ಬೀದರ್‌ | ಮಹಿಳಾ ಸಾಕ್ಷರತೆಗೆ ಶ್ರಮಿಸಿದ ಫುಲೆ, ಫಾತಿಮಾ, ರಮಾಬಾಯಿ : ಬೆಲ್ದಾಳ ಶರಣರು

Date:

ಸಾವಿತ್ರಿಬಾಯಿ ಫುಲೆ, ಶೇಖ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಮಹಿಳಾ ಸಾಕ್ಷರತೆಗೆ ಶ್ರಮಿಸಿದ್ದರು. ಹಿಂದುಳಿದ ವರ್ಗಗಳ ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಮುನ್ನೆಲೆಗೆ ತರುವಲ್ಲಿ ಇವರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಬೆಲ್ದಾಳ ಸಿದ್ಧರಾಮ ಶರಣರು ಹೇಳಿದರು.

ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಈಚೆಗೆ ನಡೆದ ಸಾವಿತ್ರಿಬಾಯಿ ಫುಲೆ, ಶೇಖ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ದಿನದರ್ಶಿಕೆ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನೇತೃತ್ವ ವಹಿಸಿದ್ದ ಧನ್ನೂರ (ಎಚ್) ಆಶ್ರಮದ ಸುವರ್ಣಾ ಮಾತಾಜಿ ಮಾತನಾಡಿ, ʼಹೆಣ್ಣು ಮಕ್ಕಳು ಸಾವಿತ್ರಿಬಾಯಿ ಫುಲೆ, ಶೇಖ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ರಾಜ್ಯ ಅಧ್ಯಕ್ಷ ಸಂಗಮೇಶ ಖನ್ನಿನಾಯ್ಕರ್ ಮಾತನಾಡಿ, ʼಸಾಧಕ ಮಹಿಳೆಯರ ಜಯಂತಿ ಆಚರಣೆ ಕಾರ್ಯಕ್ರಮವು ಹೆಣ್ಣು ಮಕ್ಕಳಿಗೆ ಸಾಧನೆಗೆ ಪ್ರೇರಣೆ ಆಗಲಿದೆʼ ಎಂದು ತಿಳಿಸಿದರು.

Teachers Sangh Phule Shaik fatima ramabai Ambedkar Jayanti 2

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಮಾತನಾಡಿ, ʼಕಾರ್ಯಕ್ರಮದಲ್ಲಿ 175ಕ್ಕೂ ಹೆಚ್ಚು ಶಿಕ್ಷಕರನ್ನು ಸನ್ಮಾನಿಸಲಾಗಿದೆ. 40 ಮಂದಿಗೆ ಆದರ್ಶ ದಂಪತಿ ಹಾಗೂ ಸಾವಿತ್ರಿಬಾಯಿ ಫುಲೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆʼ ಎಂದು ಹೇಳಿದರು.

ಸಾವಿತ್ರಿಬಾಯಿ ಫುಲೆ ಅವರ ಕುರಿತು ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಪಾರ್ವತಿ ಸೋನಾರೆ ಹಾಗೂ ಶೇಖ ಫಾತಿಮಾ ಅವರ ಕುರಿತು ದಿಲ್‍ಕಿಸ್ ಫಾತಿಮಾ ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ : ಬೀದರ್‌ | ಪುರಾತನ ʼಕರೇಜ್‌ʼಗೆ ಹಾನಿ : ಡಿಸಿ ಶಿಲ್ಪಾ ಶರ್ಮಾ ಭೇಟಿ, ಪರಿಶೀಲನೆ

ಜಾಫರ್ ಶಕೀಲ್ ಅಹಮ್ಮದ್, ಪರಿಷತ್ ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ಎ., ಮಹಾ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಿರೇಗೌಡ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಳವಂತರಾವ್ ರಾಠೋಡ್, ಕೋಶಾಧ್ಯಕ್ಷ ಡಾ. ಸೋಮಶೇಖರ, ಸುವರ್ಣಾ ವಾಘಮಾರೆ, ಜಗದೇವಿ ಭೋಸ್ಲೆ, ಚಾಮುಂಡೇಶ್ವರಿ ಚೀರಾ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನರಸಾರೆಡ್ಡಿ ಪೆÇಲೀಸ್ ಪಾಟೀಲ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...