ಸಂರಕ್ಷಣಾ ಕಾಯ್ದೆ ಜಾರಿಯಲ್ಲಿದ್ದರೂ ವಿವಿಧ ಇಲಾಖೆಗಳು ಬಡ್ತಿ ಮೀಸಲಾತಿಯಲ್ಲಿ ವಂಚನೆಯಾಗುತ್ತಿದೆ. ಒಳ ಮೀಸಲಾತಿ ಹಾಗೂ ರೋಸ್ಟರ್ ಬಿಂದುಗಳ ನಿಗದಿಯಲ್ಲಿ ಅನೇಕ ಗೊಂದಲಗಳಿದ್ದು, ಅವುಗಳನ್ನು ತಕ್ಷಣ ಸರಿಪಡಿಸಬೇಕು. ಸರ್ಕಾರದ ವಿವಿಧ ಆದೇಶಗಳಲ್ಲಿ ಮೀಸಲಾತಿ ರೋಸ್ಟರ್ ಬಿಂದುಗಳನ್ನು ಅವೈಜ್ಞಾನಿಕವಾಗಿ ನಿಗದಿಪಡಿಸಿರುವುದನ್ನು ಪರಿಷ್ಕರಿಸಿ, ಹಳೆಯ ನಿಯಮಾವಳಿಗಳ ಆಧಾರದ ಮೇಲೆ ಹೊಸ ರೋಸ್ಟರ್ ವ್ಯವಸ್ಥೆ ಜಾರಿಗೆ ತರಬೇಕು. ಜೇಷ್ಠತಾ ಸಂರಕ್ಷಣಾ ಕಾಯ್ದೆ ಜಾರಿಗೊಳಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ದೂರಿದರು.

ʼಬ್ಯಾಕ್‌ಲಾಗ್ ಹುದ್ದೆಗಳನ್ನು ಒಂದೇ ಬಾರಿ ಮುಂಬಡ್ತಿ ಮೂಲಕ ಭರ್ತಿ ಮಾಡುವುದು, ತಪ್ಪು ಸ್ಪಷ್ಟೀಕರಣ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಹಾಗೂ ವಿವಿಧ ಇಲಾಖೆಗಳ ಗೊಂದಲಮಯ ಅಭಿಪ್ರಾಯಗಳನ್ನು ಹಿಂಪಡೆಯಬೇಕು. ಒಳ ಮೀಸಲಾತಿ ಗೊಂದಲಗಳು ಪರಿಹಾರವಾಗುವ ತನಕ ಪ್ರಸ್ತುತ ಮೀಸಲಾತಿ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಹಳೆಯ ಮೀಸಲಾತಿ ವ್ಯವಸ್ಥೆಯನ್ನೇ ಮುಂದುವರಿಬೇಕುʼ ಎಂದು ಒತ್ತಾಯಿಸಿದರು.

ಹಕ್ಕೊತ್ತಾಯಗಳು :

ʼಒಳ ಮೀಸಲಾತಿ ವರದಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವರೆಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಜಾರಿಯಲ್ಲಿರುವ ಕ್ರಮಗಳಿಗೆ ತಕ್ಷಣ ತಡೆಯಾಜ್ಞೆ ನೀಡಬೇಕು. ಹೊಸ ಜಾತಿ ಪ್ರಮಾಣ ಪತ್ರ ವಿತರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಹಳೆಯ ಪ್ರಮಾಣ ಪತ್ರವನ್ನೇ ಮುಂದುವರಿಸಬೇಕು. ಒಳಮೀಸಲಾತಿಗೆ ಅನ್ವಯಿಸಿರುವ ರೋಸ್ಟರ್ ಬಿಂದುಗಳನ್ನು ಪರಿಷ್ಕರಿಸಿ ಸರಿಪಡಿಸಬೇಕು. ಗೊಂದಲಗಳು ನಿವಾರಣೆಯಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆಯನ್ನೇ ಅನುಸರಿಸಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಲಗೈ ಸಮುದಾಯಗಳಿಗೆ ಅನ್ಯಾಯವಾಗದಂತೆ ತೀರ್ಮಾನ ಕೈಗೊಳ್ಳಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.

WhatsApp Image 2026 03 17 at 5.19.49 PM

ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಮಹೇಶ ಗೋರನಾಳಕರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಕಾಶ ರಾವಣ, ಪ್ರದೀಪ ನಾಟೇಕರ್, ಪವನ ಮಿಠಾರೆ, ರಾಹುಲ್ ಡಾಂಗೆ, ಭೀಮರಾವ ಮಾಲಗತ್ತಿ, ಸೂರ್ಯಕಾಂತ ಸಾದುರೆ, ವಿನೋದ ಬಂದಗೆ, ಸಂಜುಕುಮಾರ ಸಾಗರ ಹಾಗೂ ಅರುಣ ಪಟೇಲ್, ಸಮಿತಿಯ ಸಲಹೆಗಾರರಾದ ಮಾರುತಿ ಬೌದ್ಧೆ, ಬಾಬುರಾವ ಪಾಸ್ವಾನ್, ಅನೀಲಕುಮಾರ ಬೆಲ್ದಾರ್, ಶ್ರೀಪತರಾವ ದೀನೆ, ಕಲ್ಯಾಣರಾವ ಭೋಸ್ಲೆ, ರಾಜಕುಮಾರ ಮೂಲಭಾರತಿ, ಶಿವಕುಮಾರ ನೀಲಿಕಟ್ಟಿ, ವಿಠಲದಾಸ ಪ್ಯಾಗೆ, ಕಪಿಲ ಗೊಡಬೊಲೆ, ವಿನೋದ ಅಪ್ಪೆ, ಬಾಬುರಾವ ಟೈಗರ್, ವಿನಯಕುಮಾರ ಮಾಳಗೆ, ರಾಜಕುಮಾರ ಸಿಂಧೆ, ಪ್ರವೀಣ ಕರಂಜಿ, ರಾಜಕುಮಾರ ಮೋರೆ, ಪ್ರಕಾಶ ಸುಲ್ತಾನೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ | ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ : 105 ಸಿಲಿಂಡರ್ ವಶಕ್ಕೆ, ನಾಲ್ವರ ಬಂಧನ

ಪ್ರಮುಖರಾದ ಪ್ರಮೋದ ಶಿಂದೆ, ಉದಯ ನಾಯಕ, ಸಂದೀಪ್ ಕಾಂಟೆ, ಮುಖೇಶ ರಾಯ್, ಲಕ್ಷ್ಮಣ ಕಾಂಬಳೆ, ಸಂಜುಕುಮಾರ ಮೇತ್ರೆ, ಸುನೀಲ ಸಂಗಮ್, ಗಂಜೇಂದ್ರ ಕನಕಟಕರ್, ಮಲ್ಲಿಕಾರ್ಜುನ ಮಹೇಂದ್ರಕುಮಾರ, ಸಂಜುಕುಮಾರ ಭಾವಿಕಟ್ಟಿ, ಮಲ್ಲಿಕಾರ್ಜುನ ಮಾಲೆ, ಮಲ್ಲಿಕಾರ್ಜುನ ಮೊಳಕೆರೆ, ಪ್ರೇಮ ಬುಡಕೆ, ಗಂಗಮ್ಮಾ ಫುಲೆ, ಸುಧಾಮಣಿ ಗುಪ್ತಾ, ರಂಜೀತಾ ಜೈನೋರ್ ಹಾಗೂ ಉಷಾಬಾಯಿ ಬನ್ಸೂಡೆ ಸೇರಿದಂತೆ ಜಿಲ್ಲೆಯ ಅಪಾರ ಸಂಖ್ಯೆಯ ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...