ಬೀದರ್‌ | ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ : ಮೂರು ಕೇಂದ್ರ‌ ಸೀಜ್

Date:

ಬೆಂಗಳೂರಿನ ಪಿಸಿ ಮತ್ತು ಪಿಎನ್‌ಡಿಟಿ ಉಪನಿರ್ದೇಶಕ ಡಾ.ವಿವೇಕ ದೂರೈ ನೇತ್ರತ್ವದ ತಂಡವು ಜಿಲ್ಲೆಯ ವಿವಿಧೆಡೆ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯ್ದೆ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿದ್ದ ಮೂರು ಕೇಂದ್ರಗಳನ್ನು ಸೀಜ್‌ ಮಾಡಿದ್ದಾರೆ.

ಹುಮನಾಬಾದ, ಭಾಲ್ಕಿ, ಬಸವಕಲ್ಯಾಣ ಮತ್ತು ಔರಾದ(ಬಿ) ತಾಲೂಕಿನಲ್ಲಿ 8 ವಿವಿಧ ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು, ಬಸವಕಲ್ಯಾಣ ನಗರದ ನ್ಯೂ ರೀಫಾ ಆಸ್ಪತ್ರೆ, ಔರಾದ(ಬಿ) ಪಟ್ಟಣದ ವಿಶ್ವ ಮತ್ತು ಮುಗಳೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಭಾಲ್ಕಿ ಪಟ್ಟಣದ ಜೀಜಾಮಾತಾ ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳು ಸೀಜ್‌ ಮಾಡಲಾಗಿದೆ.

ಈ ಮೂರು ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್‌ ಕೇಂದ್ರಗಳು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಆಗಿರುವುದರಿಂದ 3 ಸ್ಕ್ಯಾನಿಂಗ್ ಕೇಂದ್ರಗಳನ್ನು ಸೀಜ್ ಮಾಡಿ, ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ ಪ್ರಕಾರ ಕ್ರಮ ಜರುಗಿಸಲು ಪ್ರಕರಣ ದಾಖಲು ಮಾಡಲಾಗವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ತಮಿಳುನಾಡು ಚುನಾವಣೆ | ದಳಪತಿ ವಿಜಯ್ ಸೆಳೆಯಲು ಖೆಡ್ಡಾ ತೋಡಿತೇ ಬಿಜೆಪಿ?

ಕಾರ್ಯಾಚರಣೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿ ಡಾ. ಧ್ಯಾನೇಶ್ವರ ನಿರುಗುಡೆ, ಜಿಲ್ಲಾ ಪಿಸಿ ಮತ್ತು ಪಿಎನ್‌ಡಿಟಿ ನೋಡಲ್ ಅಧಿಕಾರಿ ಡಾ.ದಿಲೀಪ ಡೊಂಗ್ರೆ, ಪಿಸಿ ಮತ್ತು ಪಿಎನ್‌ಡಿಟಿ ರಾಜ್ಯ ತಪಾಸಣಾ ಮತ್ತು ಮೇಲ್ವಿಚಾರಣೆ ಸಮಿತಿಯ ಸದಸ್ಯ ವಸಂತಕುಮಾರ, ಕಾನೂನು ಸಲಹೆಗಾರರಾದ ಮೋನಿಶಾ ಡಿ.ಎನ್, ದ್ವಿತೀಯ ದರ್ಜೆ ಸಹಾಯಕ ಅನೀಲ್ ಥಾಮಸ್, ಪಿಸಿ ಮತ್ತು ಪಿಎನ್‌ಡಿಟಿ ಕಾರ್ಯಕ್ರಮ ಸಲಹೆಗಾರ ಬನಾಮಾ ಎಸ್ ಸಜ್ಜನ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯ ಡಾ.ಅಬ್ರಾರ್ ಖಾದ್ರಿ, ಡಾ.ಅಶೋಕ ಕಟ್ಟಿಮನಿ, ಪಿಸಿ ಮತ್ತು ಪಿಎನ್‌ಡಿಟಿ ವಿಷಯ ನಿರ್ವಾಹಕ ಮಹೇಶ್ವರ ರಡ್ಡಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...