ಬೀದರ್ | ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

Date:

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ ಜಮಾಯಿಸಿದ ನೂರಾರು ಖಾಸಗಿ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದ ಮುಖಂಡರು ಮಾತನಾಡಿ, ‘ಕಳೆದ ಮೂರು ದಶಕಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಶಿಕ್ಷಣ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದ ಆಸರೆಯಾಗಿವೆ. ಆದರೆ ಈ ಶಾಲೆಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ದೊರಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1005004327
ಖಾಸಗಿ ಶಾಲಾ-ಕಾಲೇಜು ಬಂದ್ ಮಾಡಿ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕಳೆದ ಒಂದು ವರ್ಷದಿಂದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡುವ ಭರವಸೆ ನೀಡುತ್ತಲೇ ಬಂದಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅನುದಾನ ನೀಡಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಬಜೆಟ್‌ನಲ್ಲಿ ಯಾವುದೇ ಅನುದಾನ ಘೋಷಿಸದಿರುವುದರಿಂದ ಖಾಸಗಿ ಶಾಲೆಗಳು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತಾಗಿದೆ’ ಎಂದು ತಿಳಿಸಿದ್ದಾರೆ.

‘1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸಬೇಕು. ಬಡಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಆರ್.ಟಿ.ಇ. ಕಾಯ್ದೆಯನ್ನು ಮರು ಜಾರಿಗೊಳಿಸಬೇಕು. ಜೊತೆಗೆ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳೀಕರಿಸಿ ಶಾಲೆಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಪತ್ರ ಮುಖಾಂತರ ಒತ್ತಾಯಿಸಿದರು.

1005004331

ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಮಣಗೀರೆ, ಗೌರವಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ, ಕಾರ್ಯದರ್ಶಿ ಗುರುನಾಥರೆಡ್ಡಿ ಚಿಂತಾಕಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಪ್ರಮುಖರಾದ ಸಂಜು ಶೆಟಕಾರ, ಗುರುನಾಥ ದೇಶಮುಖ, ಮಾಣಿಕಪ್ಪ ಗೊರನಾಳೆ, ಸಂದೀಪ ಶೆಟಕಾರ್, ಗಣಪತಿ ಸೋಲಪುರೆ, ಸಂಜು ಕಂಠಾರ, ಸೈಯದ್ ಅಹ್ಮದ್ ಮುದ್ದೆ, ಸಂಜುಕುಮಾರ ಜಾಂತೆ ಸೇರಿದಂತೆ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...