ಬೀದರ್‌ | ಹೊಸ ವರ್ಷಾಚರಣೆ : ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್‌ ಇಲಾಖೆಯ ಸೂಚನೆಗಳೇನು?

Date:

ಹೊಸ ವರ್ಷಾಚರಣೆಯ ವೇಳೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಬೀದರ ಜಿಲ್ಲಾ ಪೊಲೀಸ್‌ ಇಲಾಖೆಯು ಸಾರ್ವಜನಿಕರಿಗೆ ಹಾಗೂ ಹೋಟಲ್‌, ರೇಸಾರ್ಟ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ಜಿಲ್ಲೆಯಲ್ಲಿ ಸಾರ್ವಜನಿಕರು ಯಾವುದೇ ರೀತಿಯ ಅವಘಡ-ಅಪಘಾತಗಳಿಗೆ ಒಳಗಾಗದೆ ಸುರಕ್ಷಿತವಾಗಿ ನೂತನ ವರ್ಷ ಸಂಭ್ರಮಾಚರಣೆ‌ ಮಾಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್‌ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಹೊಸ ವರ್ಷಾಚಾರಣೆ ಕಾಲಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಸುಮಾರು 1,700 ಜನ ಪೊಲೀಸರು ಪಿಕೆಟಿಂಗ್, ಪೇಟ್ರೋಲಿಂಗ್ ಕರ್ತವ್ಯ ನಿರ್ವಹಿಸಲಿದ್ದು, 2 ಕೆಎಸ್‌ಆರ್‌ಪಿ, 10 ಡಿಎಆರ್ ತುಕಡಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ನಗರದಲ್ಲಿ ಅಕ್ಕಪಡೆ ಕರ್ತವ್ಯನಿರತವಾಗಿರಲಿದೆ. 200 ಜನ ಗೃಹ ರಕ್ಷಕ ಸಿಬ್ಬಂದಿಯನ್ನು ಬಂದೋ ಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆʼ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರು ಹೋಟೆಲ್‌, ರೆಸಾರ್ಟ್‌ ಮಾಲೀಕರು ಅನುಸರಿಸಬೇಕಾದ 10 ಅಂಶಗಳು ಹೀಗಿವೆ.

1. ಹೊಸ ವರ್ಷ ಆಚರಣೆಯ ವೇಳೆ ಕಾರ್ಯಕ್ರಮಗಳು ಹಮ್ಮಿಕೊಳ್ಳಬೇಕಾದರೆ ಸಂಬಂಧಪಟ್ಟ ಇಲಾಖೆಯಿಂದ ಹೋಟಲ್‌, ರೇಸಾರ್ಟ್ ಮಾಲೀಕರು ಪೂರ್ವಾನುಮತಿ ಪಡೆಯುವುದು ಅವಶ್ಯಕ.

    2. ಅಬಕಾರಿ ಇಲಾಖೆಯಿಂದ ಪಡೆದ ಅನುಮತಿಯಂತೆ ನಿಗದಿತ ಸಮಯ ಪಾಲಿಸಬೇಕು. ನಿಗದಿಪಡಿಸಿದ ಸೌಂಡ್ ಸಿಸ್ಟಂ ಬಳಸುವುದು.

    3. ಹೋಟಲ್‌, ರೇಸಾರ್ಟ್ ಮಾಲೀಕರು ಸಾರ್ವಜನಿಕರಿಗೆ ಸಂಚಾರಕ್ಕೆ ಅಡೆತಡೆಯಾಗದಂತೆ ಸೂಕ್ತ ವಾಹನ ಪಾರ್ಕಿಂಗ್ ಮಾಡಿಕೊಳ್ಳುವುದು.

    4. ಮಾದಕ ವಸ್ತುಗಳನ್ನು ಬಳಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

    5. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಜನರನ್ನು ಸೇರಿಸುವಂತಿಲ್ಲ.

    6. ಹೊಸ ವರ್ಷ ಆಚರಣೆ ಸ್ಥಳದಲ್ಲಿ ಪಿಸ್ತೂಲ್, ರಿವಾಲ್ವರ್ ಸೇರಿ ಯಾವುದೇ ರೀತಿಯ ಆಯುಧಗಳನ್ನು ಇರಿಸಿಕೊಳ್ಳುವಂತಿಲ್ಲ.

    7. ಹೊಸ ವರ್ಷಚಾರಣೆ ಕಾಲಕ್ಕೆ ಹೋಟಲ್‌, ರೆಸಾರ್ಟ್ ಮಾಲೀಕರು ಭದ್ರತೆಗಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಳ್ಳುವುದು.

    8. ಹೊಸ ವರ್ಷಾಚರಣೆ ಸ್ಥಳದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ನಡೆಸುವಂತಿಲ್ಲ.

    9. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಆಳವಡಿಸುವುದು. ನಂತರ ಸಿಸಿಟಿವಿ ರೇಕಾರ್ಡಿಂಗ್ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಒದಗಿಸಬೇಕು.

    10. ಮದ್ಯ ಸೇವಿಸಿ ವಾಹನ ಚಲಾಯಿಸಿದರೆ 10 ದಂಡ ಹಾಗೂ ಜೈಲು ಶಿಕ್ಷೆಗೆ ಗುರಿಯಾಗಿಸಲಾಗುವುದು ಮತ್ತು ವಾಹನವನ್ನು ಜಪ್ತಿ ಮಾಡಿ ವಾಹನ ಚಾಲನಾ ಪರವಾನಿಗೆ ರದ್ದುಪಡಿಸಲಾಗುವುದು.

    ಇದನ್ನೂ ಓದಿ : 2025 ಹಿನ್ನೋಟ | ಕೃಷಿ-ತಂತ್ರಜ್ಞಾನದಲ್ಲಿ AI ಪ್ರಯೋಗ; ಈ ವರ್ಷ ಸಾಧಿಸಿದ್ದೆಷ್ಟು?

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

    ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

    ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

    ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

    ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

    ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

    ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

    ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...