ಬೀದರ್‌ | ʼಮನರೇಗಾʼ ಬಲ : ವಿಧಾನಸೌಧದಂತೆ ಕಂಗೊಳಿಸುತ್ತಿರುವ ʼಗ್ರಾಮ ಸೌಧʼ!

Date:

ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ಮಿನಿ ವಿಧಾನಸೌಧ ಮಾದರಿಯ ʼಗ್ರಾಮ ಸೌಧʼ ಕಚೇರಿ ಕಟ್ಟಡ ನಿರ್ಮಾಣವಾಗಿದ್ದು, ಅದರ ವಿನ್ಯಾಸ ರಾಜ್ಯಕ್ಕೆ ಮಾದರಿ ಎನ್ನುವಂತಾಗಿದೆ.

1956ರಲ್ಲಿ ಸ್ಥಾಪನೆಯಾದ ಮುಧೋಳ (ಬಿ) ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ 16 ಸದಸ್ಯ ಬಲವಿದೆ. ಹಿಂದೆ ಗ್ರಾಮದ ಬಸ್ ನಿಲ್ದಾಣದ ಸಮೀಪದಲ್ಲಿದ್ದ ಕಟ್ಟಡದ ಬದಲಿಗೆ, 2023ರಲ್ಲಿ ಹೊಸದಾಗಿ ಬಂದ ಪಿಡಿಒ ದತ್ತಾತ್ರಿ ಪೂಜಾರಿ ಅವರ ದೂರದೃಷ್ಟಿಯಿಂದ ಈ ಮಾದರಿ ಪಂಚಾಯತ ಕಟ್ಟಡ ನಿರ್ಮಾಣವಾಗಿ ಗಮನ ಸೆಳೆಯುತ್ತಿದೆ.

ಕಮಲನಗರ–ಔರಾದ್ ಮುಖ್ಯರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಗ್ರಾಮದ ರವಿಕುಮಾರ ಬಿಚಕುಂದೆ ಅವರು 100×80 ಅಳತೆಯ ಜಾಗವನ್ನು ದೇಣಿಗೆಯಾಗಿ ನೀಡಿದ್ದು, 40×50 ಅಳತೆಯಲ್ಲಿ ₹44 ಲಕ್ಷ ವಿವಿಧ ಸರ್ಕಾರದ ಅನುದಾನ ಹಾಗೂ ಗ್ರಾಮಸ್ಥರ ಸಹಕಾರದಿಂದ ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡಿದೆ. 2026ರ ಗಣರಾಜೋತ್ಸವ ದಿನದಂದು ನೂತನ ಕಟ್ಟಡವನ್ನು ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರು ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಸೌಧಕ್ಕೆ ಒಳಗಡೆ ಪ್ರವೇಶಿಸಿದರೆ ಎಡಭಾಗದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಹಾಗೂ ಪಿಡಿಒ ಅವರಿಗೆ ಪ್ರತ್ಯೇಕ ಕೊಠಡಿಗಳು ಇದ್ದು, ಬಲಭಾಗದಲ್ಲಿ ಪ್ರತ್ಯೇಕ ಸಿಬ್ಬಂದಿ ಕೋಣೆ ಹಾಗೂ ವಿಶಾಲ ಸಭಾಂಗಣ ಇದೆ. ಸಭೆ-ಸಮಾರಂಭ ನಡೆಸಲು ಹೊಸ ಕುರ್ಚಿ, ಟೇಬಲ್ ಹಾಗೂ ಆಧುನಿಕ ಸೌಲಭ್ಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಕಟ್ಟಡದ ಮೇಲ್ಭಾಗದಲ್ಲಿ ವಿಧಾನಸೌಧ ಮಾದರಿ ಗೋಪುರ ರಚಿಸಿ, ಅದರ ಮೇಲೆ ಸರ್ಕಾರದ ಲಾಂಛನ ಸೌಧಕ್ಕೆ ಕಟ್ಟಡದ ಶಿಖರವಾಗಿದೆ. ಅಲ್ಲಿಯೇ ರಾಷ್ಟ್ರೀಯ ಧ್ವಜಕಂಬ ನಿರ್ಮಿಸಲಾಗಿದೆ.

ಕಟ್ಟಡ ಮುಂಭಾಗದಲ್ಲಿ ₹3 ಲಕ್ಷ ವೆಚ್ಚದಲ್ಲಿ ಕಾಂಪೌಂಡ್‌ ನಿರ್ಮಿಸಲಾಗಿದ್ದು, ಅದರ ಮೇಲೆ ಗ್ರಾಮ ಸಭೆ, ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ಕಾಯ್ದೆ, ಸ್ವಚ್ಛ ಭಾರತ ಅಭಿಯಾನ, ಪರಿಸರ ರಕ್ಷಣೆ, ನೀರಿನ ಸದ್ಬಳಕೆ, ಉದ್ಯೋಗ ಖಾತ್ರಿ ಯೋಜನೆ, ಭಾರತೀಯ ಸಂವಿಧಾನ, ಮತದಾನ ಮಹತ್ವದ ಕುರಿತು ಬಿಡಿಸಲಾದ ಚಿತ್ತಾರ, ಬರಹಗಳು ಕಣ್ಮನ ಸೆಳೆಯುತ್ತವೆ.

ಗ್ರಾಮಸ್ಥರ ಸಹಭಾಗಿತ್ವ :

ಇಂತಹ ಮಾದರಿ ಕಟ್ಟಡ ನಿರ್ಮಾಣಕ್ಕೆ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ತೋರಿದ ಮುತುವರ್ಜಿ, ಸಹಕಾರವೇ ಕಾರಣವಾಗಿದೆ. ಮಾದರಿ ಪಂಚಾಯತ ಕಟ್ಟಡವೊಂದು ಕಟ್ಟಲೇಬೇಕೆಂಬ ಪಿಡಿಒ ಅವರ ಸತತ ಪ್ರಯತ್ನದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಗ್ರಾಮ ಸ್ವರಾಜ್ಯ ಹಾಗೂ 15ನೇ ಹಣಕಾಸು ಯೋಜನೆ ಅನುದಾನ ಬಲ ಮತ್ತು ಗ್ರಾಮಸ್ಥರ ದೇಣಿ ಕೈಹಿಡಿದ ಫಲವಾಗಿ ಭವ್ಯ ಕಟ್ಟಡ ಪೂರ್ಣಗೊಂಡಿದೆ.

WhatsApp Image 2026 02 25 at 12.44.26 PM

ಸುಂದರ ವಿನ್ಯಾಸ, ಉತ್ತಮ ಗುಣಮಟ್ಟದ ಕಾಮಗಾರಿ ಮತ್ತು ಸುವ್ಯವಸ್ಥಿತ ಸೌಲಭ್ಯಗಳಿಂದ ನಿರ್ಮಾಣಗೊಂಡಿರುವ ಕಟ್ಟಡವು ಗ್ರಾಮಕ್ಕೆ ಹೊಸ ಗುರುತು ತಂದಿದೆ. ಗ್ರಾಮ ಸಭೆ, ತರಬೇತಿ, ಕಾರ್ಯಕ್ರಮ ಹಾಗೂ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಕಟ್ಟಡವು ಬಹು ಉಪಯುಕ್ತವಾಗಲಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಹಾಗೂ ಗ್ರಾಮಸ್ಥರ ಸಹಭಾಗಿತ್ವದಿಂದ ನಿರ್ಮಾಣಗೊಂಡ ಗ್ರಾಮ ಸೌಧ ಗ್ರಾಮಾಭಿವೃದ್ಧಿಗೆ ಸಹಕಾರದ ಉತ್ತಮ ಉದಾಹರಣೆಯಾಗಿದೆ.

ಹೈಟೆಕ್‌ ಗ್ರಂಥಾಲಯ ಕಟ್ಟಡ ನಿರ್ಮಾಣ ಗುರಿ :

ಗ್ರಾಮದ ಸರ್ಕಾರಿ ಶಾಲೆ ಮುಂಭಾಗದಲ್ಲಿರುವ ಹಳೆಯ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಗ್ರಂಥಾಲಯವನ್ನು ಹೈಟೆಕ್ ಮಾದರಿಯಲ್ಲಿ ನಿರ್ಮಿಸುವ ಕನಸು ಶೀಘ್ರವೇ ನನಸಾಗಲಿದ್ದು, ಅದಕ್ಕೆ ಶಾಸಕ ಪ್ರಭು ಚವ್ಹಾಣ ಅವರು ಸ್ಪಂದಿಸಿದ್ದಾರೆ. ಕೆಕೆಆರ್‌ಡಿಬಿ ಯೋಜನೆಯಡಿ ₹20 ಲಕ್ಷ ಅನುದಾನ ನೀಡುವುದಾಗಿ ಅವರು ಭರವಸೆ ನೀಡಿದ್ದು, ಅದೇ ಜಾಗದಲ್ಲಿ ಆಧುನಿಕ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಹೊಸ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆʼ ಎಂದು ಪಿಡಿಒ ದತ್ತಾತ್ರಿ ಪೂಜಾರಿ ತಿಳಿಸಿದ್ದಾರೆ.

ʼಗ್ರಂಥಾಲಯದಲ್ಲಿ ಡಿಜಿಟಲ್ ಪುಸ್ತಕಗಳು, ಇ-ಲರ್ನಿಂಗ್ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಓದುವ ಕೊಠಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಅಧ್ಯಯನ ಸಾಮಗ್ರಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶವಿದೆ. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಶಿಕ್ಷಣಾಭಿವೃದ್ಧಿಗೆ ಸಹಕಾರಿಯಾಗಲಿದೆʼ ಎಂದು ಅವರು ಹೇಳಿದರು.

WhatsApp Image 2026 02 25 at 12.44.25 PM 1

ʼಮನರೇಗಾ ಯೋಜನೆಯಡಿ ₹30 ಲಕ್ಷ ಅನುದಾನದಲ್ಲಿ ಗ್ರಾಮದ ಮಹಾದೇವ ಮಂದಿರ ಕೆರೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು, ₹80 ಲಕ್ಷ ಅನುದಾನದಲ್ಲಿ ರೈತರ ಜಮೀನುಗಳಲ್ಲಿ ಬದು ನಿರ್ಮಾಣ ಹಾಗೂ ಗ್ರಾಮದ ವಿವಿಧ ಓಣಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳು ಕೈಗೊಳ್ಳಲಾಗಿದೆ. ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನದ ಫಲವಾಗಿ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಪಂಚಾಯತ್‌ಗೆ ‘ಕಲಿಕಾ ಕೇಂದ್ರ’ ಸ್ಥಾಪನೆಗಾಗಿ ₹7 ಲಕ್ಷ ಅನುದಾನ ಮಂಜೂರಾಗಿದೆ.

ʼಈ ಅನುದಾನದಲ್ಲಿ ಟಿವಿ, ಸಿಸಿಟಿವಿ, ಪ್ರೊಜೆಕ್ಟರ್ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಗೆ ತರಬೇತಿ ನೀಡುವ ಕಲಿಕಾ ಕೇಂದ್ರ ನಿರ್ಮಿಸಲಾಗುವುದು. ಇದರಿಂದ ಆಡಳಿತದ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ಗ್ರಾಮಸ್ಥರಿಗೆ ಅಗತ್ಯ ಮಾಹಿತಿಗಳು ಸುಲಭವಾಗಿ ಲಭ್ಯವಾಗಲಿವೆ. ಇನ್ನು ಕಟ್ಟಡಕ್ಕೆ ಕಾಂಪೌಂಡ್‌, ಶೌಚಾಲಯ ಕಾಮಗಾರಿ ಪೂರ್ಣಗೊಳಿಸಬೇಕಿದೆʼ ಎಂದರು.

ʼಸರ್ಕಾರ ನೀಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮಕ್ಕೆ ಉಪಯುಕ್ತ ಮೂಲಸೌಕರ್ಯ ನಿರ್ಮಿಸುವುದು ನಮ್ಮ ಮುಖ್ಯ ಗುರಿಯಾಗಿತ್ತು. ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರದಿಂದ ಗ್ರಾಮ ಸೌಧ ಕಟ್ಟಡ ಪೂರ್ಣಗೊಂಡಿದ್ದು, ಕಟ್ಟಡದ ಆವರಣದಲ್ಲಿ ಉದ್ಯಾನವನ ಸೇರಿದಂತೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ” ಎಂದು ಪಿಡಿಒ ದತ್ತಾತ್ರಿ ಪೂಜಾರಿ ‘ಈದಿನ’ಕ್ಕೆ ಮಾಹಿತಿ ನೀಡಿದ್ದಾರೆ.

ʼ1972 ಅವಧಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯಿತಿ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತು. ಅದನ್ನು ಮನಗಂಡು ನೂತನ ಕಟ್ಟಡ ನಿರ್ಮಿಸಬೇಕೆಂಬ ಪಿಡಿಒ ಅವರ ಕನಸಿಗೆ ಸರ್ವ ಸದಸ್ಯರು, ಗ್ರಾಮಸ್ಥರು ಸಹಕರಿಸಿ ಕೈಜೋಡಿಸಿದರು. ಎಲ್ಲರ ಸಹಕಾರದಿಂದ ವಿಧಾನಸೌಧ ಮಾದರಿಯಲ್ಲಿ ಭವ್ಯ ಕಟ್ಟಡ ನಿರ್ಮಿಸಲು ಸಾಧ್ಯವಾಗಿದೆʼʼ ಎಂದು ಗ್ರಾ.ಪಂ.ಸದಸ್ಯ ಗಜಾನಂದ ವಟಗೆ ಅವರು ಖುಷಿ ಹಂಚಿಕೊಂಡರು.

ಕಮಲನಗರ ತಾಲೂಕು ಪಂಚಾಯತ್‌ ಇಒ ಹಣಮಂತ ಕೌಟಗೆ ಮಾತನಾಡಿ, ʼಮುಧೋಳ(ಬಿ) ಗ್ರಾ.ಪಂ. ಕಟ್ಟಡ ನಿರ್ಮಾಣಕ್ಕೆ ಬೀದರ್ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸಹಕಾರ ನೀಡಿದರು. ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಕ್ರಿಯ ಭಾಗವಹಿಸುವಿಕೆ, ಜನಪ್ರತಿನಿಧಿಗಳ ಸಮನ್ವಯ ಮತ್ತು ಅಧಿಕಾರಿಗಳ ಸಹಕಾರ ಹೇಗೆ ಉತ್ತಮ ಫಲಿತಾಂಶ ತರುತ್ತದೆ ಎಂಬುದಕ್ಕೆ ಮುಧೋಳ(ಬಿ) ಗ್ರಾಮ ಪಂಚಾಯಿತಿ ಕಟ್ಟಡವೇ ಉತ್ತಮ ಉದಾಹರಣೆಯಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಇದೇ ರೀತಿಯ ಒಗ್ಗಟ್ಟಿನ ಸಹಕಾರ ಮುಂದುವರಿಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮೋದಿ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಕಾಯ್ದೆಗೆ ಹೆದರಿದ್ದೇಕೆ?

ʼಕಟ್ಟಡ ನಿರ್ಮಾಣಕ್ಕೆ ಒಟ್ಟು ಅಂದಾಜು ₹68 ಲಕ್ಷ ಖರ್ಚಾಗಿದೆ. ಅದರಲ್ಲಿ 44 ಲಕ್ಷ ವಿವಿಧ ಯೋಜನೆಯಿಂದ ಬಳಸಿಕೊಳ್ಳಲಾಗಿದೆ. ಉಳಿದ ಹಣವನ್ನು ಸದಸ್ಯರು, ಪಿಡಿಒ ಅವರು ನೀಡಿ ಕಟ್ಟಡ ಪೂರ್ಣಗೊಳಿಸಲಾಗಿದೆ. ಶಾಸಕ ಪ್ರಭು ಚವ್ಹಾಣ ಅವರು ₹15-20 ಲಕ್ಷ ಶಾಸಕರ ನಿಧಿಯಿಂದ ಕೊಡುವುದಾಗಿ ಪ್ರಭು ಭರವಸೆ ನೀಡಿದ್ದಾರೆ. ಒಬ್ಬ ಅಧಿಕಾರಿ ಮನಸ್ಸು ಮಾಡಿದರೆ ಹೀಗೂ ಮಾದರಿ ಕೆಲಸ ಮಾಡಬಹುದು ಎಂಬುದಕ್ಕೆ ಗಾಂಧಿ ಗ್ರಾಮ ಪುರಸ್ಕೃತ ನಮ್ಮ ಗ್ರಾಮ ಪಂಚಾಯತ್‌ನ ಕಾರ್ಯಗಳೇ ಸಾಕ್ಷಿಯಾಗಿವೆʼ ಎಂದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...